ಮಂಗಳೂರು | ‘ಮುಸ್ಲಿಂ’ ಎಂಬ ಕಾರಣಕ್ಕೆ ವಲಸೆ ಕಾರ್ಮಿಕನ ಗುಂಪು ಹತ್ಯೆ ಖಚಿತ: 15 ಮಂದಿ ಆರೋಪಿಗಳ ಬಂಧನ

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಹೊರವಲಯದ ಕುಡುಪು ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾದ ಘಟನೆ ತಿರುವು ಪಡೆದುಕೊಂಡಿದ್ದು, ಗುಂಪಿನಿಂದ ಹಲ್ಲೆಗೊಳಗಾಗಿ ಹತ್ಯೆಯಾಗಿರುವುದನ್ನು ಪೊಲೀಸರು ಖಚಿತಪಡಿಸಿಕೊಂಡಿರುವುದಾಗಿ ಈದಿನ ಡಾಟ್ ಕಾಮ್‌ಗೆ ತಿಳಿದು ಬಂದಿದೆ.

ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಗುಂಪು ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಸುಮಾರು 15 ಮಂದಿ ಆರೋಪಿಗಳನ್ನು ತಡರಾತ್ರಿ ಬಂಧಿಸಿರುವುದಾಗಿ ವರದಿಯಾಗಿದೆ. ಆದರೆ, ಈ ಬಗ್ಗೆ ಇನ್ನೂ ಕೂಡ ಮಂಗಳೂರು ನಗರ ಪೊಲೀಸರು ಅಧಿಕೃತ ಮಾಹಿತಿ ನೀಡಿಲ್ಲ. ವಶಕ್ಕೆ ತೆಗೆದುಕೊಂಡ ಆರೋಪಿಗಳಿಂದ ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವುದಾಗಿ ತಿಳಿದು ಬಂದಿದೆ. ಅಲ್ಲದೇ, ‘ಮುಸ್ಲಿಂ’ ಎಂಬ ಕಾರಣಕ್ಕಾಗಿಯೇ ವಲಸೆ ಕಾರ್ಮಿಕನ ಮೇಲೆ ಹಲ್ಲೆ ಮಾಡಿ, ಹತ್ಯೆಗೈದಿರುವುದಾಗಿ ಪೊಲೀಸರ ತನಿಖೆಯ ವೇಳೆ ಖಚಿತವಾಗಿದೆ ಎಂದು ತಿಳಿದು ಬಂದಿದೆ.

ಘಟನೆಯ ಬಗ್ಗೆ ಹೆಚ್ಚು ಮಾಹಿತಿ ನೀಡಲು ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿರುವುದಾಗಿ ಈದಿನ ಡಾಟ್ ಕಾಮ್‌ಗೆ ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಘಟನೆಯ ಬಗ್ಗೆ ಈದಿನ ಡಾಟ್ ಕಾಮ್ ಮಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ಸಂಪರ್ಕಿಸಿದಾಗ, “ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸುದ್ದಿಗೋಷ್ಠಿಯಲ್ಲಿ ನೀಡಲಿದ್ದೇವೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಸಮಗ್ರ ತನಿಖೆಗೆ ಸಮಾನ ಮನಸ್ಕ ಮುಖಂಡರ ಆಗ್ರಹ

ಘಟನೆಯ ಬಗ್ಗೆ ಇನ್ನೂ ಹೆಚ್ಚಿನ ತನಿಖೆ ನಡೆಯಬೇಕು ಎಂದು ಮಂಗಳೂರಿನ ಸಮಾನ ಮನಸ್ಕ ಮುಖಂಡರು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮುಖಂಡರಾದ ಶಾಹುಲ್ ಹಮೀದ್ ಕೆ.ಕೆ, ಡಿವೈಎಫ್‌ಐ ಮುಖಂಡರಾದ ಇಮ್ತಿಯಾಝ್, ಸಂತೋಷ್ ಕುಮಾರ್ ಬಜಾಲ್, ಎಸ್‌ಡಿಪಿಐ ಮುಖಂಡರಾದ ಜಲೀಲ್ ಕೃಷ್ಣಾಪುರ, ಅನ್ವರ್ ಸಾದಾತ್ ಬಜತ್ತೂರು ಆಗ್ರಹಿಸಿದ್ದಾರೆ.

1000316646 2

ಏನಿದು ಘಟನೆ?

ಕರಾವಳಿ ಜಿಲ್ಲೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದಲ್ಲಿ ಮುಸ್ಲಿಂ ವಲಸೆ ಕಾರ್ಮಿಕನೋರ್ವನನ್ನು ಸುಮಾರು 50 ಜನರ ಗುಂಪೊಂದು ಹಲ್ಲೆ ನಡೆಸಿ, ಹತ್ಯೆಗೈದಿರುವ ಆರೋಪವೊಂದು ಕೇಳಿಬಂದಿತ್ತು.

ನಗರದ ಹೊರವಲಯದ ಕುಡುಪು ಸಮೀಪ ರವಿವಾರ ಸಂಜೆ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಇದೀಗ ಪ್ರಕರಣವು ತಿರುವು ಪಡೆದಿದ್ದು, ‘ಮುಸ್ಲಿಂ’ ಎಂಬ ಕಾರಣಕ್ಕೆ ಯುವಕನನ್ನು ಗುಂಪು ಹತ್ಯೆ ಮಾಡಿರುವ ಆರೋಪ ಕೇಳಿಬಂದಿದ್ದವು.

1000316654

ಮೃತ ಯುವಕ ಉತ್ತರ ಭಾರತ ಮೂಲದವನು ಎನ್ನಲಾಗಿದ್ದು, ಹೆಸರು, ವಿವರ ಇನ್ನೂ ಪತ್ತೆಯಾಗಿಲ್ಲ. ಸುಮಾರು 35ರಿಂದ 40 ವರ್ಷ ಪ್ರಾಯದ ಈ ಯುವಕನನ್ನು 50 ಮಂದಿಯ ಗುಂಪು ಬ್ಯಾಟ್, ದೊಣ್ಣೆಯಿಂದ ಹಲ್ಲೆ ಮಾಡಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. 50 ಜನರ ಗುಂಪಿನಲ್ಲಿ ಮಾಜಿ ಕಾರ್ಪೊರೇಟರ್ ಒಬ್ಬರ ಪತಿಯೂ ಭಾಗಿಯಾಗಿದ್ದರು ಎಂಬ ಮಾತುಗಳು ಕೇಳಿಬಂದಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಕಾಂಗ್ರೆಸ್ ಮತ್ತು ಸಿಪಿಎಂ ಆಗ್ರಹಿಸಿತ್ತು.

ಸದ್ಯ ಮೃತದೇಹವು ವೆನ್ಲಾಕ್ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿದ್ದು, ಯಾರೂ ವಾರೀಸುದಾರರು ಬಂದಿಲ್ಲದೇ ಇರುವುದರಿಂದ ಮರಣೋತ್ತರ ಪರೀಕ್ಷೆ ಕೂಡ ನಡೆಸಿಲ್ಲ ಎಂದು ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...