ಮಂಗಳೂರು | ಸಿಸಿಬಿ ಭರ್ಜರಿ ಕಾರ್ಯಾಚರಣೆ: 119 ಕೆಜಿ ಗಾಂಜಾ ವಶ, ನಾಲ್ವರು ಆರೋಪಿಗಳು​ ಸೆರೆ

Date:

ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 119 ಕೆಜಿ ಗಾಂಜಾ ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮೊಯ್ದಿನ್ ಶಬ್ಬಿರ್ (38), ಅಲುಯಾ ಜಿಲ್ಲೆಯ ಅಜಯ್ ಕೃಷ್ಣ(33), ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯ ಮಹೇಶ್ ದ್ವಾರಿಕಾನಾಥ ಪಾಂಡೆ (30) ಮತ್ತು ಹರಿಯಾಣ ರಾಜ್ಯದ ಜಿಂದ್ ಜಿಲ್ಲೆಯ ಜೀವನ್ ಸಿಂಗ್(35) ಬಂಧಿತ ಆರೋಪಿಗಳು.

ನಿನ್ನೆ (ಫೆ.17) ಮಂಗಳೂರು ನಗರಕ್ಕೆ ಆಂಧ್ರಪ್ರದೇಶ ರಾಜ್ಯದಿಂದ ಗೂಡ್ಸ್‌ ಟೆಂಪೋ ವಾಹನದಲ್ಲಿ ಹಾಗೂ ಕಾರಿನಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಉಳ್ಳಾಲ ತಾಲೂಕಿನ ಕುರ್ನಾಡು ಗ್ರಾಮದ ಮಿತ್ತಕೋಡಿ ಬಳಿ ಎರಡೂ ವಾಹನಗಳನ್ನು ಗುರುತಿಸಿ, ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದನ್ನು ಸಿಸಿಬಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳು ಗಾಂಜಾ ಸಾಗಾಟಕ್ಕೆ ಉಪಯೋಗಿಸಿದ ವಾಹನವನ್ನು ಹಾಗೂ ಈ ವಾಹನಗಳಲ್ಲಿ ಸಾಗಿಸುತ್ತಿದ್ದ ರೂ.35 ಲಕ್ಷ ಮೌಲ್ಯದ 119 ಕೆ.ಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ ಬಂಧಿತರಿಂದ 5 ಮೊಬೈಲ್ ಫೋನ್​ಗಳು, ಮೀನು ಸಾಗಾಟಕ್ಕೆ ಉಪಯೋಗಿಸುವ ಮೀನಿನ ಕ್ರೆಟ್ ಹಾಗೂ ಇತರ ವಸ್ತುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮಂಗಳೂರು | ಸಂಶೋಧನೆ, ಅಭಿವೃದ್ಧಿ ಚಟುವಟಿಕೆ ಹೆಚ್ಚಿಸುವ ಉದ್ದೇಶದಿಂದ ತಿಳುವಳಿಕಾ ಒಡಂಬಡಿಕೆಗೆ ಸಹಿ

ಆರೋಪಿಗಳು ಈಗಾಗಲೇ ಆಯಾ ರಾಜ್ಯಗಳಲ್ಲಿ ಗಾಂಜಾ ಖರೀದಿ ಹಾಗೂ ಮಾರಾಟದ ಆರೋಪಗಳನ್ನು ಎದುರಿಸುತ್ತಿದ್ದು, ಪ್ರಕರಣಗಳು ದಾಖಲಾಗಿವೆ. ಈ ಬೃಹತ್ ಗಾಂಜಾ ಮಾರಾಟ, ಸಾಗಣೆ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...