ಮಂಗಳೂರು | ವೈದ್ಯಕೀಯ ನಿರ್ಲಕ್ಷ್ಯಕ್ಕೆ ಅಮಾಯಕ ಜೀವ ಬಲಿ; ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಪತ್ರ

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ತೇಜಸ್ವಿನಿ ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯಕ್ಕೆ ಅಮಾಯಕ ಜೀವವೊಂದು ಬಲಿಯಾಗಿದ್ದು, ತಪ್ಪಿತಸ್ಥ ವೈದ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಮೃತರ ಕುಟುಂಬಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

“ಮಂಗಳೂರು ನಗರದ ಪಂಜಿಮೊಗರು ನಿವಾಸಿ ಹಾಮದ್ ಎಂಬವರು 2024ರ ಡಿಸೆಂಬರ್‌ 21ರಂದು ಬಿಜೈ ರೋಹನ್ ಕಾರ್ಪೊರೇಶನ್ ಕಟ್ಟಡದ ಬಳಿಯಿಂದ ಲಾಲ್‌ಬಾಗ್ ಕಡೆಗೆ ನಡೆದುಕೊಂಡು ಬಂದು ರಸ್ತೆ ದಾಟುತ್ತಿದ್ದಾಗ, ಅಜಾಗರೂಕತೆಯಿಂದ ವಾಹನ ಚಲಾಯಿಸುತ್ತ ಬಂದ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಹಾಮದ್‌ ತೀವ್ರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಕೂಡಲೇ ತೇಜಸ್ವಿನಿ ಆಸ್ಪತ್ರೆಗೆ ಸುಮಾರು ಸಂಜೆ 4.40ಕ್ಕೆ ದಾಖಲಿಸಿದ್ದಾರೆ. ಈ ವೇಳೆ ಆಸ್ಪತ್ರೆಯ ವೈದ್ಯರು ಸಂತ್ರಸ್ತ ಗಾಯಾಳುವನ್ನು ಸರಿಯಾಗಿ ಪರೀಕ್ಷಿಸದೆ ಕೇವಲ ಮುರಿತಕ್ಕೊಳಗಾಗಿರುವ ಬಲಗಾಲಿನ ಮೂಳೆಯನ್ನು ಶಸ್ತ್ರಚಿಕಿತ್ಸೆ ನಡೆಸಿ ಸರಿಪಡಿಸಲು ತಗಲುವ ವೆಚ್ಚದ ಕುರಿತು ಚೌಕಾಸಿ ನಡೆಸುತ್ತಿದ್ದರು” ಎಂದು ಆರೋಪಿಸಲಾಗಿದೆ.

“ತೇಜಸ್ವಿನಿ ಆಸ್ಪತ್ರೆಯ ವೈದ್ಯರು ಸರಿಯಾಗಿ ಪರೀಕ್ಷೆ ನಡೆಸದೆ ಒಳರೋಗಿಯಾಗಿ ದಾಖಲಿಸಲೂ ಕೂಡಾ ಹಿಂಜರಿಯುತ್ತಿದ್ದರು. ಆ ದಿನ ಸಂಜೆ 4.40ಕ್ಕೆ ಆಸ್ಪತ್ರೆಗೆ ಬಂದ ಗಾಯಾಳುವನ್ನು ರಾತ್ರಿ 8.30ರವರೆಗೂ ಕನಿಷ್ಠ ಒಳರೋಗಿಯಾಗಿಯೂ ದಾಖಲಿಸದೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದರು” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪೊಲೀಸರಿಗೆ ಪ್ರಥಮ ಮಾಹಿತಿಯನ್ನೂ ಕೂಡಾ ಒದಗಿಸದೆ ಕಾನೂನು ನಿಯಮ ಪಾಲಿಸದೆ ಕರ್ತವ್ಯ ಲೋಪ ಎಸಗಿದ್ದಾರೆ. ಗಾಯಾಳು ಹಾಮದ್ ಎಂಬುವವರನ್ನು ತೇಜಸ್ವಿನಿ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳು ನಡೆಸಿಕೊಂಡ ರೀತಿ ಮತ್ತು ತಪ್ಪಾದ ಚಿಕಿತ್ಸಾ ಕ್ರಮ ಹಾಗೂ ವೈದ್ಯಕೀಯ ನಿರ್ಲಕ್ಷ್ಯದಿಂದಾಗಿ ಅಮಾಯಕ ಜೀವ ಕಳೆದುಕೊಳ್ಳುವಂತಾಗಿದೆ. ಹಾಮದ್ ಕೂಲಿ ಕೆಲಸ ಮಾಡಿ ಬದುಕುತ್ತಿದ್ದನು. ಇದೀಗ ಇವರನ್ನು ಅವಲಂಬಿಸಿರುವ 4 ಮಂದಿ ಮಕ್ಕಳು ಮತ್ತು ಮಡದಿ ಬೀದಿಗೆ ಬೀಳುವಂತಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ?: ಮಂಗಳೂರು | ಜ.14ರಂದು ರಸ ಬೈ ರಾಗ ಸಂಗೀತ ಕಚೇರಿ

“ಈ ಎಲ್ಲ ಹಿನ್ನಲೆಯಲ್ಲಿ ತೇಜಸ್ವಿನಿ ಆಸ್ಪತ್ರೆ ಮತ್ತು ಅಲ್ಲಿನ ತಪ್ಪಿತಸ್ಥ ವೈದ್ಯರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು. ಜತೆಗೆ ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಪರಿಹಾರ ಒದಗಿಸಿಕೊಡಬೇಕು” ಎಂದು ಮನವಿ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...