ಮಂಗಳೂರು | ಕೇರಳದ ಅಶ್ರಫ್ ಗುಂಪು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು!

Date:

ಕರಾವಳಿ ನಗರವಾದ ಮಂಗಳೂರಿನಲ್ಲಿ ನಡೆಯುತ್ತಿರುವ ಹಲವಾರು ಬೆಳವಣಿಗೆಗಳ ಮಧ್ಯೆಯೇ ಕುಡುಪು ಪ್ರದೇಶದಲ್ಲಿ ಸಂಘಪರಿವಾರದ ಗುಂಪಿನಿಂದ ಹತ್ಯೆಗೊಳಗಾಗಿದ್ದ ಕೇರಳದ ಅಶ್ರಫ್ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.

ಕುಡುಪು ಆಶ್ರಫ್ ಗುಂಪುಹತ್ಯೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಅಶ್ರಫ್ ಗುಂಪುಹತ್ಯೆ ಪ್ರಕರಣದ 10ನೇ ಆರೋಪಿ ರಾಹುಲ್ ಮತ್ತು 20ನೇ ಆರೋಪಿ ಸುಶಾಂತ್‌ಗೆ ಜಾಮೀನು ಮಂಜೂರಾಗಿದೆ. ಇಬ್ಬರು ಆರೋಪಿಗಳ ಹೆಸರು ಎಫ್‌ಐಆರ್‌ನಲ್ಲಿ ಉಲ್ಲೇಖವಿಲ್ಲ ಎಂಬ ಕಾರಣವನ್ನು ನೀಡಿ ಜಾಮೀನು ಕೋರಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಪ್ರಕರಣ?

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪು ಬಳಿ ಕಳೆದ ಏಪ್ರಿಲ್ 27ರಂದು ಕ್ರಿಕೆಟ್ ಆಡುತ್ತಿದ್ದ ಗುಂಪೊಂದು ಕೇರಳದ ವಯನಾಡ್ ಮೂಲದ ಅಶ್ರಫ್‌ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಘಟನೆಯಲ್ಲಿ ಸ್ಥಳದಲ್ಲೇ ಅಶ್ರಫ್ ಮೃತಪಟ್ಟಿದ್ದ.

ಆ ಬಳಿಕ ಆರೋಪಿಗಳ ಜೊತೆಗೆ ಕೈಜೋಡಿಸಿದ್ದ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಅಪರಿಚಿತ ಶವ ಪತ್ತೆಯಾಗಿದೆ ಎಂದು ದೂರು ದಾಖಲಿಸಿಕೊಂಡಿದ್ದರು. ಆದರೆ, ಈ ಬಗ್ಗೆ ನಿರಂತರ ಒತ್ತಡ ಹೆಚ್ಚಳವಾಗುತ್ತಿದ್ದಂತೆಯೇ ಇದು ಗುಂಪು ಹತ್ಯೆ ಎಂಬ ಸತ್ಯ ಹೊರಗೆ ಬಂದಿತ್ತು.

ಇದನ್ನು ಓದಿದ್ದೀರಾ? ಮಂಗಳೂರು | ಯಾರೇ ಆದರೂ ಪ್ರಚೋದನೆ ಮಾಡಿದಲ್ಲಿ ಕ್ರಮ ಕೈಗೊಳ್ಳಿ: ಮುಸ್ಲಿಂ ಮುಖಂಡರಿಂದ ಸಚಿವರಿಗೆ ಮನವಿ

ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರಿನಲ್ಲಿ ‘ಪಾಕಿಸ್ತಾನ ಪಾಕಿಸ್ತಾನ’ ಬೊಬ್ಬೆ ಹೊಡೆದಿದ್ದೇ ಈ ಘಟನೆಗೆ ಕಾರಣ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖ ಮಾಡಲಾಗಿತ್ತು. ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ಈವರೆಗೆ 23 ಮಂದಿಯನ್ನು ಬಂಧಿಸಿದ್ದರು. ಪ್ರಮುಖ ಆರೋಪಿ ಎನ್ನಲಾಗಿರುವ ಬಿಜೆಪಿಯ ಮಾಜಿ ಕಾರ್ಪೋರೇಟರ್‌ನ ಪತಿ ಪಿಸ್ತೂಲ್ ರವಿ ಎಂಬಾತ ತಲೆಮರೆಸಿಕೊಂಡಿದ್ದಾನೆ.

ಈ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ್ದ ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಶಿವಕುಮಾರ್ ಕೆ ಆರ್, ಹೆಡ್‌ಕಾನ್‌ಸ್ಟೇಬಲ್ ಚಂದ್ರ ಪಿ. ಮತ್ತು ಪೊಲೀಸ್ ಕಾನ್‌ಸ್ಟೇಬಲ್ ಯಲ್ಲಾಲಿಂಗ ಅವರನ್ನು ಅಮಾನತುಗೊಳಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...