ಮಂಗಳೂರು | ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ: ಸಚಿವ ದಿನೇಶ್ ಗುಂಡೂರಾವ್

Date:

ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ಯಾವುದೇ ಸಮಸ್ಯೆ ಎದುರಾಗದಂತೆ ಅಗತ್ಯ ವ್ಯವಸ್ಥೆ ಮಾಡಿ ಸನ್ನದ್ಧರಾಗಿರುವಂತೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

ಅವರು ಶನಿವಾರ (ಮಾ.2) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಸರಬರಾಜು ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಪ್ರಸಕ್ತ ಪರಿಸ್ಥಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಕಂಡುಬಂದಿಲ್ಲ. ಆದರೂ, ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಾದರೆ, ಅದನ್ನು ನಿಭಾಯಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಈಗಾಗಲೇ ಇದಕ್ಕೆ ಅನುಗುಣವಾಗಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯಲ್ಲಿರುವ ವಿವಿಧ ಕಿರು ಅಣೆಕಟ್ಟುಗಳಲ್ಲಿ ನೀರಿನ ಪ್ರಮಾಣ ತೃಪ್ತಿದಾಯಕವಾಗಿದೆ. ಕುಡಿಯುವ ನೀರಿನ ಸರಬರಾಜಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಅಗತ್ಯ ಬಿದ್ದರೆ ನೇತ್ರಾವತಿ ನದಿಯ ಎ.ಎಂ.ಆರ್ ಡ್ಯಾಂನಿಂದಲೂ ನೀರು ಪಡೆಯಬೇಕು. ಈ ನಿಟ್ಟಿನಲ್ಲಿ ಎಂ.ಆರ್.ಪಿ.ಎಲ್ ಮತ್ತು ಎಸ್ಇಝಡ್ ನಂತಹ  ಜಿಲ್ಲೆಯ ಬೃಹತ್ ಕೈಗಾರಿಕೆಗಳು ಸಹಕರಿಸಬೇಕು. ಕುಡಿಯುವ ನೀರಿನ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಚಿವರು ಸ್ಪಷ್ಟವಾಗಿ ಹೇಳಿದರು.

ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದಾಗ ಅಧಿಕಾರಿಗಳು ತಕ್ಷಣವೇ ಸ್ಪಂದಿಸಬೇಕು. ದಕ್ಷಿಣ ಕನ್ನಡ ಜಿಲ್ಲಾಡಳಿತ ಬರಪರಿಹಾರ ನಿಧಿಯಲ್ಲಿ 3ಕೋಟಿ ರೂಪಾಯಿ ಅನುದಾನ ಇದೆ. ಅಗತ್ಯ ಬಿದ್ದರೆ ಇನ್ನಷ್ಟು ನೆರವು ನೀಡಲಾಗುವುದು ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಆನಂದ್, ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಆನಂದ್ ಮತ್ತಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...