ಮಂಗಳೂರು | ಮುಮ್ತಾಝ್ ಅಲಿ ಪ್ರಕರಣ: ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಹಕ್ಕೊತ್ತಾಯ ಸಭೆ

Date:

“ಮಂಗಳೂರಿನ ಖ್ಯಾತ ಉದ್ಯಮಿ ಮುಮ್ತಾಝ್ ಅಲಿಯವರ ಸಾವಿಗೆ ಕಾರಣನಾದವರು ನಾಗರಿಕ ಸಮಾಜದಲ್ಲಿ ಬದುಕಲು ಯೋಗ್ಯರಾದವರಲ್ಲ. ನಾವು ಅಂಥವರನ್ನು ಕಾನೂನು ಕ್ರಮದಿಂದ ಸರಿಸಿಬಿಟ್ಟರೆ ನಾಳೆ ಇನ್ನಷ್ಟು ಮಂದಿ ಸೇತುವೆಯಿಂದ ಹಾರುವ ಸನ್ನಿವೇಶ ಬರಬಹುದು” ಎಂದು ಕೆಪಿಸಿಸಿ ವಕ್ತಾರೆ ಪ್ರತಿಭಾ ಕುಳಾಯಿ ಹೇಳಿದರು.

ಮಂಗಳೂರಿನ ‌ಸುರತ್ಕಲ್ ಜಂಕ್ಷನ್‌ನಲ್ಲಿ ಮುಮ್ತಾಝ್ ಅಲಿ ಅಭಿಮಾನಿ ಬಳಗದಿಂದ ಗುರುವಾರ ನಡೆದ ಹಕ್ಕೊತ್ತಾಯ ಸಭೆಯಲ್ಲಿ ಅವರು ಮಾತನಾಡಿದರು.

“ಇಂಥ ಕೃತ್ಯ ನಡೆಸುವವರನ್ನು ಕಾನೂನಾತ್ಮಕವಾಗಿ ಬಗ್ಗುಬಡಿದರೆ ಮಾತ್ರ ಜೀವ ಕಾಪಾಡಿಕೊಳ್ಳಬಹುದು. ಇಲ್ಲದೆ ಇದ್ದರೆ ಇಂಥ ದ್ರೋಹಿಗಳ ಕುತಂತ್ರಕ್ಕೆ ಬಲಿಯಾಗಬೇಕಾದೀತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸಭೆ 6

“ಆರೋಪಿ ಸತ್ತಾರ್ ನನಗೆ ಕೊಟ್ಟಿರುವ ಹಿಂಸೆ ಇನ್ಯಾರಿಗೂ ಕೊಡುವುದು ಬೇಡ. ನಾನೊಬ್ಬ ಹಿಂದೂ ಮಹಿಳೆಯಾಗಿದ್ದಕ್ಕೆ ಆತನನ್ನು ಎದುರಿಸಿ ಇನ್ನೂ ಗಂಡ ಮಕ್ಕಳ ಜೊತೆಗೆ ಬದುಕಿದ್ದೇನೆ. ಆತ ನನ್ನಿಂದ ಪೆಟ್ಟು ತಿಂದ ಮೇಲೂ ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ನನ್ನ ಹಿಂದೆ ಬಂದು ನಿಂತು ಫೋಟೋ ತೆಗೆಸಿ ಹಾಕುತ್ತಿದ್ದ. ಆತನಿಗೆ 5 ತಿಂಗಳ ಹಿಂದೆ ನಾನೇ ಎಚ್ಚರಿಕೆ ಕೊಟ್ಟಿದ್ದೇನೆ. ಇನ್ನೊಮ್ಮೆ ನನ್ನ ಹಿಂದೆ ಫೋಟೋದಲ್ಲಿ ಕಾಣಿಸಿಕೊಂಡರೆ ನಿನ್ನ ಕೈ ಕಡಿಯುವುದಲ್ಲ ಕತ್ತು ಕಡಿಯುವುದಾಗಿ ಹೇಳಿದ್ದೆ. ಅವತ್ತು ಹಿಂದೂ ಹೆಣ್ಣುಮಕ್ಕಳ ವಿಚಾರದಲ್ಲಿ ಆತನ ಕೈ ಕಡಿಯುವ ಬದಲು ತಲೆ ಕಡಿದಿದ್ದರೆ ಇಂದು ಮುಮ್ತಾಝ್ ಅಲಿಯಂತಹವರು ಸಾಯುತ್ತಿರಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಿಸ್ಬಾ ಮಹಿಳಾ ಕಾಲೇಜ್ ಟ್ರಸ್ಟ್ ಕಾರ್ಯದರ್ಶಿ ಅಬ್ದುಲ್ ರಫೀಕ್ ಜೈನಿ ಕಾಮಿಲ್ ಸಖಾಫಿ ಮಾತನಾಡಿ, ನಾಗರಿಕ ಸಮಾಜಕ್ಕೆ ಕಳಂಕವಾಗಿರುವ ಹನಿ ಟ್ರ್ಯಾಪ್‌ನಂಥ ಕೃತ್ಯವನ್ನು ಮಾಡಿರುವ ತಂಡವನ್ನು ಮಟ್ಟ ಹಾಕಬೇಕು ಎಂದರು.

