ಮಂಗಳೂರು | ಡಿ.3-4ರಂದು ‘ಬಹುಸಂಸ್ಕೃತಿ ಉತ್ಸವ’: ಲಾಂಛನ ಬಿಡುಗಡೆ

Date:

ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಮಂಗಳೂರಿನಲ್ಲಿ ಡಿಸೆಂಬರ್ 3 ಮತ್ತು 4ರಂದು ನಡೆಯಲಿರುವ ‘ಬಹುಸಂಸ್ಕೃತಿ ಉತ್ಸವ’ದ ಲಾಂಛನವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಬಿಡುಗಡೆಗೊಳಿಸಿದರು.

ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ಬಹುಸಂಸ್ಕೃತಿ ಉತ್ಸವ’ವು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಯಕ್ಷಗಾನ ಅಕಾಡೆಮಿಗಳ ಜಂಟಿ ಆಶ್ರಯದಲ್ಲಿ ಹಾಗೂ ದ.ಕ ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ನಡೆಯಲಿದೆ.

WhatsApp Image 2024 11 16 at 5.00.07 PM 1

ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಾಂಛನ ಬಿಡುಗಡೆಯ ಸರಳ ಸಮಾರಂಭದಲ್ಲಿ ಶಾಸಕ ಯು. ರಾಜೇಶ್ ನಾಯ್ಕ್, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ತುಳು ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್., ಕೊಂಕಣಿ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಆಲ್ವಾರಿಸ್, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯತೀಶ್ ಎನ್., ಮಂಗಳೂರು ಮ.ನ.ಪಾ ಕಮಿಶನರ್ ಕೆ.ಎಲ್. ಆನಂದ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...