ಮಂಗಳೂರು | ಸ್ಥಳೀಯ ಜನಪ್ರತಿನಿಧಿಗಳು, ಪಂಚಾಯತ್ ಸಿಬ್ಬಂದಿಗಳ ಕ್ರೀಡಾಕೂಟದ ಸಂಭ್ರಮ

Date:

ಮಂಗಳೂರು ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಶನಿವಾರ (ಮಾ.2) ನಡೆದ ಕ್ರೀಡಾಕೂಟ ಮಾಮೂಲಿ ಕ್ರೀಡಾಕೂಟಕ್ಕಿಂತ ಭಿನ್ನವಾಗಿತ್ತು. ಇಲ್ಲಿ ಭಾಗವಹಿಸಿದವರು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪಂಚಾಯತ್ ಸಿಬ್ಬಂದಿ.

ಗ್ರಾಮ ಸ್ವರಾಜ್ ಪ್ರತಿಷ್ಠಾನದ ವತಿಯಿಂದ ಸ್ಥಳೀಯ ಪಂಚಾಯತ್, ನಗರಾಡಳಿತ ಸದಸ್ಯರಿಗಾಗಿ ಹಾಗೂ ಸಿಬ್ಬಂದಿಗಾಗಿ ಆಯೋಜಿಸಲಾದ ಹೊಂಬೆಳಕು ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳು, ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು.

ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ,  ನಗರ ಪಾಲಿಕೆಯ ಸದಸ್ಯರು ಪಕ್ಷ ಭೇದ ಮರೆತು ಕ್ರೀಡಾ ಕೂಟದಲ್ಲಿ ಭಾಗಿಯಾದರು. ವಿಧಾನ ಪರಿಷತ್ ಸದಸ್ಯ ಹಾಗೂ ಗ್ರಾಮ ಸ್ವಾರಾಜ್ ಪ್ರತಿಷ್ಠಾನದ ಅಧ್ಯಕ್ಷ  ಡಾ.ಮಂಜುನಾಥ್ ಭಂಡಾರಿ ಅವರ ನೇತೃತ್ವದಲ್ಲಿ ಈ ಹೊಂಬೆಳಕು ಕ್ರೀಡಾಕೂಟ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾಲಿಬಾಲ್, ತ್ರೋಬಾಲ್, ತೆಂಗಿನಕಾಯಿ ಎಸೆತ, ಗೋಣಿಚೀಲ ಓಟ, ಹಗ್ಗ ಜಗ್ಗಾಟ, ಸೇರಿದಂತೆ ವಿವಿಧ ಆಟ, ಮನರಂಜನಾ ಆಟಗಳನ್ನು ಆಯೋಜಿಸಲಾಗಿತ್ತು. ಈ ವೇಳೆ ಹಿರಿಯ ಪಂಚಾಯತ್ ಸದಸ್ಯರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಪ್ರತ್ಯೇಕ ಸಾಂಸ್ಕೃತಿಕ ವೇದಿಕೆಯ ಮೂಲಕ ನಿರಂತರ ಸಾಂಸ್ಕೃತಿಕ ಮನರಂಜನೆಯನ್ನು ಉಣಬಡಿಸಲಾಯಿತು. ವಿವಿಧ ಸ್ಥರಗಳ ಪಂಚಾಯತ್ ಪ್ರತಿನಿಧಿಗಳಿಗೆ ಪರಸ್ಪರ ಪರಿಚಯ, ಒಡನಾಟ ಮೂಡಿಸಲು ಈ ಕ್ರೀಡಾಕೂಟ ಸಹಕಾರಿಯಾಯಿತು ಎಂದು ಭಾಗಿಯಾಗಿದ್ದವರು ಹರ್ಷ ವ್ಯಕ್ತಪಡಿಸಿದರು.

ಕ್ರೀಡಾಕೂಟದಲ್ಲಿ ಭಾಗವಹಿಸಿದವರಿಗೆಲ್ಲ ಅಚ್ಚುಕಟ್ಟಾದ  ಊಟೋಪಚಾರದ ವ್ಯವಸ್ಥೆ ಕೂಡ ಮಾಡಲಾಗಿತ್ತು. ಎರಡೂ ಜಿಲ್ಲೆಗಳಿಂದ ನಾಲ್ಕು ಸಾವಿರದಷ್ಟು ಮಂದಿ ಕ್ರೀಡಾಕೂಟದಲ್ಲಿ ಭಾಗಿಯಾದರು. ಬಿಸಿಲಿನ ಬೇಗೆಯಲ್ಲೂ ಸ್ಪರ್ಧಾಳುಗಳು ಉತ್ಸಾಹದಿಂದ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...