ಮಂಗಳೂರು | ಮನು ಇಡ್ಯಾ ತುಳುವಿನ ಯುಗ ಪ್ರವರ್ತಕ ನಾಟಕಕಾರ : ಯು.ಕೆ ಕುಮಾರನಾಥ

Date:

ಎಪ್ಪತ್ತರ ದಶಕದ ಬಳಿಕ ತುಳು ರಂಗಭೂಮಿಯ ದಿಕ್ಕು ಬದಲಾಯಿಸಿದ ಯುಗ ಪ್ರವರ್ತಕ ನಾಟಕಕಾರ ಮನು ಇಡ್ಯಾರ ತುಳು ರಂಗಭೂಮಿಯ ಕೊಡುಗೆ ಅಪೂರ್ವದದು ಎಂದು ವಿಜಯ ಕರ್ನಾಟಕ ಪತ್ರಿಕೆಯ ನಿವೃತ್ತ ಸ್ಥಾನೀಯ ಸಂಪಾದಕ ಯು. ಕೆ .ಕುಮಾರನಾಥ ಅವರು ಅಭಿಪ್ರಾಯಪಟ್ಟರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಇಡ್ಯಾ ಸುರತ್ಕಲ್ ಬಿಲ್ಲವ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಅಕಾಡೆಮಿ ಪ್ರಕಟಿಸಿರುವ ಮನು ಇಡ್ಯಾರ ‘ಗಂಧದ ಕೊರಡ್ ‘ಮತ್ತು ‘ತಾಂಗ್ ನಿರೆಲ್ ‘ ನಾಟಕ ಪುಸ್ತಕ ಬಿಡುಗಡೆ ಮತ್ತು ಮನು ಇಡ್ಯಾರಿಗೆ ಚಾವಡಿ ತಮ್ಮನ ಸಮಾರಂಭದಲ್ಲಿ ಪುಸ್ತಕ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ತುಳು ರಂಗಭೂಮಿಗೆ ಹೊಸ ಅಲೆಯ ನಾಟಕಗಳನ್ನು ನೀಡಿದ ಮನು ಇಡ್ಯಾರ ನಾಟಕಗಳ ಅಧ್ಯಯನ ಮತ್ತು ಪ್ರದರ್ಶನಗಳು ನಡೆಯುವ ಅಗತ್ಯವಿದೆ ಎಂದು ಯು. ಕೆ. ಕುಮಾರನಾಥ ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಾವಡಿ ತಮ್ಮನದ ಅಭಿನಂದನಾ ನುಡಿಗಳನ್ನು ಆಡಿದ ಹಿರಿಯ ರಂಗ ನಟಿ ಗೀತಾ ಸುರತ್ಕಲ್ ಅವರು, ಮನು ಇಡ್ಯಾರ ನಾಟಕಗಳ ವಸ್ತು ದೇಸಿಯತನದಿಂದ ಕೂಡಿದ್ದು ಭಾಷೆಯ ಪ್ರೌಡಿಮೆ, ವಿಶಿಷ್ಟ ರಂಗ ನಡೆಯನ್ನು ಹೊಂದಿದೆ, ಇಡ್ಯಾ ಅವರ ಎಲ್ಲಾ ನಾಟಕಗಳು ಪ್ರಕಟವಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

WhatsApp Image 2025 11 13 at 9.09.45 PM

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ಆಧುನಿಕ ತುಳು ನಾಟಕ ರಂಗದಲ್ಲಿ ಅಮೃತ ಸೋಮೇಶ್ವರ ಅವರ ಬಳಿಕ ಮನು ಇಡ್ಯಾ ಅವರು ಶ್ರೇಷ್ಠ ನಾಟಕಗಳನ್ನು ಕೊಟ್ಟವರು, ಮನು ಇಡ್ಯಾ ಅವರ ಒಂದೆರಡು ನಾಟಕಗಳನ್ನು ಇಂಗ್ಲಿಷ್ ಗೆ ಅನುವಾದಿಸಿ ಪ್ರಕಟಿಸುವ ಬಗ್ಗೆ ಪ್ರಯತ್ನಿಸಲಾಗುವುದು ಎಂದರು.

ಸಿಂಗಾರ ಸುರತ್ಕಲ್ ಕಲಾ ಸಂಸ್ಥೆಯ ಕಾರ್ಯದರ್ಶಿ ಪ್ರೊ. ಕೃಷ್ಣಮೂರ್ತಿ, ಇಡ್ಯಾ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷೆ ಯಮುನಾ ಶೇಖರ್ ಶುಭ ಹಾರೈಸಿದರು. ಸುಶೀಲ ಮನು ಇಡ್ಯಾ ಉಪಸ್ಥಿತರಿದ್ದರು. ಅಕಾಡೆಮಿಯ ಸದಸ್ಯ ಸಂಚಾಲಕ ಮತ್ತು ರಂಗ ನಿರ್ದೇಶಕ ಉದ್ಯಾವರ ನಾಗೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಶ್ರೀ ನಾರಾಯಣ ಗುರು ಮಂದಿರ ಮತ್ತು ವಿಠೋಭ ರುಕುಮಾಯಿ ದೇಗುಲದ ಪುನರ್ ನಿರ್ಮಾಣ ಸಮಿತಿಯ ಅಧ್ಯಕ್ಷ ಚಂದ್ರಶೇಖರ ನಾನಿಲ್ ಸ್ವಾಗತಿಸಿದರು. ಕನ್ನಡ ಸಾಹಿತ್ಯ ಪರಿಷತ್ ಸುರತ್ಕಲ್ ಹೋಬಳಿ ಘಟಕದ ಅಧ್ಯಕ್ಷೆ ಗುಣವತಿ ರಮೇಶ್ ಅಭಿನಂದನಾ ಪತ್ರ ವಾಚಿಸಿದರು. ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯದರ್ಶಿ ಮಧುಸೂದನ ಇಡ್ಯಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...