ಮಂಗಳೂರು | ಬ್ಯಾರಿ ಪರಂಪರೆಯನ್ನು ಎತ್ತಿ ಹಿಡಿಯೋಣ: ಕರ್ನಾಟಕ ವಿವಿ ಕುಲಪತಿ ಎ.ಎಂ.ಖಾನ್

Date:

ಬ್ಯಾರಿ ಕೇವಲ ಒಂದು ಭಾಷೆಯಲ್ಲ. ಅದು ಸಂಸ್ಕೃತಿಯೂ ಆಗಿದೆ. ಜಾನಪದ ಹಿನ್ನೆಲೆಯೂ ಅದಕ್ಕಿದೆ. ಹಾಗಾಗಿ ಬ್ಯಾರಿಯನ್ನು ಭಾಷೆ ಮತ್ತು ವ್ಯಾಪಾರ ಪರಿಧಿಗೆ ಸೀಮಿತಗೊಳಿಸದೆ ಬ್ಯಾರಿಗಳ ಪರಂಪರೆಯನ್ನು ಎತ್ತಿ ಹಿಡಿಯುವ ಕೆಲಸ ಆಗಬೇಕಿದೆ ಎಂದು ಕರ್ನಾಟಕ ವಿಶ್ವವಿದ್ಯಾನಿಲಯದ ಕುಲಪತಿ ಎ.ಎಂ.ಖಾನ್ ಅಭಿಪ್ರಾಯಪಟ್ಟರು.

ಮಂಗಳೂರು ನಗರದ ಹೋಟೆಲ್ ಶ್ರೀನಿವಾಸ್‌ನ ಮಂಗಳ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಬ್ಯಾರಿ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬ್ಯಾರಿಗಳ ಭಾಷೆ, ಸಂಸ್ಕೃತಿ, ಆಚಾರ-ವಿಚಾರ ವಿಭಿನ್ನವಾಗಿದೆ. ಪ್ರಾದೇಶಿಕ ಭಿನ್ನತೆಯೂ ಇದೆ. ವ್ಯಾಪಾರ, ಉದ್ದಿಮೆಯಲ್ಲೂ ಬ್ಯಾರಿಗಳು ಮುಂಚೂಣಿಯಲ್ಲಿದ್ದಾರೆ. ಅದೆಷ್ಟೋ ಬ್ಯಾರಿ ಹಿರಿಯರು ನ್ಯಾಯವಾದಿ, ವೈದ್ಯರಾಗಿ ಕಾರ್ಯನಿರ್ವಹಿಸಿದ ನಿದರ್ಶನವೂ ಇದೆ. ಅದನ್ನು ಮುಂದಿನ ಪೀಳಿಗೆ ಮುಂದುವರಿಸುವ ಸಲುವಾಗಿ ಯುವ ಸಮೂಹದಲ್ಲಿ ಜಾಗೃತಿ ಸೃಷ್ಟಿಸಬೇಕಿದೆ ಎಂದು ಎ.ಎಂ. ಖಾನ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೂತನ ಶಿಕ್ಷಣ ನೀತಿಯಲ್ಲಿ ಸಾಧಕಗಳೂ ಇವೆ. ಕೌಶಲ ಅಭಿವೃದ್ಧಿಗೆ ಅವಕಾಶವೂ ಇದೆ. ಈ ನಿಟ್ಟಿನಲ್ಲಿ ಮುಸ್ಲಿಂ ಶಿಕ್ಷಣ ಸಂಸ್ಥೆಗಳು ಗಮನಹರಿಸಿ ಮುಸ್ಲಿಂ ಯುವ ಸಮೂಹದ ಕೌಶಲವನ್ನು ಹೊರತೆಗೆಯಲು ಪ್ರಯತ್ನಿಸಬೇಕಿದೆ ಎಂದು ಎ.ಎಂ. ಖಾನ್ ಕರೆ ನೀಡಿದರು.

‘ನೂತನ ಶಿಕ್ಷಣ ನೀತಿಯ ಬಿಕ್ಕಟ್ಟುಗಳು’ ಎಂಬ ವಿಷಯದಲ್ಲಿ ಮಾತನಾಡಿದ ಕರ್ನಾಟಕ ಮಾಹಿತಿ ಆಯೋಗದ ಆಯುಕ್ತ ಬದ್ರುದ್ದೀನ್ ಕೆ. ಮಾಣಿ ಱನಮ್ಮಲ್ಲಿ ಅದೆಷ್ಟೋ ಮುಸ್ಲಿಂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉನ್ನತ ವ್ಯಾಸಂಗ ಮಾಡಿದ್ದಾರೆ. ಅವರನ್ನು ಸಮುದಾಯ ಹೇಗೆ ಗೌರವಿಸಿದೆ ಮತ್ತು ಅವರು ಸಮಾಜಕ್ಕೆ ಯಾವ ರೀತಿಯ ಕೊಡುಗೆ ನೀಡಿದ್ದಾರೆ ಎಂಬುದರ ಬಗ್ಗೆ ತಿಳಿದುಕೊಳ್ಳಬೇಕಿದೆ. ಕೌಶಲ ಆಧಾರಿತ ಶಿಕ್ಷಣಕ್ಕೆ ಒತ್ತುಕೊಡುವುದರೊಂದಿಗೆ ವೌಲ್ಯಾಧಾರಿತ ಶಿಕ್ಷಣದ ಕಡೆಗೂ ಗಮನಹರಿಸಬೇಕಿದೆ. ಆಡಳಿತಾತ್ಮಕ ಹುದ್ದೆ ಪಡೆಯಲು ಯುವ ಜನಾಂಗ ಪ್ರಯತ್ನ ಮಾಡಬೇಕಿದೆ ಎಂದರು.

