ಮಂಗಳೂರು | ಗ್ರಾಮೀಣ ಜನರ ಸಮಸ್ಯೆ ನಿವಾರಣೆಗೆ ಮಾಧ್ಯಮ ರಂಗದ ಪ್ರಯತ್ನ ಮಾದರಿ: ಡಿಸಿ ಮುಲ್ಲೈ ಮುಗಿಲನ್

Date:

ಗ್ರಾಮೀಣ ಭಾಗದ ಜನರ ಸಮಸ್ಯೆಗಳ ಬಗ್ಗೆ ಪ್ರಜಾಪ್ರಭುತ್ವದ ನಾಲ್ಕನೆ ಅಂಗವೆಂದು ಪರಿಗಣಿಸಲ್ಪಟ್ಟ ಮಾಧ್ಯಮ ರಂಗದ ಪ್ರತಿನಿಧಿಗಳು ಗಮನ ಹರಿಸಿ,ನಿವಾರಣೆಗೆ ನಿರಂತರವಾಗಿ ಪ್ರಯತ್ನಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಅವರು ಮಂಗಳೂರು ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಎಂಸಿಎಫ್ ಸಂಸ್ಥೆಯ ಸಿಎಸ್‌ಆರ್ ನಿಧಿಯ ಮೂಲಕ ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಿಸಿ ಮಾತನಾಡುತ್ತಿದ್ದರು.

“ಮಾಧ್ಯಮಗಳು ಜನರ ಸಮಸ್ಯೆ ಗಳ ಬಗ್ಗೆ ಬೆಳಕು ಚೆಲ್ಲುವುದರ ಜೊತೆ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತದ ಜೊತೆ ಅಲ್ಲಿನ ಸ್ಥತ ಜನರ ಜೊತೆ ಸೇರಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಗ್ರಾಮೀಣ ಭಾಗದಲ್ಲಿ ನಡೆಸುತ್ತಿರುವ ಗ್ರಾಮ ವಾಸ್ತವ್ಯದ ಮೂಲಕ ಅವರ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಿರುವುದು ಮತ್ತು ಆ ಸಮಸ್ಯೆ ಪರಿಹರಿಸಲು ಗ್ರಾಮದ ಜನರು ಜೊತೆ ಸೇರಿ ಮಾಡುತ್ತಿರುವ ಕೆಲಸ ತಾನು ಇತರ ಕಡೆ ನೋಡಿಲ್ಲ‌. ಇದು ಜಿಲ್ಲೆಯ ಅಭಿವೃದ್ಧಿಗೆ ಪೂರಕ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 10 28 at 6.38.00 PM

ಇದೇ ಸಂದರ್ಭದಲ್ಲಿ ಕುತ್ಲೂರು ಗ್ರಾಮದ ಸಾಹಸ ಪ್ರವಾಸೋದ್ಯಮ ಸಾಕ್ಷ್ಯಚಿತ್ರದ ಮೂಲಕ ಪ್ರಶಸ್ತಿ ಪಡೆದ ಕುತ್ಲೂರು ಗ್ರಾಮದ ಪ್ರತಿನಿಧಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಸನ್ಮಾನಿಸಿದರು.

ಸಮಾರಂಭದ ವೇದಿಕೆಯಲ್ಲಿ ಎಂಸಿಎಫ್‌ನ ಚೀಫ್ ಪ್ರೊಡಕ್ಷನ್ ಆಫೀಸರ್ ಗಿರೀಶ್ ಎಂಸಿಎಫ್ ನ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸುತ್ತಾ, ಕುತ್ಲೂರು ಗ್ರಾಮಾಂತರ ಪ್ರದೇಶ ಸೇರಿದಂತೆ ಸಂಸ್ಥೆಯ ಸಿಎಸ್‌ಆರ್ ನಿಧಿಯ ವತಿಯಿಂದ ಸುಮಾರು 350 ಮಕ್ಕಳಿಗೆ ಈ ಬಾರಿ ಸಮವಸ್ತ್ರ ನೀಡಲು ಸಂತೋಷಪಡುವುದಾಗಿ ತಿಳಿಸಿದ್ದಾರೆ.

ಇದನ್ನು ಓದಿದ್ದಿರಾ? ಕರ್ನಾಟಕದ ಲಾರಿ ಚಾಲಕನಿಗೆ ಅಮಾನುಷ ಹಲ್ಲೆಗೈದ ತಮಿಳುನಾಡು ಟ್ರಾಫಿಕ್ ಪೊಲೀಸ್: ವಿಡಿಯೋ ವೈರಲ್

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಎಂಸಿಎಫ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಅವಿನಂದನ್, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಮಚಂದ್ರ ಭಟ್ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿ, ಪ್ರದಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...