ಮಂಗಳೂರು | ಅಲ್ಪಸಂಖ್ಯಾತರ ವಸತಿ ಶಾಲೆ; 6ನೇ ತರಗತಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗಾಗಿ ದ.ಕ ಜಿಲ್ಲೆಯಲ್ಲಿರುವ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳಿಗೆ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಏಪ್ರಿಲ್‌ 10ರವರೆಗೆ ʼಸೇವಾ ಸಿಂಧು ಪೋರ್ಟಲ್‌ʼನಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಅಸೈಗೋಳಿ ಉಳ್ಳಾಲ (ಇಂಗ್ಲೀಷ್ ಮೀಡಿಯಂ, ಪಠ್ಯಕ್ರಮ-ಸಿಬಿಎಸ್ಇ) ಹಾಗೂ ಸರ್ಕಾರಿ ಮುಸ್ಲಿಂ ವಸತಿ ಶಾಲೆ ಅಸೈ ಮದಕ, ಕೊಣಾಜೆ(ಇಂಗ್ಲೀಷ್ ಮೀಡಿಯಂ, ಸ್ಟೇಟ್ ಸಿಲೆಬಸ್) ವಸತಿ ಶಾಲೆಗಳಲ್ಲಿ ಪ್ರವೇಶಾತಿ ಪಡೆಯಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿ ವಿದ್ಯಾರ್ಥಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಉಚಿತ ಶಿಕ್ಷಣ, ಉಚಿತ ಸಮವಸ್ತ್ರ, ಬೂಟು, ಕಾಲು ಚೀಲ ಪೂರೈಕೆ, ಪಠ್ಯ ಪುಸ್ತಕ ಮತ್ತು ಲೇಖನ ಸಾಮಗ್ರಿ ನೀಡಲಾಗುತ್ತದೆ. ಶಾಲೆಗಳಲ್ಲಿ ವೈದ್ಯಕೀಯ ಸೌಲಭ್ಯ, ಹಾಸಿಗೆ ಹೊದಿಕೆ, ಟ್ರಂಕ್, ಮಂಚ, ಪ್ರಯೋಗ ಶಾಲೆ ಉಪಕರಣ, ಬೋಧನ ಸಲಕರಣೆ, ಕ್ರೀಡಾ ಸಾಮಗ್ರಿ, ಗ್ರಂಥಾಲಯಗಳ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.

ಅರ್ಹ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ https://sevasindhuservices.karnataka.gov.in ಅಥವಾ ಹತ್ತಿರದ ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ಸಲ್ಲಿಸಬಹುದು.

ಇದನ್ನೂ ಓದಿ: ಮಂಗಳೂರು | ಮಹಾನಗರ ಪಾಲಿಕೆಯ ಮಾಜಿ ಉಪ ಮೇಯರ್ ಮುಹಮ್ಮದ್ ಕುಂಜತ್ತಬೈಲ್ ನಿಧನ

ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ: 8277799990 ಅಥವಾ ಪಾಂಡೇಶ್ವರ ಓಲ್ಡ್‍ಕೆಂಟ್ ರೋಡ್‍ನಲ್ಲಿರುವ ಇಲಾಖೆಯ ಕಚೇರಿಗೆ ಭೇಟಿ ನೀಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...