ಮಂಗಳೂರು | ಕೋಟೆಕಾರು ಬ್ಯಾಂಕ್ ದರೋಡೆ: ಮತ್ತೊಬ್ಬ ಆರೋಪಿಯ ಕಾಲಿಗೆ ಗುಂಡೇಟು

Date:

ಮಂಗಳೂರು ಹೊರವಲಯದ ಕೋಟೆಕಾರು ಸಹಕಾರಿ ಬ್ಯಾಂಕಲ್ಲಿ ಚಿನ್ನಾಭರಣ, ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಮತ್ತೋರ್ವ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ಮುರುಗಂಡಿ ತೇವರ್ ಮತ್ತು ಯೋಸುವಾ ರಾಜೇಂದ್ರನ್ ಅವರನ್ನು ಹೆಚ್ಚಿನ ತನಿಖೆಗಾಗಿ ಫೆಬ್ರವರಿ 3 ರವರೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದರು.

ಕಸ್ಟಡಿ ವಿಚಾರಣೆಯ ಸಮಯದಲ್ಲಿ ಆರೋಪಿ ಮುರುಗಂಡಿ ಥೇವರ್ ಅಪರಾಧದ ಯೋಜನೆಯ ಬಗ್ಗೆ ವಿವರಗಳನ್ನು ಬಹಿರಂಗಪಡಿಸಿದ್ದಾನೆ. 2024ರ ನವೆಂಬರ್ ನಲ್ಲಿ ಯಸುವಾ ರಾಜೇಂದ್ರನ್ ಹಾಗೂ ಸ್ಥಳೀಯ ಸಹಚರ ಶಶಿ ಥೇವರ್ ಜತೆಗೂಡಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬ್ಯಾಂಕ್ ಬಳಿಯ ಅಜ್ಜಿನಡ್ಕದಲ್ಲಿ ಭೇಟಿಯಾಗಿದ್ದ. ಇದೇ ವೇಳೆ ಶಶಿ ಥೇವರ್ ಬಂದೂಕನ್ನು ತಂದು ಭದ್ರತಾ ಲೋಪಗಳ ಬಗ್ಗೆ ಪ್ರಮುಖ ವಿವರಗಳನ್ನು ಹಂಚಿಕೊಂಡಿದ್ದ. ತಲೆಮರೆಸಿಕೊಂಡಿರುವ ಆರೋಪಿ ಶಶಿ ಥೇವರ್ ಆಯುಧವನ್ನು ಈ ಸ್ಥಳದಲ್ಲಿ ಬಚ್ಚಿಟ್ಟಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕೋಟೆಕಾರ್

ಈ ಮಾಹಿತಿಯ ಆಧಾರದ ಮೇಲೆ ಉಳ್ಳಾಲ ಪೊಲೀಸ್ ಇನ್ಸ್‌ಪೆಕ್ಟರ್, ಓರ್ವ ಸಬ್ ಇನ್ಸ್‌ಪೆಕ್ಟರ್ ಮತ್ತು ಇಬ್ಬರು ಕಾನ್ಸ್ ಟೇಬಲ್‌ಗಳನ್ನು ಒಳಗೊಂಡ ಪೊಲೀಸ್ ತಂಡವು ಆರೋಪಿ ಮುರುಗಂಡಿ ಥೇವರ್ ನೊಂದಿಗೆ ಸ್ಥಳ‌ ಮಹಜರಿಗೆ ಇಂದು ಅಜ್ಜಿನಡ್ಕಕ್ಕೆ ತೆರಳಿತ್ತು. ಸ್ಥಳಕ್ಕೆ ತಲುಪಿದಾಗ ಆರೋಪಿ ಮುರುಗಂಡಿ ತನ್ನ ಸರಪಳಿ ಹಿಡಿದಿದ್ದ ಕಾನ್ಸ್ ಟೇಬಲ್ ಮಂಜುನಾಥ್ ಮೇಲೆ ಇದ್ದಕ್ಕಿದ್ದಂತೆ ಹಲ್ಲೆ ನಡೆಸಿದ್ದಾನೆ. ಬಳಿಕ ಪೊಲೀಸ್ ಸಿಬ್ಬಂದಿಯ ಖಾಸಗಿ ಭಾಗಗಳಿಗೆ ಹೊಡೆದು ಸ್ಥಳದಿಂದ ಪರಾರಿಯಾಗಲು ಸರಪಳಿಯಿಂದ ಕತ್ತು ಹಿಸುಕಲು ಪ್ರಯತ್ನಿಸಿದ್ದಾನೆ.

ಈ ಸಂದರ್ಭದಲ್ಲಿ ಉಳ್ಳಾಲ ಇನ್ಸ್‌ಪೆಕ್ಟರ್ ಮೊದಲು ಗಾಳಿಯಲ್ಲಿ ಎಚ್ಚರಿಕೆಯ ಗುಂಡು ಹಾರಿಸಿದ್ದಾರೆ. ಈ ಎಚ್ಚರಿಕೆಯ ಹೊರತಾಗಿಯೂ ಆರೋಪಿ ಮುರುಗಂಡಿ ಪರಾರಿಯಾಗಲು ಪ್ರಯತ್ನಿಸಿದಾಗ ಪೊಲೀಸರು ಮೊಣಕಾಲಿನ ಕೆಳಗೆ ಎರಡನೇ ಸುತ್ತು ಗುಂಡು ಹಾರಿಸಿದ್ದಾರೆ.

ಇದನ್ನು ಓದಿದ್ದೀರಾ? ಗುಜರಾತ್ ಗಲಭೆ | ಕೊಲೆಯಾದ ಮಾಜಿ ಕಾಂಗ್ರೆಸ್ ಸಂಸದರ ಪತ್ನಿ ಝಕಿಯಾ ಜಾಫ್ರಿ ನಿಧನ

ಘಟನೆಯ ನಂತರ ಕಾನ್ಸ್ ಟೇಬಲ್ ಮಂಜುನಾಥ್ ಮತ್ತು ಆರೋಪಿ ಮುರುಗಂಡಿ ಇಬ್ಬರನ್ನೂ ತಕ್ಷಣ ವೈದ್ಯಕೀಯ ಚಿಕಿತ್ಸೆಗಾಗಿ ಯೇನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರೂ ಸದ್ಯ ಅಪಾಯದಿಂದ ಪಾರಾಗಿದ್ದಾರೆ.ಈ ಘಟನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...