ಮಂಗಳೂರು | ಫಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ; ಕುಡಿಯುವ ನೀರಿಗೆ ವಿಷ ಸ್ಥಳೀಯರ ಆಕ್ರೋಶ

Date:

ಮಂಗಳೂರಿನ ಜೀವನದಿ ಪಲ್ಗುಣಿಯನ್ನು ಸೇರುವ ತೋಕೂರು ಹಳ್ಳಕ್ಕೆ ಜೋಕಟ್ಟೆ ಹಾಗೂ ಬೈಕಂಪಾಡಿ ಕೈಗಾರಿಕಾ ವಲಯದ ಭಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ವಿಷಕಾರಿ ಕೈಗಾರಿಕಾ ತ್ಯಾಜ್ಯ ಹರಿಯಬಿಡಲಾಗುತ್ತಿದೆ ನದಿ ನೀರು ಕಲುಷಿತವಾಗುತ್ತಿದೆ.

ರುಚಿಗೋಲ್ಡ್, ಅಧಾನಿ ವಿಲ್ಮರ್, ಯು.ಬಿ.ಬಿಯರ್, ಟೋಟಲ್ ಗ್ಯಾಸ್, ಫಿಷ್ ಮಿಲ್ ಮುಂತಾದ ಮಧ್ಯಮ ಕೈಗಾರಿಕೆಗಳು ಇರುವ ಭಾಗಾದಿಂದ ಈ ಮಾಲಿನ್ಯ ಕೈಗಾರಿಕಾ ಘಟಕಗಳಿಂದ ಶುದ್ದೀಕರಣ ಇಲ್ಲದೇ ನೇರವಾಗಿ ತೋಕೂರು ಹಳ್ಳ ಸೇರುತ್ತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ತೋಕೋರು, ಕುಡಂಬೂರು, ಜೋಕಟ್ಟೆ ಸಹಿತ ಸುತ್ತಲ ಗ್ರಾಮಗಳ ಅಂತರ್ಜಲ, ಕೃಷಿಯ ಮೂಲ ಆಗಿರುವ ತೋಕೂರು ಹಳ್ಳ ಈಗ ಕೊಳೆತು ಅಸಹ್ಯವಾಗಿ ನಾರುತ್ತಿದೆ. ತೋಕೂರು ಹಳ್ಳದ ಮೂಲಕ ಕೈಗಾರಿಕಾ ತ್ಯಾಜ್ಯ ನೀರು ಜೀವನದಿ ಪಲ್ಗುಣಿಯನ್ನು ಸೇರುತ್ತಿದೆ. ಇದರಿಂದ ಈ ಭಾಗದ ನದಿಯೂ, ನದಿ ದಂಡೆಯ ಜನರಿಗೆ ಬಳಕೆಗೆ ಯೋಗ್ಯವಾಗಿ ಉಳಿದಿಲ್ಲ‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆಯೂ ಹಲವು ಭಾರಿ ಇಂತಹದ್ದೇ ಸ್ಥಿತಿ ನಿರ್ಮಾಣಗೊಂಡಿತ್ತು. ಡಿವೈಎಫ್ಐ ಹಾಗೂ ಜೋಕಟ್ಟೆ ನಾಗರಿಕ ಹೋರಾಟ ಸಮಿತಿ ಪ್ರತಿಭಟನೆಗಳನ್ನೂ ಸಂಘಟಿಸಿತ್ತು. ಮಾಧ್ಯಮಗಳಲ್ಲಿ ಇದು ಸುದ್ದಿಯಾಗಿ ಸುಪ್ರೀಂ ಕೋರ್ಟ್ ನ  ಹಸಿರು ಪೀಠ ಸುಮಟೊ ಮೊಕದ್ದಮೆಯನ್ನೂ ದಾಖಲಿಸಿ ತನಿಖೆಗೆ ಆದೇಶಿಸಿತ್ತು. ಈಗ ಮತ್ತೆ ಯಥಾ ಪ್ರಕಾರ ಕೈಗಾರಿಕೆಗಳು ತಮ್ಮ ವಿಷಯುಕ್ತ ಮಾಲಿನ್ಯವನ್ನು ಪಲ್ಗುಣಿಗೆ ಯಾವ ಅಂಜಿಕೆಯೂ ಇಲ್ಲದೆ ಹರಿಯಬಿಟ್ಟಿವೆ. ಮಾಲಿನ್ಯ ನಿಯಂತ್ರಣ ಮಂಡಳಿ ಈಗ  ಮೌನವಾಗಿದೆ ಎಂದು ಸ್ಥಳೀಯರು ಬೇಸರ ಹೊರಹಾಕುತ್ತಾರೆ.

ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್ ಇಂತಹ ಪ್ರಶ್ನೆಗಳ ಕುರಿತು ಸಣ್ಣ ಕಾಳಜಿಯನ್ನೂ ತೋರದಿರುವುದು ಮಾಲಿನ್ಯಕಾರಕ ಕೈಗಾರಿಕೆಗಳು ಯಾರ ಭಯವೂ ಇಲ್ಲದೆ ಇಂತಹ ಅನಾಹುತಗಳನ್ನು ಎಸಗಲು ಧೈರ್ಯ ಬಂದಿದೆ ಎಂದು ನಾಗರಿಕ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಅಪಾದಿಸಿದ್ದಾರೆ.

ಈಗ ಆಗಿರುವ ಮಾಲಿನ್ಯವನ್ನು ಸರಿಪಡಿಸಲು, ತಪ್ಪಿತಸ್ಥ ಕೈಗಾರಿಕೆಗಳ ಮೇಲೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕರಿಗಳು ತಕ್ಷಣವೇ ಮುಂದಾಗಬೇಕು, ಇಲ್ಲದಿದ್ದಲ್ಲಿ ಪ್ರತಿಭಟನೆಗಳನ್ನು ಹಮ್ಮಿ ಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಮಾಲಿನ್ಯ ನಿಯಂತ್ರಣ ಮಂಡಳಿ ಖಾಲಿ, ಖಾಲಿ

ಕೈಗಾರಿಕಾ ನಗರ, ಕ್ವಾರಿಗಳು ತುಂಬಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ವಿಶೇಷ ಮಹತ್ವ ಇದೆ. ಕೆಲಸದ ಒತ್ತಡವೂ ಸಾಕಷ್ಟಿದೆ. ನೂರಾರು ಕೈಗಾರಿಕೆಗಳು, ಕ್ವಾರಿಗಳು ಇರುವ ಜಿಲ್ಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಬಹುತೇಕ ಹುದ್ದೆಗಳು ಖಾಲಿ ಬಿದ್ದಿವೆ. ಕೇವಲ ಒಂದೆರಡು ಅಧಿಕಾರಿಗಳು ಎಲ್ಲಾ ಜವಾಬ್ದಾರಿ ನಿರ್ವಹಿಸುವ ಅಸಾಧ್ಯ ಸ್ಥಿತಿ ನಿರ್ಮಾಣಗೊಂಡಿದೆ.

ಪ್ರಾದೇಶಿಕ ಅಧಿಕಾರಿಯಾಗಿದ್ದ ಡಾ. ರವಿ ಕೆಲಸದ ಒತ್ತಡದ ಮಧ್ಯೆಯೇ ಮೆದುಳು ಆಘಾತಕ್ಕೊಳಗಾಗಿ ತಿಂಗಳ ಹಿಂದೆ ಮೃತಪಟ್ಟಿದ್ದಾರೆ. ಅವರ ಹುದ್ದೆಗೂ ಸರ್ಕಾರ ಅಧಿಕಾರಿಯನ್ನು ನೇಮಿಸಿಲ್ಲ. ಖಾಲಿ ಹುದ್ಡೆಗಳನ್ನೂ ಭರ್ತಿ ಮಾಡುತ್ತಿಲ್ಲ. ಇರುವ ಒಂದೆರಡು ಅಧಿಕಾರಿಗಳು, ಗುತ್ತಿಗೆ ನೌಕರರನ್ನೇ ಹಗಲು ರಾತ್ರಿ ಅಮಾನವೀಯವಾಗಿ ದುಡಿಸಿಕೊಳ್ಳುತ್ತಿದೆ. ಈ ಪರಿಸ್ಥಿತಿ ಶುದ್ದೀಕರಿಸದೆ ವಿಷಕಾರಿ ತ್ಯಾಜ್ಯ ಹರಿಯ ಬಿಡುವ ಕೈಗಾರಿಕೆಗಳಿಗೆ ಮುಕ್ತ ಅವಕಾಶ ಮಾಡಿಕೊಟ್ಟಿದೆ ಎನ್ನುವುದು ಸ್ಥಳೀಯರ ಮಾತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...