ಮಂಗಳೂರು | ಧಕ್ಕೆಯಲ್ಲಿ ಕಾರ್ಮಿಕ ಮುರುಗನ್ ದುರ್ಮರಣ; ತುರ್ತು ಕ್ರಮಕ್ಕೆ CITU ಮನವಿ

Date:

ಮಂಗಳೂರು ಮೀನುಗಾರಿಕಾ ಧಕ್ಕೆಯಲ್ಲಿ ಹಳೆಯ, ತುಕ್ಕು ಹಿಡಿದ ಲೈಟ್ ಕಂಬ ಕುಸಿದು ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ಅವರು ಮೃತಪಟ್ಟಿರುವುದು ಕೇವಲ ಒಂದು ಅಪಘಾತವೆಂದು ಪರಿಗಣಿಸಬಾರದು. ಇದು ಕಾರ್ಮಿಕ ವರ್ಗದ ಜೀವವನ್ನು ಲಾಭದ ಲೆಕ್ಕಾಚಾರದೊಂದಿಗೆ ನೋಡುವ ಪ್ರಚಲಿತ ವ್ಯವಸ್ಥೆಯ ಕಠೋರ ಪ್ರತಿಫಲವಾಗಿದೆ ಎಂದು ಹೇಳಿರುವ CITU ಕೇಂದ್ರ ಕಾರ್ಮಿಕ ಸಂಘಟನೆ ಇಂದು ದ.ಕ.ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿಯನ್ನು ಅರ್ಪಿಸಿತು.

ಧಕ್ಕೆಯಲ್ಲಿ ದುಡಿಯುವ ಕಾರ್ಮಿಕರು ವರ್ಷಗಳಿಂದ ಸುರಕ್ಷತಾ ಸಮಸ್ಯೆಗಳ ಬಗ್ಗೆ ಎಚ್ಚರಿಕೆ ನೀಡುತ್ತಿದ್ದರೂ, ಉತ್ಪಾದನಾ ಪ್ರಕ್ರಿಯೆ ನಿರಂತರವಾಗಿರಬೇಕು ಎಂಬ ಒತ್ತಡ ಮಾತ್ರ ಉಳಿದು, ಕಾರ್ಮಿಕರ ಜೀವ ಮತ್ತು ಅವರ ಭದ್ರತೆ ಕಡೆಗಣಿಸಲ್ಪಟ್ಟಿದೆ. ಶ್ರಮದ ಮೇಲೆ ನಿಂತಿರುವ ಈ ಕ್ಷೇತ್ರದಲ್ಲಿ ಶ್ರಮಜೀವಿಗಳ ಜೀವಕ್ಕೆ ರಕ್ಷಣೆಯೇ ಇಲ್ಲದಿರುವುದು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ಸಾಮಾಜಿಕ ಅನ್ಯಾಯವೂ ಹೌದು.
ಮುರುಗನ್ ಅವರು ಮೀನು ಹೊತ್ತು ಬಂದು ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಕಂಬ ಕುಸಿದು ತಲೆಗೆ ಬಲವಾದ ಪೆಟ್ಟು ಬಿದ್ದು ಸಾವನ್ನಪ್ಪಿರುವುದು, ಕಾರ್ಮಿಕರ ದುಡಿಯುವ ಪರಿಸ್ಥಿತಿಗಳು ಎಷ್ಟು ಅಸುರಕ್ಷಿತವಾಗಿವೆ ಎಂಬುದಕ್ಕೆ ಮತ್ತೋಮದು ಸ್ಪಷ್ಟ ಉದಾಹರಣೆಯಾಗಿದೆ. ಉತ್ಪಾದನಾ ಸಾಧನಗಳು ಮತ್ತು ಮೂಲಸೌಕರ್ಯಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದಾಗ ಅದರ ಬೆಲೆಯನ್ನು ಕಾರ್ಮಿಕ ವರ್ಗ ತನ್ನ ಪ್ರಾಣವನ್ನು ಮುಡಿಪಾಗಿಡಬೇಕಾದಂತಹ ಪರಿಸ್ಥಿತಿ ಮತ್ತೆ ಮತ್ತೆ ಎದುರಾಗುತ್ತಿದೆ ಎಂಬುದು ಈ ದುರಂತದಿಂದ ಸ್ಪಷ್ಟವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮನವಿಯಲ್ಲಿ ಈ ಕೆಳಗಿನ ಬೇಡಿಕೆಗಳನ್ನು ಮುಂದಿಡಲಾಗಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
  1. ಮೃತ ಕಾರ್ಮಿಕ ಮುರುಗನ್ ಅವರ ಕುಟುಂಬಕ್ಕೆ ಕನಿಷ್ಠ ₹25 ಲಕ್ಷ ಪರಿಹಾರವನ್ನು ತಕ್ಷಣ ಮಂಜೂರು ಮಾಡಬೇಕು.
  2. ಮಂಗಳೂರು ಧಕ್ಕೆಯ ಸಮಗ್ರ ಸುರಕ್ಷತಾ ಮತ್ತು ಮೂಲಸೌಕರ್ಯ ಪರಿಶೀಲನೆ ನಡೆಸಿ, ಅಪಾಯಕಾರಿ ಲೈಟ್ ಕಂಬಗಳು ಸೇರಿದಂತೆ ಎಲ್ಲಾ ಹಳೆಯ ವ್ಯವಸ್ಥೆಯನ್ನು ತಕ್ಷಣ ಬದಲಾಯಿಸಬೇಕು.
  3. ಸಂಬಂಧಿತ ಇಲಾಖೆಯ ನಿರ್ಲಕ್ಷ್ಯಕ್ಕೆ ಹೊಣೆಗಾರರಾದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.
  4. ಧಕ್ಕೆಯಲ್ಲಿ ದುಡಿಯುವ ಎಲ್ಲಾ ಅಸಂಘಟಿತ ಕಾರ್ಮಿಕರ ಕಡ್ಡಾಯ ನೋಂದಣಿ, ವಿಮೆ, ಸುರಕ್ಷತಾ ಸಾಧನಗಳು ಮತ್ತು ತುರ್ತು ಚಿಕಿತ್ಸಾ ವ್ಯವಸ್ಥೆಯನ್ನು ಜಾರಿಗೆ ತರಬೇಕು.
  5. ಕಾರ್ಮಿಕ ಪ್ರತಿನಿಧಿಗಳನ್ನು ಒಳಗೊಂಡ ಸಂಯುಕ್ತ ಸುರಕ್ಷತಾ ಸಮಿತಿಯನ್ನು ರಚಿಸಿ, ನಿರಂತರ ಪರಿಶೀಲನಾ ವ್ಯವಸ್ಥೆಯನ್ನು ರೂಪಿಸಬೇಕು
  6. ಧಕ್ಕೆಯಲ್ಲಿ ದುಡಿಯುವ ಎಲ್ಲಾ ಅಸಂಘಟಿತ ಕಾರ್ಮಿಕರ ಕಡ್ಡಾಯ ನೋಂದಣಿ, ವಿಮೆ, ಸುರಕ್ಷತಾ ಸಾಧನಗಳು ಮತ್ತು ತುರ್ತು ಚಿಕಿತ್ಸಾ ವ್ಯವಸ್ಥೆಯನ್ನು ಜಾರಿಗೆ ತರಬೇಕು.
  7. ಕಾರ್ಮಿಕ ಪ್ರತಿನಿಧಿಗಳನ್ನು ಒಳಗೊಂಡ ಸಂಯುಕ್ತ ಸುರಕ್ಷತಾ ಸಮಿತಿಯನ್ನು ರಚಿಸಿ, ನಿರಂತರ ಪರಿಶೀಲನಾ ವ್ಯವಸ್ಥೆಯನ್ನು ರೂಪಿಸಬೇಕು.