WhatsApp Image 2026 01 10 at 6.11.47 PM

ಕರ್ನಾಟಕ ವಿಶ್ವವಿದ್ಯಾನಿಲಯದ ಕುಲಪತಿ ಎ.ಎಂ.ಖಾನ್, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ. ಶಹೀದ್, ಟ್ರಸ್ಟ್‌ನ ಗೌರವಾಧ್ಯಕ್ಷ ಬಿ.ಎಂ. ಹನೀಫ್, ಕರ್ನಾಟಕ ಮಾಹಿತಿ ಆಯೋಗದ ಆಯುಕ್ತ ಬದ್ರುದ್ದೀನ್ ಕೆ. ಮಾಣಿ ಅವರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಬ್ಯಾರಿ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್., ಲೀಗಲ್ ರಿಸರ್ಚ್ ಅಂಡ್ ಜಸ್ಟಿಸ್ ಟ್ರಸ್ಟ್ ಅಧ್ಯಕ್ಷ ಬಿ. ಇಬ್ರಾಹಿಂ,ಮೀಫ್ ಅಧ್ಯಕ್ಷ ಮೂಸಬ್ಬ ಪಿ.ಬ್ಯಾರಿ ಭಾಗವಹಿಸಿದ್ದರು. ಟ್ರಸ್ಟ್ ಅಧ್ಯಕ್ಷ ಬಿ.ಎ. ಮುಹಮ್ಮದ್ ಹನೀಫ್ ಅಧ್ಯಕ್ಷತೆ ವಹಿಸಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಟ್ರಂಪ್ ವಿರುದ್ಧ ಇನ್ನಾದರೂ ಎದೆ ಸೆಟೆಸುವರೇ ಮೋದಿ?

ಕಾರ್ಯಕ್ರಮದಲ್ಲಿ ಟ್ರಸ್ಟಿನ ಕೋಶಾಧಿಕಾರಿ ಎಂ.ಎಚ್. ಮಯ್ಯದ್ದಿ ಬ್ಯಾರಿ ಅಡ್ಡೂರು, ಕಾರ್ಯದರ್ಶಿ ಎಂ.ಎ. ಬಾವಾ ಪದರಂಗಿ, ಮುಖ್ಯ ಸಲಹೆಗಾರ ಮುಹಮ್ಮದ್ ಕುಳಾಯಿ, ಟ್ರಸ್ಟಿಗಳಾದ ಎಂ.ಬಿ. ಅಬ್ದುಲ್ ನಝೀರ್ ಮಠ, ಎಸ್. ಅಬ್ದುಲ್ ಮಜೀದ್ ಕಣ್ಣೂರು, ಅಬ್ದುಲ್ ಸಲಾಂ ಅಬೂಬಕರ್ ತೋಡಾರ್, ಎಸ್. ಅಬ್ದುಲ್ ರಝಾಕ್ ಸೂರಿಂಜೆ, ಎನ್.ಇ. ಮುಹಮ್ಮದ್ ಮಲ್ಲೂರು, ಎಂ.ಅಬ್ದುಲ್ ಬಶೀರ್ ಮೊಂಟೆಪದವು, ಎಸ್.ಎ. ಮುಹಮ್ಮದ್ ಕುಂಞಿ ಉಪ್ಪಿನಂಗಡಿ, ಮುಹಮ್ಮದ್ ಜಾಬಿರ್ ಜೋಕಟ್ಟೆ ಪಾಲ್ಗೊಂಡಿದ್ದರು.

ಟ್ರಸ್ಟ್‌ನ ಗೌರವಾಧ್ಯಕ್ಷ ಬಿ.ಎಂ. ಹನೀಫ್ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಬಿ.ಎ.ಷಂಶುದ್ದೀನ್ ಮಡಿಕೇರಿ ಸ್ವಾಗತಿಸಿದರು. ಟ್ರಸ್ಟಿ ರಿಯಾಝ್ ಹುಸೈನ್ ಬಂಟ್ವಾಳ ವಂದಿಸಿದರು. ಉಪಾಧ್ಯಕ್ಷ ಬಿ.ಎ.ಮುಹಮ್ಮದಲಿ ಕಾರ್ಯಕ್ರಮ ನಿರೂಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...