ಮಂಗಳೂರು | ಬೀದಿಬದಿ ವ್ಯಾಪಾರಿಗಳ ಹೋರಾಟ ಹತ್ತಿಕ್ಕಲು ಶಾಸಕ ಕಾಮತ್ ಕುಮ್ಮಕ್ಕು: ಸಿಐಟಿಯು ಸುನಿಲ್ ಕುಮಾರ್ ಬಜಾಲ್ ಆಕ್ರೋಶ

Date:

ಬೀದಿಬದಿ ವ್ಯಾಪಾರಿಗಳ ನಡುವಿನ ಐಕ್ಯತೆ ಮುರಿದು ಅವರನ್ನು ಅತಂತ್ರಗೊಳಿಸಿ, ಅವರ ಹೋರಾಟವನ್ನು ಹತ್ತಿಕ್ಕಲು ಶಾಸಕ ವೇದವ್ಯಾಸ ಕಾಮತ್‌ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌(ಸಿಐಟಿಯು)ನ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಆಕ್ರೋಶ ಹೊರಹಾಕಿದರು.

ಜಿಲ್ಲೆಯ ಮಂಗಳೂರು ನಗರದ ಬೀದಿ ವ್ಯಾಪಾರ ವಲಯದ ಎದುರು ಸಿಐಟಿಯು ನೇತೃತ್ವದ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

“ಅಸುರಕ್ಷಿತ, ಅವೈಜ್ಞಾನಿಕ ಹಾಗೂ ಅಸಮರ್ಪಕ ಬೀದಿ ವ್ಯಾಪಾರ ವಲಯದಲ್ಲಿ ವ್ಯಾಪಾರ ಮಾಡಲು ಬಲವಂತ ಮಾಡುತ್ತಿರುವ ಅಧಿಕಾರಿಗಳು ಮತ್ತು ಕೆಲವು ಸ್ಥಾಪಿತ ಹಿತಾಸಕ್ತಿಗಳ ಜತೆಗೆ ಶಾಸಕ ವೇದವ್ಯಾಸ ಕಾಮತ್, ಬೀದಿ ವ್ಯಾಪಾರಿಗಳ ಮುಂಗೈಗೆ ಬೆಲ್ಲ ಹಚ್ಚಿ ಬಡ ಬೀದಿ ವ್ಯಾಪಾರಿಗಳಿಗೆ ಸಂಕಷ್ಟ ತಂದೊಡ್ಡಿದ್ದಾರೆ. ಬೀದಿ ವ್ಯಾಪಾರ ವಲಯ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ” ಎಂದು ಬಜಾಲ್‌ ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 01 13 at 5.59.10 PM

“ಬೀದಿ ವ್ಯಾಪಾರಿಗಳ ಹಕ್ಕುಗಳನ್ನು ರಕ್ಷಣೆ ಮಾಡಲು ಹೋರಾಟವನ್ನು ಮತ್ತಷ್ಟು ತೀವ್ರಗೋಳಿಸುತ್ತೇವೆ” ಎಂದು ಸುನಿಲ್ ಕುಮಾರ್ ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ?: ಮಂಗಳೂರು | ತಣ್ಣೀರುಬಾವಿ ಕಡಲ ಕಿನಾರೆಯಲ್ಲಿ ಬೀಚ್ ಉತ್ಸವ ಸಮಾರೋಪ

ಸಂಘದ ಗೌರವಧ್ಯಕ್ಷ ಬಿ ಕೆ ಇಮ್ತಿಯಾಜ್ ಮಾತನಾಡಿ, “ನಗರದ ಹೃದಯ ಭಾಗದಲ್ಲಿರುವ ಬೀದಿ ವ್ಯಾಪಾರ ನಾಲ್ಕು ವಾರ್ಡ್‌ಗಳಲ್ಲಿ ಹರಡಿಕೊಂಡಿದೆ. ಕೇವಲ ಒಂದು ವಾರ್ಡಿನ ಬೀದಿ ವ್ಯಾಪಾರಿಗಳನ್ನು ವಲಯದ ಒಳಗೆ ಕಳುಹಿಸಿ ಅವರನ್ನು ನಷ್ಟಕ್ಕೆ ತಳ್ಳುವ ಬೀದಿ ವ್ಯಾಪಾರ ವಲಯ ನಿರ್ಮಾಣವನ್ನೇ ಬಿಜೆಪಿ ಸಾಧನೆಯೆಂದು ಬಿಂಬಿಸಲು ಹೊರಟಿದೆ. ರಾಜ್ಯದ ವಿವಿಧ ನಗರಗಳಲ್ಲಿ ನಿರ್ಮಾಣಗೊಂಡಿರುವ ವ್ಯಾಪಾರ ವಲಯ ಒಂದೇ ಸೂರಿನಡಿಯಲ್ಲಿ ಹಣ್ಣು, ತರಕಾರಿ ಮತ್ತು ಆಹಾರ ಮತ್ತಿತರ ವ್ಯಾಪಾರಿಗಳಿಗೆ ಪ್ರತ್ಯೇಕ ವಿಭಾಗಗಳನ್ನು ಮಾಡಿ ನಿರ್ಮಿಸಲಾಗಿದೆ. ಮಂಗಳೂರಿನ ವ್ಯಾಪಾರ ವಲಯದಲ್ಲೇ ಆಹಾರ ತಯಾರಿಸಿ ಮಾರಾಟ ಮಾಡಲು ಅವಕಾಶ ನೀಡಿರುವುದರಿಂದ ಗ್ಯಾಸ್ ಅವಘಡ ಸಂಭವಿಸಿದರೆ ಅನಾಹುತಕ್ಕೆ ಯಾರು ಹೊಣೆ” ಎಂದು ಪ್ರಶ್ನಿಸಿದರು.

WhatsApp Image 2025 01 13 at 5.59.09 PM 1

ಪ್ರತಿಭಟನೆ ವೇಳೆ ಸಂಘದ ಮುಖಂಡ ವಿಜಯ ಜೈನ್, ಸಿಕಂದರ್ ಬೇಗ್, ಹಂಝ, ಶಿವಪ್ಪ, ಹಸನ್ ಕುದ್ರೋಳಿ, ರಫೀಕ್, ಮೇಬಲ್ ಡಿ ಸೋಜ, ಫೀಲೋಮಿನ, ಅಬ್ದುಲ್ ಖಾದರ್, ಹನೀಫ್ ಬೆಂಗ್ರೆ, ಗುಡ್ಡಪ್ಪ, ಮುತ್ತುರಾಜ್, ಗಂಗಮ್ಮ ಮುಂತಾದವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...