ಮಂಗಳೂರು | ಮೀಫ್ ಎಕ್ಸಲೆನ್ಸ್ ಅವಾರ್ಡ್ 2025: ಅನುಗ್ರಹ ಕಾಲೇಜಿಗೆ ದ್ವಿತೀಯ ಅತ್ಯುತ್ತಮ ಕಾಲೇಜು ಪುರಸ್ಕಾರ

Date:

ಮಂಗಳೂರು ನಗರದ ಬರಕಾ ಇಂಟರ್ನ್ಯಾಷನಲ್ ಸ್ಕೂಲ್ ಅಡಿಟೋರಿಯಂನಲ್ಲಿ ದ.ಕ. ಉಡುಪಿ, ಕೊಡಗು, ಮತ್ತು ಚಿಕ್ಕಮಗಳೂರು ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ವತಿಯಿಂದ ನಡೆದ ‘ಮೀಫ್ ಎಕ್ಸಲೆನ್ಸ್ ಅವಾರ್ಡ್ 2024-25’ ರಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ಎಲ್ಲಾ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಮತ್ತು 100% ಫಲಿತಾಂಶ ದಾಖಲಿಸಿದ ವಿದ್ಯಾ ಸಂಸ್ಥೆಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಆಳ್ವಾಸ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಡಾ.ಮೋಹನ್‌ ಆಳ್ವ, ಮೀಫ್ ಇದರ ಗೌರವಾನ್ವಿತ ಅಧ್ಯಕ್ಷರಾದ ಉಮ್ಮರ್ ಟೀಕೆ, ಮುಖ್ಯ ಅತಿಥಿಯಾಗಿ ಬರಕ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಅಶ್ರಫ್ ಬಜ್ಜೆ, ಪ್ರೆಸಿಡೆನ್ಸಿ ವಿದ್ಯಾಸಂಸ್ಥೆಗಳ ಉಪಾಧ್ಯಕ್ಷರಾದ ಸುಹೇಲ್ ಅಹಮದ್‌, ಎಚ್ ಪಿ ಆರ್ ವಿದ್ಯಾಸಂಸ್ಥೆ ಮಣಿಪಾಲ್ ಇದರ ಅಧ್ಯಕ್ಷರಾದ ಹರಿಪ್ರಸಾದ್ ರೈ ಮತ್ತಿತರ ಗಣ್ಯರು ಭಾಗವಹಿಸಿದ್ದರು.

ಮೀಫ್ ಸದಸ್ಯತ್ವ ಪಡೆದ ಪದವಿಪೂರ್ವ ಕಾಲೇಜುಗಳ ಪೈಕಿ ಪಿ.ಯು.ಸಿ. ಬೋರ್ಡ್ ಪರೀಕ್ಷೆಯಲ್ಲಿ ಅತೀ ಹೆಚ್ಚು ಡಿಸ್ಟಿಂಕ್ಷನ್ ಮತ್ತು ಪ್ರಥಮ ಶ್ರೇಣಿ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆಗೈದು ಕಲ್ಲಡ್ಕದ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜು ದ್ವಿತೀಯ ಬಾರಿಗೆ ದ್ವಿತೀಯ ‘ಅತ್ಯುತ್ತಮ ಕಾಲೇಜು ಪುರಸ್ಕಾರ’ ವನ್ನು ಪಡೆದುಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...