ಮಂಗಳೂರು | 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ-ಕೊಲೆ; ಮೂವರು ಕಾಮುಕರಿಗೆ ಗಲ್ಲು ಶಿಕ್ಷೆ

Date:

ಮೂರು ವರ್ಷಗಳ ಹಿಂದೆ 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಮೂವರು ಕಾಮುಕ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಮಂಗಳೂರಿನಲ್ಲಿ ಕೃತ್ಯೆ ಎಸಗಿದ್ದ ಜಯಸಿಂಗ್, ಮುಕೇಶ್ ಸಿಂಗ್ ಮತ್ತು ಮನೀಶ್ ಟಿರ್ಕಿ ಎಂಬ ಅಪರಾಧಿಗಳಿಗೆ ದಕ್ಷಿಣ ಕನ್ನಡ ಸೆಷನ್‌ ಕೋರ್ಟ್‌ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

2021ರ ನವೆಂಬರ್ 21ರಂದು ಮಂಗಳೂರು ಹೊರವಲಯದ ರಾಜ್​ಟೈಲ್ಸ್ ಫ್ಯಾಕ್ಟರಿಯಲ್ಲಿ ಮೇಲೆ ನಾಲ್ವರು ಅಪರಾಧಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಧ್ಯಪ್ರದೇಶ ಮೂಲದ ಜಯಸಿಂಗ್, ಮುಕೇಶ್ ಸಿಂಗ್ ಹಾಗೂ ಜಾರ್ಖಂಡ್‌ ಮೂಲದ ಮನೀಶ್ ಟಿರ್ಕಿಯನ್ನು ಪೊಲೀಸರು ಬಂಧಿಸಿದ್ದರು. ನಾಲ್ಕನೇ ಆರೋಪಿ ಮನೀಮ್ ಸಿಂಗ್ ಎಂಬಾತ ಇನ್ನೂ ಪತ್ತೆಯಾಗಿಲ್ಲ.

ಬಾಲಕಿಯ ಪೋಷಕರು ಕೆಲಸ ಮಾಡುತ್ತಿದ್ದ ಕಾರ್ಖಾನೆಯಲ್ಲಿಯೇ ಈ ನಾಲ್ವೂ ಅಪರಾಧಿಗಳು ಕೂಡ ಕೆಲಸ ಮಾಡುತ್ತಿದ್ದರು. ಬಾಲಕಿಯ ಕುಟುಂಬದವರ ಬಗ್ಗೆ ಚೆನ್ನಾಗಿ ತಿಳಿದಿದ್ದರು. ಪೋಷಕರು ಇಲ್ಲದ ಸಮಯದಲ್ಲಿ ಬಾಲಕಿಗೆ ಸಿಹಿತಿಂಡಿ ಕೊಡಿಸುವುದಾಗಿ ಕರೆದೊಯ್ದು ಕೃತ್ಯವೆಸಗಿ, ಕೊಲೆ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 120 (ಬಿ), 366 (ಎ), 376 ಡಿಬಿ, 377, 302 ಹಾಗೂ ಪೋಕ್ಸೋ ಕಾಯ್ದೆಯ ಸೆಕ್ಷನ್ 6ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸುಮಾರು 30 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿದ್ದು, ಪ್ರಕರಣ ಸಾಬೀತಾಗಿದೆ.

ವಿಚಾರಣೆ ನಡೆಸಿದ ಎಫ್‌ಟಿಎಸ್‌ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಮನು ಕೆ.ಎಸ್ ಅವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ್ದಾರೆ. ಅಲ್ಲದೆ, 1.2 ಲಕ್ಷ ದಂಡವನ್ನೂ ವಿಧಿಸಿದ್ದು, ಅದನ್ನು ಬಾಲಕಿಯ ಪೋಷಕರಿಗೆ ನೀಡುವಂತೆ ನಿರ್ದೇಶನ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...