ಮಂಗಳೂರು | ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ

Date:

ಮಂಗಳೂರಿನ ಕೋಟೆಕಾರ್ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಗೆ ಕಳೆದ ಶುಕ್ರವಾರ ನುಗ್ಗಿ, ಸಿಬ್ಬಂದಿಯನ್ನು ಬೆದರಿಸಿ ಕೋಟ್ಯಂತರ ಮೌಲ್ಯದ ಚಿನ್ನ ಹಾಗೂ ನಗದು ದರೋಡೆಗೈದು ಪರಾರಿಯಾಗಿದ್ದ ಐವರ ಪೈಕಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್‌ ಕಮಿಷನ‌ರ್ ಸೋಮವಾರ ತಿಳಿಸಿದ್ದಾರೆ.

ಕಾರೊಂದರಲ್ಲಿ ಬಂದಿದ್ದ ಐವರು ಮುಸುಕುಧಾರಿಗಳ ತಂಡ ಬ್ಯಾಂಕ್ ಸಿಬ್ಬಂದಿಗೆ ಬಂದೂಕು ಹಾಗೂ ತಲವಾರು ತೋರಿಸಿ ಬೆದರಿಸಿ ಈ ದರೋಡೆ ನಡೆಸಿದ್ದರು.

ಮುರುಗನ್, ಪ್ರಕಾಶ್, ಮನಿವಣ್ಣನ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಘಟನೆ ನಡೆದು ನಾಲ್ಕು ದಿನಗಳ ಬಳಿಕ ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರಿನ ಪೊಲೀಸರು ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಆರ್‌ಜಿ ಕರ್ ಅತ್ಯಾಚಾರ- ಕೊಲೆ ಪ್ರಕರಣ | ಆರೋಪಿ ಸಂಜಯ್ ರಾಯ್ ತಪಿತಸ್ಥ; ಕೋರ್ಟ್ ಘೋಷಣೆ

“ಕೇರಳದ ಮೂಲಕ ತಮಿಳುನಾಡಿಗೆ ಹೋಗಿದ್ದ ಆರೋಪಿಗಳು, ಕೃತ್ಯಕ್ಕೆ ಮಹಾರಾಷ್ಟ್ರ ಮೂಲದ ಕಾರು ಬಳಸಿದ್ದರು. ದರೋಡೆ ಮಾಡಿದ ನಂತರ ಆರೋಪಿಗಳು ತಮಿಳುನಾಡಿನ ತಿರುವನ್ವೇಲಿಗೆ ತೆರಳಿದ್ದರು. ಬಂಧಿತರಿಂದ ತಲ್ವಾರ್, 2 ಪಿಸ್ತೂಲ್ ಹಾಗೂ ಇತರ ಸೊತ್ತುಗಳನ್ನು ಜಪ್ತಿ ಮಾಡಲಾಗಿದೆ. ಇನ್ನುಳಿದ ಇಬ್ಬರು ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಆರೋಪಿಗಳಿಗೆ ಸ್ಥಳೀಯರು ಕೂಡ ಸಹಕಾರ ನೀಡಿರುವ ಬಗ್ಗೆ ಅನುಮಾನವಿದೆ. ಪೊಲೀಸ್ ಕಸ್ಟಡಿಗೆ ತೆಗೆದುಕೊಂಡ ನಂತರ ವಿಚಾರಣೆ ನಡೆಸುತ್ತೇವೆ” ಎಂದು ಮಂಗಳೂರು ನಗರ ಪೊಲೀಸ್‌ ಕಮಿಷನ‌ರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ವಿಡಿಯೋ ಕೃಪೆ: ಸನ್ಮಾರ್ಗ ನ್ಯೂಸ್

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...