ಮಂಗಳೂರು | ಪಾವೂರು ಗ್ರಾಮ ಪಂಚಾಯತ್‌ನಲ್ಲಿ BSWT ಹೊಲಿಗೆ ತರಬೇತಿ ಶಿಬಿರಕ್ಕೆ ಚಾಲನೆ

Date:

ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವದ ಪ್ರಯುಕ್ತ ಪಾವೂರು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಆಯೋಜಿಸಲಾದ BSWT ಉಚಿತ ಟೈಲರಿಂಗ್ ತರಬೇತಿ ಶಿಬಿರಕ್ಕೆ ಚಾಲನೆ ನೀಡಲಾಯಿತು.

ರಿಬ್ಬನ್ ಕತ್ತರಿಸುವ ಮೂಲಕ ಖದೀಜಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಅಶ್ರಫ್ ಎಂ.ಸಿ. ಅವರು ಸಾಂಕೇತಿಕವಾಗಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಹಿತವಚನ ನೀಡಿದ ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷರಾದ ಎನ್. ಆಮೀನ್ ಅವರು, “ಮಹಿಳೆಯರಿಗೆ ಕೌಶಲ್ಯಾಧಾರಿತ ತರಬೇತಿ ನೀಡುವುದರಿಂದ ಅವರಲ್ಲಿ ಆತ್ಮವಿಶ್ವಾಸ ಹಾಗೂ ಆರ್ಥಿಕ ಸ್ವಾವಲಂಬನೆ ಹೆಚ್ಚುತ್ತದೆ. ಸಮಾಜದ ಹಿಂದುಳಿದ ವರ್ಗದ ಮಹಿಳೆಯರನ್ನು ಸಬಲೀಕರಣಗೊಳಿಸುವುದು ನಮ್ಮ ಟ್ರಸ್ಟ್‌ನ ಮುಖ್ಯ ಉದ್ದೇಶ. ಟೈಲರಿಂಗ್ ತರಬೇತಿ ಅದರ ಒಂದು ಪ್ರಮುಖ ಹೆಜ್ಜೆಯಾಗಿದೆ. ಸ್ವಾವಲಂಬಿ ಬದುಕಿಗೆ ಸ್ವಾಭಿಮಾನದ ಉಡುಗೊರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2026 01 14 at 6.33.29 PM

ಪಾವೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಶಶಿಕಾಂತ್ ಅವರು ಭಾಗವಹಿಸಿ ಕಾರ್ಯಕ್ರಮಕ್ಕೆ ಸ್ವಾಗತ ಕೋರಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, “ಗ್ರಾಮ ಮಟ್ಟದಲ್ಲಿ ಇಂತಹ ತರಬೇತಿ ಶಿಬಿರಗಳು ಮಹಿಳೆಯರ ಬದುಕಿನಲ್ಲಿ ಹೊಸ ದಾರಿ ತೆರೆದುಕೊಳ್ಳುತ್ತವೆ. ಟ್ರಸ್ಟ್ ಹಾಗೂ ಪಂಚಾಯತ್ ನೀಡಿದ ಸಹಕಾರದಿಂದ ತರಬೇತಿಯಿಂದ ಮಹಿಳೆಯರು ಪ್ರಯೋಜನ ಪಡೆದು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಮಂಗಳೂರು | ಜ.15ರಂದು ಅನುಪಮ ಮಾಸಿಕ ಓದುಗರ ಬೆಳ್ಳಿಹಬ್ಬ ಸಮಾವೇಶ

ಕಾರ್ಯಕ್ರಮದ ಅಂತ್ಯದಲ್ಲಿ ತರಬೇತುಗಾರ್ತಿಯಾದ ಮಾಲ್ಕಕ್ಷಿ ರಾಜೀವ್ ಅವರು ಧನ್ಯವಾದ ಅರ್ಪಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಮೆಹರುನ್ನಿಸಾ, ಪಂಚಾಯತ್ ಸದಸ್ಯರಾದ ರಿಯಾಝ್ ಅಹ್ಮದ್ ಪಾವೂರು, ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಉಪಾಧ್ಯಕ್ಷರಾದ ನಿಯಾಝ್ ಪೆರ್ಲ, ವಕೀಲರಾದ ಕೆ. ಮುಹಮ್ಮದ್ ಝಮೀರ್, ಶಿಕ್ಷಕರಾದ ಅಶೀರುದ್ದೀನ್ ಸಾರ್ತಬೈಲ್, ಪಾವೂರು ಪಂಚಾಯತ್ ಸಿಬ್ಬಂದಿಗಳು, ಕಾರ್ಯನಿರ್ವಾಹಕರು, ಸ್ಥಳೀಯರು ಹಾಗೂ ಹೊಲಿಗೆ ತರಬೇತಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

WhatsApp Image 2026 01 14 at 6.33.28 PM 2
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...