ಮಂಗಳೂರು | ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ನೇಕಾರರಿಗೆ ಆರ್ಥಿಕ ನೆರವು

Date:

ಸರ್ಕಾರದ ಯೋಜನೆಯಾದ ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ಹಾಗೂ ವಿದ್ಯುತ್‍ಮಗ್ಗ ನೇಕಾರರಿಗೆ ವಾರ್ಷಿಕವಾಗಿ ಒಂದು ಬಾರಿಗೆ ರೂ.5 ಸಾವಿರ ಸಹಾಯಧನವನ್ನು ಸರ್ಕಾರದಿಂದ ಡಿ.ಬಿ.ಟಿ ಮೂಲಕ (ನೇರಾ ನಗದು ವರ್ಗಾವಣೆ) ನೀಡಲಾಗುತ್ತಿದೆ.

2024-25ನೇ ಸಾಲಿನಲ್ಲಿ ಸೌಲಭ್ಯ ಪಡೆದಿರುವ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ಪಟ್ಟಿಯಲ್ಲಿ ಪ್ರಸ್ತುತ ಸಾಲಿನಲ್ಲಿ ಮೃತರಾಗಿರುವ, ನೇಕಾರಿಕೆ  ವೃತ್ತಿ ಬಿಟ್ಟಿರುವ, ಬೇರೆ ಕಡೆ ಸ್ಥಳಾಂತರಗೊಂಡಿರುವ ನೇಕಾರರನ್ನು ಹೊರತುಪಡಿಸಿ ನೇಯ್ಗೆ ಚಟುವಟಿಕೆಯಲ್ಲಿ ತೊಡಗಿರುವ ಮತ್ತು 2025-26ನೇ ಸಾಲಿನ ಪ್ರಧಾನಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆ (PMJJBY) ಮತ್ತು ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆ (PMSBY)ಯಡಿ ನೋಂದಣಿಯಾಗಿರುವ ಕೈಮಗ್ಗ ನೇಕಾರರು ಹಾಗೂ ಕಳೆದ ಸಾಲಿನಲ್ಲಿ ನೋಂದಣಿಯಾಗದೇ ಇರುವ ನೇಕಾರರ ಚಟುವಟಿಕೆಯಲ್ಲಿ ತೊಡಗಿರುವ ಅರ್ಹ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರು ಅರ್ಜಿ ನಮೂನೆಗಳನ್ನು ತಮ್ಮ ನೇಕಾರ ಸಹಕಾರ ಸಂಘಗಳಿಂದ/ ಈ ಕಚೇರಿಯಿಂದ ಪಡೆದು ಸಂಘದ ಮೂಲಕ ಈ ಕಚೇರಿಗೆ ಸಲ್ಲಿಸಬೇಕಾಗಿರುತ್ತದೆ. ವೈಯಕ್ತಿಕ ನೇಕಾರರಾಗಿದ್ದಲ್ಲಿ ನೇಕಾರ್ ಸಮ್ಮಾನ್ ಅರ್ಜಿ ನಮೂನೆಗಳನ್ನು ಈ ಕಚೇರಿಯಿಂದ ಪಡೆದು ಸಲ್ಲಿಸಬಹುದು.

ಇದನ್ನೂ ಓದಿ: ಧರ್ಮಸ್ಥಳ | ಗುಂಪುಗಳ ನಡುವೆ ವಾಗ್ವಾದ: ವಾಹನಗಳ ಮೇಲೆ ಕಲ್ಲು ತೂರಾಟ; ಸ್ಟೇಷನ್ ಮುಂದೆ ಧರಣಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೈಮಗ್ಗ ನೇಕಾರರು ಸಲ್ಲಿಸಬೇಕಾದ  ದಾಖಲಾತಿಗಳು: ಆಧಾರ್ ಕಾರ್ಡ್, ರೇಷನ್ ಕಾರ್ಡ್, ನೇಕಾರ್ ಸಮ್ಮಾನ್ ಐಡಿ / ಪೆಹಚಾನ್ ಕಾರ್ಡ್, ಆಧಾರ್ (Linked) ಬ್ಯಾಂಕ್ ಖಾತೆ ಪಾಸ್‍ಬುಕ್ ಪ್ರತಿ, ಕೈಮಗ್ಗ ನೇಕಾರಿಕೆ ವೃತ್ತಿಯಲ್ಲಿ ಇರುವ ಫೋಟೋ, ಕೈಮಗ್ಗದಲ್ಲಿ ಕಾರ್ಯನಿರ್ವಹಿಸುವ ಕೂಲಿ ನೇಕಾರರ ಮಜೂರಿ ಪಾವತಿ ರಶೀದಿ.

ಇದನ್ನೂ ಓದಿ: ಮಂಗಳೂರು | ಕೂಳೂರು ಬಳಿ ಮತ್ತೆ ಟ್ರಾಫಿಕ್‌ ಜಾಮ್; ಹೈರಾಣಾದ ಸವಾರರು

ವಿದ್ಯುತ್ ಮಗ್ಗ ನೇಕಾರರು ಸಲ್ಲಿಸಬೇಕಾದ ದಾಖಲಾತಿಗಳು: ಘಟಕದ ಮಾಲೀಕರು /ನೇಕಾರರು/ ಕಾರ್ಮಿಕ ಆಧಾರ್ (Linked) ಬ್ಯಾಂಕ್ ಖಾತೆ ಪಾಸ್‍ಬುಕ್ ಪ್ರತಿ, ವಿದ್ಯುತ್ ಮಗ್ಗ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಫಲಾನುಭವಿಯ ಫೋಟೋ, ವಿದ್ಯುತ್ ಸಂಪರ್ಕ ಹೊಂದಿರುವ ಆರ್.ಆರ್.ನಂ. ನ ವಿದ್ಯುತ್ ಬಿಲ್, ಘಟಕದ ಉದ್ಯೋಗ್ ಆಧಾರ್ / ಪಿ.ಎಂ.ಟಿ / ಉದ್ದಿಮೆದಾರರ ಪರವಾನಿಗೆ ಪತ್ರದ ಪ್ರತಿ, ಘಟಕದಲ್ಲಿ ಕಾರ್ಯನಿರ್ವಹಿಸುವ ನೇಕಾರರು / ಕಾರ್ಮಿಕರ ವಿವರಗಳನ್ನು ಒಳಗೊಂಡ ಮಜೂರಿ ಪಾವತಿಯ ಪ್ರತಿ, ಮಾಲೀಕರಿಂದ ನೇಕಾರರು/ಕಾರ್ಮಿಕರ ಬಗ್ಗೆ ದೃಢೀಕರಣ ಪ್ರತಿ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನ.

ಹೆಚ್ಚಿನ ಮಾಹಿತಿಗೆ ಅಥವಾ  ಭರ್ತಿ ಮಾಡಿದ ಅರ್ಜಿಗಳನ್ನು ಯೆಯ್ಯಾಡಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ (ದೂರವಾಣಿ ಸಂಖ್ಯೆ: 0824-2225056) ಗೆ ಸಲ್ಲಿಸಬೇಕು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...