ಮಂಗಳೂರು | ಬದುಕಲಂತೂ ಬಿಡುತ್ತಿಲ್ಲ, ಸಾಯುವುದಕ್ಕಾದರೂ ಅನುಮತಿ ಕೊಡಿ: ರಾಷ್ಟ್ರಪತಿಗೆ ವೃದ್ಧ ದಂಪತಿ ಪತ್ರ

Date:

ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡು ಬದುಕುತ್ತಿದ್ದ ವೃದ್ಧ ದಂಪತಿಗಳ ಮನೆಯನ್ನು ಅಧಿಕಾರಿಗಳು ಏಕಾಏಕಿ ಧ್ವಂಸಗೊಳಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಮನೆ ಕಳೆದುಕೊಂಡು ನಿರಾಶ್ರಿತರಾಗಿರುವ ದಂಪತಿ, ಅಧಿಕಾರಿಗಳು ನಮ್ಮನ್ನು ಬದುಕಲಂತೂ ಬಿಡುತ್ತಿಲ್ಲ. ನಾವು ಕಂಗಾಲಾಗಿದ್ದೇವೆ. ನಮಗೆ ದಯಾಮರಣ ಕೊಡಿ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮ ಅವರಿಗೆ ಪತ್ರ ಬರೆದಿದ್ದಾರೆ.

ಮೂಲತಃ ಚಿತ್ರದುರ್ಗ ಜಿಲ್ಲೆಯವರಾದ ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿಗಳಿಗೆ ಯಾವುದೇ ಪಿತ್ರಾರ್ಜಿತ ಅಥವಾ ಸ್ವಯಾರ್ಜಿತ ಆಸ್ತಿಯಿಲ್ಲ. ಹೀಗಾಗಿ, ಕಡಬಾ ತಾಲೂಕಿನ ಕೌಕ್ರಾಡಿ ಗ್ರಾಮದ ಕಾವಿನಬಾಗಿಲು ಎಂಬಲ್ಲಿ ಸರ್ಕಾರಿ ಭೂಮಿಯಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದರು. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಆದರೆ, ಅವರು ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿರುವುದನ್ನು ಸಹಿಸದ ಬೆಳ್ತಂಗಡಿ ತಾಲೂಕಿನ ಅಶೋಕ್‌ ಆಚಾರ್ಯ ಎಂಬಾತ, ಅವರನ್ನು ಒಕ್ಕಲೆಬ್ಬಿಸಬೇಕೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಬೆನ್ನಲ್ಲೇ, ಅಧಿಕಾರಿಗಳು ಕಳೆದ ಫೆಬ್ರವರಿಯಲ್ಲಿಯೇ ಮನೆ ಧ್ವಂಸಗೊಳಿಸಲು ಮುಂದಾಗಿದ್ದಾರೆ. ಅಧಿಕಾರಗಳನ್ನು ತಡೆದಿದ್ದ ಸ್ಥಳೀಯರು ದಂಪತಿಗಳನ್ನು ಒಕ್ಕಲೆಬ್ಬಿಸದಂತೆ ಒತ್ತಾಯಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಈಗ ಅಧಿಕಾರಿಗಳು ಏಕಾಏಕಿ ಮನೆ ಮೇಲೆ ದಾಳಿ ಮಾಡಿದ್ದು, ಮನೆಯಲ್ಲಿದ್ದ ವಸ್ತುಗಳನ್ನು ಹೊರಗೆ ಎಸೆದು, ಮನೆಯನ್ನು ಧ್ವಂಸಗೊಳಿಸಿದ್ದಾರೆ. ಅಂಗಲಾಚಿದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ದಂಪತಿಗಳು ಅಳಲು ತೋಡಿಕೊಂಡಿದ್ದಾರೆ.

ಈ ವರದಿ ಓದಿದ್ದೀರಾ?: ಬುಲ್ಡೋಜರ್ ನ್ಯಾಯ’ ನಿಷೇಧ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು; ಯೋಗಿ ಸರ್ಕಾರಕ್ಕೆ ತರಾಟೆ

”ಸರ್ಕಾರಿ ಜಾಗದಲ್ಲಿ ಸಣ್ಣ ಮನೆ ಕಟ್ಟಿಕೊಂಡು ಬದುಕುತ್ತಿದ್ದೇವೆ. ಆ ಮನೆಯಲ್ಲಿ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಿ. ಇಲ್ಲವೇ, ವೃದ್ಧರಾದ ನಮಗೆ ದಯಾಮರಣ ಕೊಡಿ” ಎಂದು ವೃದ್ದ ದಂಪತಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...