ಮಂಗಳೂರು | ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

Date:

ಕರ್ನಾಟಕ ಸೇರಿ ದೇಶಾದ್ಯಂತ ವಕ್ಫ್‌ ಆಸ್ತಿ ವಿಚಾರ ಚರ್ಚೆ ನಡೆಯುತ್ತಿರುವಾಗಲೇ ಮಂಗಳೂರು ಹೊರವಲಯದ ಮಳಲಿ ಮಸೀದಿಯ ವಿವಾದಕ್ಕೆ ಸಂಬಂಧಿಸಿ ಪಹಣಿ ಪತ್ರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂಬ ಹಿಂದೂ ಸಂಘಟನೆಗಳ ಮನವಿಯನ್ನು ಮಂಗಳೂರು ಸಹಾಯಕ ಕಮಿಷನರ್ (ಎಸಿ) ಕೋರ್ಟ್ ತಿರಸ್ಕರಿಸಿದೆ.

ಮಸೀದಿಯ ಪಹಣಿ ಪತ್ರದಲ್ಲಿ ಸರ್ಕಾರಿ ಭೂಮಿ ಜೊತೆಗೆ ಮಸೀದಿ ಜಾಗ ಎಂದು ನಮೂದಾಗಿರುವ ವಿಚಾರಕ್ಕೆ ಸಂಬಂಧಿಸಿ ಹಿಂದಿನ ಸಹಾಯಕ ಕಮಿಷನರ್ ಕೋರ್ಟ್ ಯಥಾಸ್ಥಿತಿಗೆ ಸೂಚಿಸಿತ್ತು. ಈ ವಿವಾದದ ಕುರಿತು ಮಂಗಳೂರಿನ ಜಿಲ್ಲಾ ಮೂರನೇ ಸಿವಿಲ್ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು, ಅಂತಿಮ ತೀರ್ಪು ಬರುವವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ವಿಶ್ವ ಹಿಂದೂ ಪರಿಷತ್ ಮನವಿ ಸಲ್ಲಿಸಿದ್ದವು. ಈ ಮನವಿಯನ್ನು ಎಸಿ ಕೋರ್ಟ್ ತಿರಸ್ಕರಿಸಿದೆ. ಈ ನಿರ್ಧಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಲು ಸಂಘಪರಿವಾರ ಬೆಂಬಲಿತ ಸಂಘಟನೆ ಮುಂದಾಗಿವೆ.

ಮಳಲಿ ಮಸೀದಿಯ ಪಹಣಿ ಪತ್ರದ ಕಾಲಂ 9ರಲ್ಲಿ ಸರ್ಕಾರಿ ಜಾಗ ಎಂದಿದ್ದು, ಕಾಲಂ 11ರಲ್ಲಿ ಮಸೀದಿಯ ಹೆಸರು ನಮೂದಿಸಲಾಗಿದೆ. ಈ ದ್ವಂದ್ವವನ್ನು ಪ್ರಶ್ನಿಸಿ ಹಿಂದೂ ಸಂಘಟನೆಗಳು ಈ ಹಿಂದಿನ ಸಹಾಯಕ ಕಮಿಷನರ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಲ್ಲದೆ, ಕಂದಾಯ ದಾಖಲೆ (ಆರ್‌ಟಿಸಿ) ಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸುವಲ್ಲಿ ಸಫಲರಾಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮಳಲಿ ಮಸೀದಿ 1

ಈ ಹಿಂದೆ ಮಸೀದಿ ಇರುವ ಸ್ಥಳದ ಆರ್‌ಟಿಸಿಯ ಕಲಂ 9ರಲ್ಲಿ ಕಂದಾಯ ಭೂಮಿ ಎಂದು ಉಲ್ಲೇಖಿಸಲಾಗಿತ್ತು. ಇತ್ತೀಚೆಗೆ ರಾಜ್ಯದ ಹಲವೆಡೆ ಉಂಟಾಗಿರುವ ವಕ್ಫ್ ವಿವಾದ ಹಿನ್ನೆಲೆಯಲ್ಲಿ ಅನುಮಾನ ವ್ಯಕ್ತವಾಗಿ ಮಳಲಿ ಮಸೀದಿ ಬಗ್ಗೆಯೂ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಈ ಹಿಂದಿನ ದಾಖಲೆಯನ್ನು ಬದಲಾಯಿಸಬಾರದು. ಈ ಬಗ್ಗೆ ಸಿವಿಲ್‌ ನ್ಯಾಯಾಲಯದಲ್ಲಿರುವ ವ್ಯಾಜ್ಯ ತೀರ್ಮಾನ ಆಗುವವರೆಗೂ ಯಾವುದೇ ಪ್ರಕ್ರಿಯೆ ನಡೆಸಬಾರದು ಎಂದು ವಿಹಿಂಪ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಹಿಂದುತ್ವ ಸಂಘಟನೆಯ ಮನವಿಯನ್ನು ಮಂಗಳೂರು ಸಹಾಯಕ ಕಮಿಷನರ್ (ಎಸಿ) ಕೋರ್ಟ್ ತಿರಸ್ಕರಿಸಿದೆ.

ಏನಿದು ವಿವಾದ?

2022ರಲ್ಲಿ ಮಳಲಿ ಮಸೀದಿ ನವೀಕರಣ ವೇಳೆ ಹಿಂದೂ ಧಾರ್ಮಿಕ ಕೇಂದ್ರದ ಕುರುಹು ಪತ್ತೆಯಾಗಿದೆ ಎಂದು ಸಂಘಪರಿವಾರ ಗುಲ್ಲೆಬ್ಬಿಸಿದ್ದವು. ಆಗ ಮಸೀದಿ ಕಟ್ಟಡ ಜಾಗದಲ್ಲಿ ಉತ್ಪತನನ ನಡೆಸುವಂತೆ ಕೋರಿ ಹಿಂದೂ ಸಂಘಟನೆಗಳು ಕೋರ್ಟ್‌ಗೆ 2022ರ ಏ.22ರಂದು ಅರ್ಜಿ ಸಲ್ಲಿಸಿದ್ದವು. ಮಸೀದಿ ಆಸ್ತಿ ಯಾರಿಗೆ ಸೇರಿದೆ ಎಂದು ತೀರ್ಮಾನಿಸುವಂತೆ ಜಿಲ್ಲಾ ಸಿವಿಲ್ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ಈ ಕುರಿತ ವಿಚಾರಣೆ ನಡೆಯುತ್ತಿದ್ದು, ಅಂತಿಮ ತೀರ್ಪು ಬಾಕಿ ಇದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...