ಮಂಗಳೂರು | ಚೆಂಬುಗುಡ್ಡೆ ಅಪಘಾತ: ಟ್ಯಾಂಕರ್‌ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

Date:

ಅಸಮರ್ಪಕ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ವೇಳೆ ಟ್ಯಾಂಕರ್‌ವೊಂದರ ಅಡಿಗೆ ಬಿದ್ದ ಪರಿಣಾಮ, ಹಿಂಬದಿ ಸವಾರರಾಗಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಸಮೀಪದ ತೊಕ್ಕೊಟ್ಟುವಿನ ಚೆಂಬುಗುಡ್ಡೆ ಬಳಿ ಕಳೆದ ಶನಿವಾರ(ನ.9) ಸಂಜೆ 5ರ ಸುಮಾರಿಗೆ ನಡೆದಿತ್ತು. ಈ ಭೀಕರ ಘಟನೆಯ ದೃಶ್ಯವು ಟ್ಯಾಂಕರ್‌ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಶನಿವಾರ ಈ ಘಟನೆಯು ತೊಕ್ಕೊಟ್ಟು – ಚೆಂಬುಗುಡ್ಡೆ ರಸ್ತೆಯಲ್ಲಿ ನಡೆದಿತ್ತು. ಮೃತಪಟ್ಟ ಮಹಿಳೆಯನ್ನು ಹಿಂಬದಿ ಸವಾರರಾಗಿದ್ದ ಸುರತ್ಕಲ್ ಸಮೀಪದ ಕುಳಾಯಿಯ ಮಹಿಳೆ ರಹಮತ್(47) ಎಂದು ಗುರುತಿಸಲಾಗಿತ್ತು. ಬೈಕ್ ಸವಾರರಾಗಿದ್ದ ಅವರ ಪತಿ ಅಬ್ದುಲ್ ರಶೀದ್ ಪ್ರಾಣಾಪಾಯದಿಂದ ಪಾರಾಗಿದ್ದರು.

ಪತಿ ರಶೀದ್ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಯಲ್ಲಿ ಇಲೆಕ್ಟ್ರಿಕಲ್ ವಿಭಾಗದ ಸಿಬ್ಬಂದಿಯಾಗಿದ್ದು, ಶನಿವಾರ ಸಂಜೆ ಸುಮಾರು 4:30ಕ್ಕೆ ತನ್ನ ಸ್ಕೂಟರ್‌ನಲ್ಲಿ ತನ್ನ ಪತ್ನಿ ರಹಮತ್ ಅವರನ್ನು ಕುಳ್ಳಿರಿಸಿ ದೇರಳಕಟ್ಟೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದರು. ತೊಕ್ಕೊಟ್ಟು-ಚೆಂಬುಗುಡ್ಡೆಯ ಸೇವಾ ಸೌಧದ ಬಳಿ ಹದಗೆಟ್ಟ ರಸ್ತೆಯ ಗುಂಡಿಯಿಂದ ಪಾರಾಗಲು ರಶೀದ್ ಹರಸಾಹಸ ಪಡುತ್ತಿದ್ದಂತೆಯೇ ನಿಯಂತ್ರಣ ಕಳಕೊಂಡು ಸ್ಕೂಟರ್ ಸ್ಕಿಡ್ಡಾಗಿ ಬಿದ್ದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರಿಂದ ಸ್ಕೂಟರ್ ಹಿಂಬದಿ ಕುಳಿತಿದ್ದ ರಹಮತ್ ರಸ್ತೆಗೆ ಎಸೆಯಲಟ್ಟಿದ್ದರು. ಈ ವೇಳೆ ಆದೇ ರಸ್ತೆಯಲ್ಲಿ ಎದುರಿನಲ್ಲಿ ಸಾಗುತ್ತಿದ್ದ ಟ್ಯಾಂಕರ್ ಅಡಿಗೆ ರಹ್ಮತ್‌ ಅವರ ಬಿದ್ದಿದ್ದರಿಂದ ಅವರ ಮೇಲೆಯೇ ಹರಿದಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದರು.

