ಮಂಗಳೂರು | ಜ.17ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ; ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕರೆ

Date:

ಜನವರಿ 17ರಿಂದ 23ರವರೆಗೆ ನಡೆಯುವ ಕರ್ನಾಟಕ ಕ್ರೀಡಾಕೂಟದ ಯಶಸ್ಸಿಗೆ ಎಲ್ಲರೂ ಕೈ ಜೋಡಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಕರೆಕೊಟ್ಟರು.

ಕರ್ನಾಟಕ ಕ್ರೀಡಾಕೂಟ-2025ರ ಅಂಗವಾಗಿ ನಡೆದ ವಿವಿಧ ಶಿಕ್ಷಣ ಸಂಸ್ಥೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಜನವರಿ 17ರಂದು ನಗರದ ಮಂಗಳ ಕ್ರೀಡಾಂಗಣದಲ್ಲಿ ಈ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ವಿವಿಧ ಕ್ರೀಡಾ ವಿಭಾಗಗಳಲ್ಲಿ ಒಟ್ಟು 25 ಸ್ಪರ್ಧೆಗಳು ನಡೆಯಲಿವೆ. 3,247 ಕ್ರೀಡಾಪಟುಗಳು ಹಾಗೂ 599 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರ ತಂಡ ಸೇರಿದಂತೆ ಒಟ್ಟು 4,250 ಮಂದಿ ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು.

“ಮಂಗಳೂರಿನಲ್ಲಿ ಬ್ಯಾಡ್ಮಿಂಟನ್ ಬಾಸ್ಕೆಟ್ ಬಾಲ್, ಪೆನ್ಸಿಂಗ್, ಫುಟ್ಬಾಲ್, ಹ್ಯಾಂಡ್ ಬಾಲ್, ಖೋ ಖೋ, ನೆಟ್ ಬಾಲ್, ಈಜು, ಟೇಕ್ವಾಂಡೋ, ವಾಲಿಬಾಲ್, ವೈಟ್ ಲಿಫ್ಟಿಂಗ್ ಹಾಗೂ ವುಶು ಕ್ರೀಡೆ ಸೇರಿದಂತೆ ಒಟ್ಟು 12 ಕ್ರೀಡೆಗಳನ್ನು ನಡೆಸಲಾಗುತ್ತಿದ್ದು, ಪುರುಷರು ಮತ್ತು ಮಹಿಳಾ ವಿಭಾಗದಲ್ಲಿ ಪ್ರತ್ಯೇಕ ಸ್ಪರ್ಧೆಗಳು ನಡೆಯಲಿವೆ. ಕ್ರೀಡಾಕೂಟದಲ್ಲಿ ಒಟ್ಟು 631 ಚಿನ್ನದ ಪದಕ, 631 ಬೆಳ್ಳಿ ಪದಕ ಮತ್ತು 827 ಕಂಚಿನ ಪದಕಗಳಿಗಾಗಿ ಕ್ರೀಡಾಪಟುಗಳು ಸೆಣಸಾಡಲಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಮಂಗಳೂರು | ಸ್ಮೈಲ್ ಫೌಂಡೇಶನ್‌ನಿಂದ 7ನೇ ವಾರ್ಷಿಕ ಸಂಭ್ರಮ, ರಕ್ತದಾನ ಶಿಬಿರ

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ, ಜಿಪಂ ಸಿಇಒ ಡಾ. ಆನಂದ್ ಕೆ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜಾಕಿಮ್ ಸ್ಟಾನಿ, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಯು ಎಚ್ ಉಮರ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...