ಇದನ್ನೂ ಓದಿ: ಮಂಗಳೂರು | ಧಕ್ಕೆಯಲ್ಲಿ ಕಾರ್ಮಿಕನ ದುರ್ಮರಣ, ಸಿಐಟಿಯು ತೀವ್ರ ಆಕ್ರೋಶ

ಕಾರ್ಮಿಕರ ಶ್ರಮವೇ ಆರ್ಥಿಕ ಚಟುವಟಿಕೆಗಳ ಅಸ್ತಿತ್ವ. ಆ ಶ್ರಮವನ್ನು ನಿರ್ಲಕ್ಷಿಸುವ ವ್ಯವಸ್ಥೆ ಮಾನವೀಯತೆಯನ್ನೇ ನಿರಾಕರಿಸುವಂತಾಗಿದೆ. ಇಂತಹ ದುರಂತಗಳು ಮತ್ತೆಂದೂ ಮರುಕಳಿಸದಂತೆ ತಕ್ಷಣ ದೃಢವಾದ ಕ್ರಮ ಕೈಗೊಳ್ಳುವುದು ಜಿಲ್ಲಾಡಳಿತದ ನೈತಿಕ ಹಾಗೂ ಕಾನೂನುಬದ್ಧ ಜವಾಬ್ದಾರಿಯಾಗಿರುವುದರಿಂದ ಶೀಘ್ರವಾಗಿ ಕಾನೂನು ಕ್ರಮ ಜರುಗಿಸಿ ಪರಿಹಾರ ಒದಗಿಸಬೇಕೆಂದು CITU ದ.ಕ.ಜಿಲ್ಲಾ ಸಮಿತಿಯು ಒತ್ತಾಯಿಸಿದೆ.

ನಿಯೋಗದಲ್ಲಿ CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಜಿಲ್ಲಾ ಖಜಾಂಚಿ ಯೋಗೀಶ್ ಜಪ್ಪಿನಮೊಗರು,DYFI ಜಿಲ್ಲಾ ನಾಯಕರಾದ ತಯ್ಯುಬ್ ಬೆಂಗರೆ, ಪಿ ಜಿ ರಫೀಕ್ ರವರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...