ಮಂಗಳೂರು | ಜ.15ರಂದು ಅನುಪಮ ಮಾಸಿಕ ಓದುಗರ ಬೆಳ್ಳಿಹಬ್ಬ ಸಮಾವೇಶ

Date:

ಮಹಿಳೆಯರಿಂದ ಮಹಿಳೆಯರಿಗಾಗಿ ಪ್ರಕಟವಾಗುತ್ತಿರುವ ‘ಅನುಪಮ’ ಪತ್ರಿಕೆಯ ರಜತ ವರ್ಷದ ಅಂಗವಾಗಿ ಮಂಗಳೂರಿನ ಪುರಭವನದಲ್ಲಿ ಜ.15ರಂದು ಬೆಳಗ್ಗೆ 10ಕ್ಕೆ ಓದುಗರ ಸಮಾವೇಶ ನಡೆಯಲಿದೆ ಎಂದು ಅನುಪಮ ಮಾಸಿಕದ ಪ್ರಧಾನ ಸಂಪಾದಕಿ ಶಹನಾಝ್ ಎಂ. ತಿಳಿಸಿದ್ದಾರೆ.

ಮಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶವನ್ನು ಖ್ಯಾತ ಸಾಹಿತಿ ಡಾ.ಕೆ.ಶರೀಫಾ ಉದ್ಘಾಟಿಸಿ, 25ನೇ ವರ್ಷದ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಲಿರುವರು ಎಂದು ಮಾಹಿತಿ ನೀಡಿದರು.

ಗೌರವ ಅತಿಥಿಗಳಾಗಿ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಮುಖ್ಯ ಅತಿಥಿಗಳಾಗಿ ಮಂಗಳೂರು ನಗರ ಪೊಲೀಸ್ ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ, ಕರಾವಳಿ ಲೇಖಕಿ-ವಾಚಕಿಯರ ಸಂಘದ ಅಧ್ಯಕ್ಷೆ ಶಕುಂತಲಾ ಟಿ. ಶೆಟ್ಟಿ, ಬೆಥನಿ ಸೈಂಟ್ ತೆರೇಸಾ ಕಾಲೇಜಿನ ಪ್ರಾಂಶುಪಾಲೆ ಸಿಸ್ಟರ್ ಲೂರ್ಡ್ಸ್ ಅಂತ‌ರ್ ರಾಷ್ಟ್ರೀಯ ಚಿನ್ನದ ಪದಕ ವಿಜೇತೆ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ, ಆಪ್ತ ಸಮಾಲೋಚಕಿ ಡಾ.ರುಕ್ಸಾನ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯೆ ಸಮೀನಾ ಅಫ್ಸಾನ್ ವಹಿಸಲಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕಾರ್ಯಕ್ರಮದಲ್ಲಿ ಸಾಧಕರಾದ ಕೆ.ಎ.ರೋಹಿಣಿ, ಸರಸ ಬಿ. ಕೃಷ್ಣ ಕಮ್ಮರಡಿ, ಸಮಾಜ ಸೇವಕಿ ಹರಿಣಿ ಕೆ., ಆಯಿಶ ಇ. ಶಾಫಿಯವರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.

ಪ್ರತಿಭಾವಂತರಿಗೆ ಧ್ವನಿ ನೀಡಿದೆ: ಪತ್ರಿಕೋದ್ಯಮದಲ್ಲಿ ಈಗ ಮಹಿಳೆಯರೂ ತೊಡಗಿಸಿಕೊಂಡಿದ್ದು, ಮುಸ್ಲಿಮ್ ಮಹಿಳೆಯರ ಪಾಲುದಾರಿಕೆ ತುಂಬಾ ಕಡಿಮೆ. 2,000 ಇಸವಿಯಲ್ಲಿ ಮಂಗಳೂರಿನಿಂದ ಮುಸ್ಲಿಮ್ ಮಹಿಳೆಯರಿಂದಲೇ ‘ಅನುಪಮ’ ಎಂಬ ಮಾಸಪತ್ರಿಕೆ ಆರಂಭಗೊಂಡಿದ್ದು, ಜಾತಿ, ಜನಾಂಗ, ಮತ, ಧರ್ಮಗಳ ವ್ಯತ್ಯಾಸವಿಲ್ಲದೆ ಪ್ರತಿಭಾವಂತರಿಗೆ ಅನುಪಮ ಧ್ವನಿ ನೀಡಿದೆ ಎಂದು ಶಹನಾಝ್ ಎಂ ಅಭಿಪ್ರಾಯಪಟ್ಟರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸೋಮನಾಥ ಮಂದಿರ ಮರುನಿರ್ಮಾಣವನ್ನು ವಿರೋಧಿಸಿದ್ದರೇ ನೆಹರೂ? ಆ ಕಾಲಮಾನ ಯಾವುದು?

ಸುದ್ದಿಗೋಷ್ಠಿಯಲ್ಲಿ ಅನುಪಮದ ಉಪ ಸಂಪಾದಕಿ ಸಬೀಹಾ ಫಾತಿಮಾ, ಸಂಪಾದಕ ಮಂಡಳಿಯ ಸಮೀನಾ ಯು., ಸಾಜಿದಾ ಮೂಮಿನ್, ಕರಾವಳಿ ಲೇಖಕಿ-ವಾಚಕಿಯರ ಸಂಘದ ಸದಸ್ಯೆ ಸುಖಾಲಾಕ್ಷಿ, ಹಿದಾಯ ಫೌಂಡೇಶನ್ನ ಅಧ್ಯಕ್ಷೆ ಖುರ್ಷಿದಾ ಹಾಗೂ ಮುಝಾಹಿರ ಸಾಮಾಜಿಕ ಕಾರ್ಯಕರ್ತೆ ಹರಿಣಿ ಕೆ. ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...