ಮಂಗಳೂರು | ಸಾರ್ವಜನಿಕರ ಎದುರಲ್ಲೇ ಹೊಡೆದಾಡಿಕೊಂಡ ಖಾಸಗಿ ಬಸ್‌ ಸಿಬ್ಬಂದಿ: ವಿಡಿಯೋ ವೈರಲ್

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಖಾಸಗಿ ಸಿಟಿ ಬಸ್‌ ಸಿಬ್ಬಂದಿಗಳು ಸಾರ್ವಜನಿಕರ ಎದುರಲ್ಲೇ ಹೊಡಿದಾಡಿಕೊಂಡ ಘಟನೆ ನಡೆದಿದೆ. ಘಟನೆಯ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ಘಟನೆಯು ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಓವರ್ ಬ್ರಿಡ್ಜ್‌ ಬಳಿ ಬುಧವಾರ ಸಂಜೆ ನಡೆದಿರುವುದಾಗಿ ತಿಳಿದುಬಂದಿದೆ.

ಕೇರಳ ಕರ್ನಾಟಕದ ಗಡಿಭಾಗವಾದ ತಲಪಾಡಿಯಿಂದ ಮಂಗಳೂರು ನಡುವೆ ಚಲಿಸುವ ಖಾಸಗಿ ಸಿಟಿ ಬಸ್ ಮತ್ತು ಮಂಜೇಶ್ವರದ ಹೊಸಂಗಡಿ ಜಂಕ್ಷನ್‌ನಿಂದ ಮಂಗಳೂರು ನಡುವೆ ಸಂಚರಿಸುವ ಖಾಸಗಿ ಸರ್ವಿಸ್ ಬಸ್ ನಿರ್ವಾಹಕರ ನಡುವೆ ಈ ಹೊಯ್ ಕೈ ನಡೆದಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಈ ಬೀದಿ ಜಗಳದ ವಿಡಿಯೋವನ್ನು ಬಸ್‌ನ ಹಿಂಬದಿಯಲ್ಲಿ ನಿಲ್ಲಿಸಿದ್ದ ಕಾರೊಂದರಲ್ಲಿದ್ದವರು ಸೆರೆ ಹಿಡಿದಿದ್ದು, ಅದು ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ತಲಪಾಡಿಯಿಂದ ಮಂಗಳೂರಿಗೆ ಧಾವಿಸುತ್ತಿದ್ದ ಬಸ್ಸನ್ನು ಬೆನ್ನಟ್ಟಿದ ಬಸ್ ಚಾಲಕ, ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಅಡ್ಡಲಾಗಿ ಇಟ್ಟಿದ್ದಾನೆ. ಈ ವೇಳೆ ಎರಡು ಬಸ್ಸು ನಿರ್ವಾಹಕರ ನಡುವೆ ಮಾತಿನ ಚಕಮಕಿ ನಡೆದು, ಹೊಯ್ ಕೈ ನಡೆದಿರುವುದಾಗಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಘಟನೆಯು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ. ಬಸ್ ನಿರ್ವಾಹಕರಾದ ಅಜಯ್ ಮತ್ತು ವಿಷ್ಣು ಎಂಬವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಓವರ್ ಟೇಕ್ ವಿಚಾರದಲ್ಲಿ ಜಗಳ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕರಾವಳಿ ಜಿಲ್ಲೆಗಳಾದ ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಖಾಸಗಿ ಸಿಟಿ ಹಾಗೂ ಕಾಂಟ್ರ್ಯಾಕ್ಟ್‌ ಕ್ಯಾರೇಜ್‌ ಬಸ್‌ಗಳು ಕಾರ್ಯಾಚರಿಸುತ್ತಿವೆ. ಖಾಸಗಿ ಬಸ್‌ ಚಾಲಕ, ನಿರ್ವಾಹಕರ ನಡುವೆ ‘ಟೈಮಿಂಗ್ಸ್’ ವಿವಾದವು ಹಲವು ವರ್ಷಗಳಿಂದ ಇದೆ. ಇದರಿಂದಾಗಿ ನಿತ್ಯ ಗಲಾಟೆಗಳಾಗುತ್ತಿದ್ದು ಬಸ್ಸು ಪ್ರಯಾಣಿಕರು ಮತ್ತು ಸಾರ್ವಜನಿಕರು ನಿತ್ಯ ಕಿರಿಕಿರಿ, ಸಮಸ್ಯೆ ಅನುಭವಿಸುವಂತಾಗಿದೆ.

ಇಂತಹ ಘಟನೆಗಳಿಗೆ ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆಯವರು ಕಡಿವಾಣ ಹಾಕಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...