ಮಂಗಳೂರು | ಕೆಪಿಟಿ ಬಳಿ ಭೀಕರ ಅಪಘಾತ: ಲಾರಿ ಚಾಲಕನ ಅಚಾತುರ್ಯಕ್ಕೆ ಬೈಕ್ ಸವಾರ ಗಂಭೀರ

Date:

ಲಾರಿ ಚಾಲಕನ ಅಚಾತುರ್ಯಕ್ಕೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕೆಪಿಟಿ ಬಳಿ ನಡೆದಿದೆ.

ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ನಿವಾಸಿ ತಲಪಾಡಿ ಕಿನ್ಯಾ ಮೂಲದ ಅಶೋಕ್(44) ಎಂದು ಗುರುತಿಸಲಾಗಿದೆ. ಅಪಘಾತದ ದೃಶ್ಯ ಹತ್ತಿರದಲ್ಲೇ ಇದ್ದ ಪೆಟ್ರೋಲ್‌ ಬಂಕ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಯೆಯ್ಯಾಡಿಯಿಂದ ಕೆ.ಪಿ.ಟಿ ಜಂಕ್ಷನ್​ನ ಸಪ್ತಗಿರಿ ಪೆಟ್ರೋಲ್ ಪಂಪ್ ಕಡೆ ಬೈಕ್ ಸವಾರ ಬರುತ್ತಿದ್ದರು. ಅದೇ ವೇಳೆ ಪೆಟ್ರೋಲ್ ಪಂಪ್ ಕಡೆಗೆ ಇಂಡೇನ್ ಗ್ಯಾಸ್ ತುಂಬಿದ್ದ ಗೂಡ್ಸ್ ಲಾರಿ ಬರುತ್ತಿತ್ತು. ಆದರೆ, ಗೂಡ್ಸ್ ಲಾರಿಯ ಚಾಲಕ ಏಕಾಏಕಿ ಎಡಬದಿಗೆ ತಿರುಗಿಸಿದ್ದರಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯಲ್ಲಿ ಬೈಕ್ ಸವಾರನ ಸೊಂಟ ಹಾಗೂ ಬಲ ಕೈ ಮೇಲೆ ಲಾರಿಯ ಎದುರಿನ ಚಕ್ರ ಹರಿದಿದೆ. ಬೈಕ್ ಸವಾರನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನು ಓದಿದ್ದೀರಾ? ಕಾರವಾರ | ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಪುಣೆ ಮೂಲದ ಉದ್ಯಮಿಯ ಕೊಲೆ; ಪತ್ನಿ ಗಂಭೀರ

“ಘಟನೆ ಶುಕ್ರವಾರ ಸಂಜೆ ನಡೆದಿದೆ. ಸಿಸಿಟಿವಿ ದೃಶ್ಯಾವಳಿ ಸಿಕ್ಕಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದೇವೆ” ಎಂದು ಕದ್ರಿ ಸಂಚಾರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...