ಮಂಗಳೂರು | ಪ್ರಾಪರ್ಟಿ ಕಾರ್ಡ್ ಮಾಡಿಸಲು ಲಂಚ: ಇಬ್ಬರು ಲೋಕಾಯುಕ್ತ ಬಲೆಗೆ

Date:

ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸಲು ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಮತ್ತು ದಲ್ಲಾಳಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ತನ್ನ ಹಾಗೂ ತನ್ನ ತಾಯಿಯ ಹೆಸರಲ್ಲಿರುವ ಕಂಕನಾಡಿ ಮತ್ತು ಬಜಾಲ್ ಗ್ರಾಮದ ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಮಾಡಿಸಲು 2025ರ ಫೆಬ್ರವರಿಯಲ್ಲಿ ಮಂಗಳೂರು ಯು.ಪಿ.ಒ.ಆರ್ ಕಚೇರಿಗೆ ಅರ್ಜಿ ಸಲ್ಲಿಸಲಾಗಿತ್ತು. ಬಳಿಕ ಸರ್ವೆಯರ್ ನಂದೀಶ್ 2025ರ ಎಪ್ರಿಲ್‌ನಲ್ಲಿ ಸರ್ವೆ ನಡೆಸಿ ಲಂಚಕ್ಕೆ ಬೇಡಿಕೆ ಸಲ್ಲಿಸಿದ್ದರು. 6,500 ರೂ.ವನ್ನು ಸರ್ವೆಯರ್ ಸ್ವತಃ ಸ್ವೀಕರಿಸಿದ್ದಲ್ಲದೆ, 20,000 ರೂ.ವನ್ನು ದಲ್ಲಾಳಿ ಬಿಜೈಯ ದಿವಾಕರ್ ಮೂಲಕ ಪಡೆದುಕೊಂಡಿದ್ದರು.

ನಂತರ ಸರ್ವೆಯರ್ ನಂದೀಶ್ ಎರಡೂ ಗ್ರಾಮದ ಎರಡೂ ಸ್ಥಳಗಳ ಸಿಂಗಲ್ ಸೈಟ್ ನಕ್ಷೆ ಮತ್ತು ಪ್ರಾಪರ್ಟಿ ಕಾರ್ಡ್ ನೀಡಲು ಹೆಚ್ಚುವರಿಯಾಗಿ 18,000 ರೂ. ನೀಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಸಾಕ್ಷಿಯೊಂದಿಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬ್ಯಾನ್ ಆಗಿರುವ ಭ್ರಷ್ಟ ಸಂಸ್ಥೆಯಿಂದಲೇ ಪರೀಕ್ಷೆ ನಡೆಸಿದ ಕೀರ್ತಿ ಮೋದಿ ಸರ್ಕಾರದ್ದು

ಸರ್ವೆಯರ್ ನಂದೀಶ್ ಇದೇ ತಿಂಗಳಲ್ಲಿ ಮತ್ತೆ 15,000 ರೂ.ವನ್ನು ದಿವಾಕರ್ ಮೂಲಕ ಪಡೆದು ಕೊಂಡಿದ್ದರು. ಹೀಗೆ ಒಟ್ಟು 41,500 ರೂ.ವನ್ನು ಪಡೆದುಕೊಂಡು ಬುಧವಾರ ಮತ್ತೆ 2,000 ರೂ. ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...