ಮಂಗಳೂರು | ಬೊಬ್ಬೆ ಹೊಡೆದು ಮುಸ್ಲಿಂ ಮೀನು ವ್ಯಾಪಾರಿಯನ್ನು ದುಷ್ಕರ್ಮಿಗಳಿಂದ ಕಾಪಾಡಿದ ಹಿಂದೂ ಮಹಿಳೆ

Date:

ಮಂಗಳೂರಿನಲ್ಲಿ ಮೀನು ವ್ಯಾಪಾರಿ ಮುಸ್ಲಿಮ್ ಯುವಕನೋರ್ವನನ್ನು ತಂಡವೊಂದು ಕೊಲೆಗೆ ಯತ್ನಿಸಿರುವ ಘಟನೆ ಮಂಗಳೂರಿನ ಕುಂಟಿಕಾನ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದ್ದು, ಈ ವೇಳೆ ಹಿಂದೂ ಮಹಿಳೆ ಬೊಬ್ಬೆ ಹೊಡೆದು ದುಷ್ಕರ್ಮಿಗಳಿಂದ ಯುವಕನನ್ನು ರಕ್ಷಿಸಿದ್ದಾರೆ.

ರೌಡಿಶೀಟರ್ ಸುಹಾಸ್ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳ ಗುಂಪು ಬಜಪೆಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆಗೈದ ಬೆನ್ನಲ್ಲೇ ಈ ಘಟನೆ ನಡೆದಿದೆ. ಮೀನಿನ ವ್ಯಾಪಾರಿಯ ಮೇಲೆ ಸುಮಾರು 4ರಿಂದ 5 ಮಂದಿಯಿದ್ದ ತಂಡವು ದಾಳಿ ನಡೆಸುತ್ತಿರುವ ದೃಶ್ಯ ಸ್ಥಳೀಯ ಕಟ್ಟಡವೊಂದರಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಉಳ್ಳಾಲ‌ ನಿವಾಸಿ ಲುಕ್ಮಾನ್ ಎಂಬಾತ ತನ್ನ ಗ್ರಾಹಕನಿಗೆ ಮೀನು ನೀಡಲೆಂದು ಎಂದಿನಂತೆ ಮಂಗಳೂರಿನ‌ ಕುಂಟಿಕಾನಕ್ಕೆ ತೆರಳಿದ್ದರು. “ಬೆಳಗ್ಗೆ 6:30ರ ಸುಮಾರಿಗೆ ಗ್ರಾಹಕನನ್ನು ಕಾಯುತ್ತಾ ನಿಂತಿದ್ದಾಗ ಕಪ್ಪು ಬಣ್ಣದ ಇನ್ನೋವ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ನನ್ನ ಮೇಲೆ ದಾಳಿ ಮಾಡಿ ಕೊಲೆಗೆ ಯತ್ನಿಸಿತು” ಎಂದು ದಾಳಿಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲುಕ್ಮಾನ್ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಪಾಯದ ಅರಿವಾಗಿ ಸ್ಥಳದಿಂದ ಓಡಿದಾಗ ಅಟ್ಟಾಡಿಸಿಕೊಂಡು ಬಂದ ದುಷ್ಕರ್ಮಿಗಳು ನನ್ನನ್ನು ಕೆಳಗೆ ಬೀಳಿಸಿ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಿದ್ದಾರೆ. ಈ ವೇಳೆ ಹಿಂದೂ ಮಹಿಳೆಯೊಬ್ಬರು ಬೊಬ್ಬೆ ಹಾಕುತ್ತಾ ಓಡೋಡಿ ಬಂದು ದುಷ್ಕರ್ಮಿಗಳಿಂದ ನನ್ನನ್ನು ರಕ್ಷಿಸಿದ್ದಾರೆ” ಎಂದು ಲುಕ್ಮಾನ್ ತಿಳಿಸಿದ್ದಾರೆ.

“ಮಹಿಳೆಯ ಬೊಬ್ಬೆಗೆ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಬಳಿಕ ಅದೇ ಮಹಿಳೆ ನನ್ನನ್ನು ಪೊಲೀಸರ ಬಳಿ ಡ್ರಾಪ್ ಮಾಡಿದ್ದಾರೆ” ಎಂದು ಲುಕ್ಮಾನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...