ಘಟನೆ ನಡೆದ ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ಘೋಷಿಸಲಾಗಿತ್ತು. ಘಟನೆಯ ಬಳಿಕ ಸ್ಥಳದಲ್ಲಿ ನೂರಾರು ಸಾರ್ವಜನಿಕರು ಆಕ್ರೋಶಗೊಂಡು ಸೇರಿ ಶಾಸಕ ಯು ಟಿ ಖಾದರ್ ಸೇರಿದಂತೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದರು.

ಅಪಘಾತ ಘಟನೆ ನಡೆದ ಶನಿವಾರ ರಾತ್ರಿಯೇ ಡಿವೈಎಫ್‌ಐ ಕಾರ್ಯಕರ್ತರು ಕೂಡ ಶಾಸಕ ಯು ಟಿ ಖಾದರ್ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಜನರ ಆಕ್ರೋಶದ ಬೆಂಕಿಯನ್ನು ಅರಿತ, ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಸ್ಪೀಕರ್ ಹಾಗೂ ಶಾಸಕ ಯು ಟಿ ಖಾದರ್, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ನಿರ್ದೇಶನ ನೀಡಿ, ಕೂಡಲೇ ರಸ್ತೆಯನ್ನು ಸರಿಪಡಿಸಲು ಸೂಚನೆ ನೀಡಿದ್ದರಿಂದ, ತಾತ್ಕಾಲಿಕವಾಗಿ ಗುಂಡಿ ಮುಚ್ಚಲಾಗಿತ್ತು.

ಆದರೆ, ನೂರಾರು ವಾಹನಗಳ ಸಂಚಾರ ಇರುವ ರಸ್ತೆಯಲ್ಲಿ, ಮರುದಿನವೇ ಹಾಕಿದ್ದ ತಾತ್ಕಾಲಿಕ ಕಾಂಕ್ರೀಟ್ ಎದ್ದು ಹೋಗಿರುವುದಾಗಿ ಸ್ಥಳೀಯರು ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು | ಚೆಂಬುಗುಡ್ಡೆ ರಸ್ತೆ ಅವ್ಯವಸ್ಥೆ: ಗುಂಡಿ ಮುಚ್ಚಲು ಮಹಿಳೆಯ ಜೀವವೇ ಹೋಗಬೇಕಾಯಿತು!

ಇದೀಗ ಶನಿವಾರ ನಡೆದ ಚೆಂಬುಗುಡ್ಡೆ ಅಪಘಾತ ಘಟನೆಯು ಟ್ಯಾಂಕರ್‌ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋದಲ್ಲಿ ಹದಗೆಟ್ಟ ರಸ್ತೆಯ ಗುಂಡಿಯಿಂದ ಪಾರಾಗಲು ರಶೀದ್ ಹರಸಾಹಸ ಪಡುತ್ತಿದ್ದಂತೆಯೇ ನಿಯಂತ್ರಣ ಕಳಕೊಂಡು ಸ್ಕೂಟರ್ ಸ್ಕಿಡ್ಡಾಗಿ ಬಿದ್ದಾಗ, ಮಹಿಳೆ ರಹಮತ್ ಅವರು ರಸ್ತೆಗೆ ಬಿದ್ದಿದ್ದಾರೆ.

IMG 20241110 WA0072

ಈ ವೇಳೆ ತಲೆಗೆ ಧರಿಸಿದ್ದ ಹೆಲ್ಮೆಟ್ ಹಾರಿ ಹೋದಾಗಲೇ, ತಲೆಯ ಮೇಲೆ ಟ್ಯಾಂಕರ್‌ನ ಚಕ್ರ ಹರಿದಿರುವುದು ಸೆರೆಯಾಗಿದೆ. ಸುಮಾರು 30 ಸೆಕೆಂಡ್‌ನ ವಿಡಿಯೋ ದೃಶ್ಯ ಭೀಕರವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...