ಎಸ್‌ಡಿಪಿಐ ಮುಖಂಡ ರಿಯಾಜ್ ಫರಂಗಿಪೇಟೆ ಮಾತನಾಡಿ, ಉದ್ಯಮಿ ಮುಮ್ತಾಝ್ ಅಲಿ ಸಾವಿಗೆ ಕಾರಣರಾದವರನ್ನು ಜಮಾತ್, ಸಾಮಾಜಿಕ ಸಂಘಟನೆಗಳಿಂದ ದೂರವಿಡಬೇಕು ಎಂದು ಹೇಳಿದರು.

ಸಭೆ1 1

“ತನ್ನ ಜೊತೆ ಇದ್ದವರು ಊಟ ಹಾಕಿದವರನ್ನೇ ಇಂದು ಕೊಲ್ಲುತ್ತಾರೆ ಎಂದರೆ ನಮ್ಮ ಸಮಾಜದಲ್ಲಿ ಇನ್ನೂ ಅಂತವರು ಇದ್ದಾರೆ. ಅವರನ್ನು ನಮ್ಮ ಜಮಾತ್ ನಲ್ಲಿಟ್ಟು ಬೆಳೆಸುತ್ತಿರುವುದು ಅವರನ್ನು ಗುರುತಿಸುವಲ್ಲಿ ವಿಫಲರಾಗಿರುವುದು ನಮ್ಮ ದೊಡ್ಡ ತಪ್ಪು. ನಮ್ಮ ಮಸೀದಿ, ಸಾಮಾಜಿಕ ಸಂಘಟನೆಗಳಿಂದ ಅಂತವರನ್ನು ದೂರವಿಡಬೇಕು. ಮುಂದೆ ಇನ್ನಷ್ಟು ಮಂದಿ ಮೋಸದ ಜಾಲಕ್ಕೆ ಬಲಿಯಾಗಬಾರದು. ಆ ಜವಾಬ್ದಾರಿಯನ್ನು ನಾವು ನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಹೋರಾಟದ ಅಗತ್ಯವಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದರು.

ಎಸಿಪಿ ಶ್ರೀಕಾಂತ್ ಮೂಲಕ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಯಿತು. ಮಿಸ್ಬಾ ಕಾಲೇಜು ಪ್ರಾಂಶುಪಾಲೆ ಝಯಿದ ಜಲೀಲ್, ಕಾರ್ಪೊರೇಟರ್‌ ಸಂಶಾದ್ ಅಬೂಬಕರ್, ಹ್ಯಾರಿಸ್ ಬೈಕಂಪಾಡಿ ಭಾಗವಹಿಸಿದ್ದರು.

ಸುರತ್ಕಲಗ
ಸಭೆ4
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...