ಮಂಗಳೂರು | ಪಿಲಿಕುಳ ನಿಸರ್ಗಧಾಮದಲ್ಲಿ ಬೆಂಕಿ ಅವಘಡ: ಹೊತ್ತಿ ಉರಿದ ಬಗ್ಗಿ ಎಲೆಕ್ಟ್ರಿಕ್ ವಾಹನ

Date:

ಪ್ರವಾಸಿಗರ ನೆಚ್ಚಿನ ತಾಣವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ವಾಮಂಜೂರಿನಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಬುಧವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ಎಲೆಕ್ಟ್ರಿಕ್ ವಾಹನಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.

ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿದ್ದು, ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾಗಿದೆ.

ಇಲ್ಲಿನ ವರ್ಕ್ ಶಾಪ್ ನಲ್ಲಿ ಚಾರ್ಜ್ ಮಾಡಲೆಂದು ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದ ಬ್ಯಾಟರಿಯಲ್ಲಿ ಬೆಂಕಿಯ ಕಿಡಿ ಉಂಟಾಗಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಟ್ಟು ಎರಡು ವಾಹನಗಳು ಸಂಪೂರ್ಣ ಭಸ್ಮವಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾರ್ಕಿಂಗ್ ಸ್ಥಳದಲ್ಲಿ ಹತ್ತಕ್ಕೂ ಅಧಿಕ ಬಗ್ಗಿ ಎಲೆಕ್ಟ್ರಿಕ್ ವಾಹನಗಳಿದ್ದವು. ಕೂಡಲೇ ತೆರವುಗೊಳಿಸಿದ್ದರಿಂದ, ಅದೃಷ್ಟವಶಾತ್ ಭಾರೀ ದೊಡ್ಡ ಅನಾಹುತ ತಪ್ಪಿದಂತಾಗಿದೆ ಎಂದು ತಿಳಿದುಬಂದಿದೆ.

ಇನ್ನು ಎರಡು ವಾಹನಗಳು ಹೊತ್ತಿ ಉರಿಯುತ್ತಿದ್ದರೂ ಕದ್ರಿ ಅಗ್ನಿ ಶಾಮಕ ದಳ ಕ್ಲಪ್ತ ಸಮಯಕ್ಕೆ ಸ್ಥಳಕ್ಕೆ ಆಗಮಿಸಿರಲಿಲ್ಲ ಎಂಬ ಆರೋಪ ಕೂಡ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪಿಲಿಕುಳದ ಸಿಬ್ಬಂದಿಗಳೇ ಸೇರಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

ಅಂತಿಮವಾಗಿ ಅರ್ಧ ಗಂಟೆ ಬಳಿಕ ಕದ್ರಿ ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಿದೆ. ಅಲ್ಲದೆ ಘಟನಾ ಸ್ಥಳಕ್ಕೆ ಕಾವೂರು ಠಾಣಾ, ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮರು ನವೀಕರಿಸದ ಮಾನಸ ಅಮ್ಯೂಸ್‌ಮೆಂಟ್ ಪಾರ್ಕ್‌ ಲೈಸೆನ್ಸ್‌?

ಪಿಲಿಕುಳ ನಿಸರ್ಗಧಾಮದಲ್ಲಿ ಪ್ರವಾಸಿಗರಿಗಾಗಿ ಕಾರ್ಯಾಚರಿಸುತ್ತಿರುವ ಮಾನಸ ಅಮ್ಯೂಸ್‌ಮೆಂಟ್ ಪಾರ್ಕ್‌ ನಡೆಸುತ್ತಿರುವವರಿಗೇ ಬಗ್ಗಿ ಎಲೆಕ್ಟ್ರಿಕ್ ವಾಹನದ ಗುತ್ತಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಉಡುಪಿ | ನಗರಸಭೆ ಪೌರಾಯುಕ್ತ ರಾಯಪ್ಪಗೆ ಬೀಳ್ಕೊಡುಗೆ

ಈ ನಡುವೆ ಮಾನಸ ಅಮ್ಯೂಸ್‌ಮೆಂಟ್ ಪಾರ್ಕ್‌ ಪರವಾನಗಿ ಇನ್ನೂ ಕೂಡ ಮರು ನವೀಕರಣಗೊಂಡಿಲ್ಲ ಎಂಬ ಮಾತುಗಳು ಕೂಡ ಕೇಳಿ ಬಂದಿದೆ. ಒಂದು ವೇಳೆ ಮಾನಸ ಅಮ್ಯೂಸ್‌ಮೆಂಟ್ ಪಾರ್ಕಿನಲ್ಲಿ ಅವಘಡ ಸಂಭವಿಸಿದರೆ ಯಾರು ಹೊಣೆ? ಅವರಿಗೇ ಮತ್ತೆ ಎಲೆಕ್ಟ್ರಿಕ್ ವಾಹನದ ಗುತ್ತಿಗೆ ನೀಡಿರುವುದು ಯಾಕೆ ಎಂಬ ಪ್ರಶ್ನೆ ಕೂಡ ಎದ್ದಿದ್ದು, ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಉತ್ತರ ನೀಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...