ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ, ದಕ್ಷಿಣ ಕನ್ನಡ ಘಟಕ ಇದರ 2026ನೇ ಅವಧಿಗೆ ಮುಸ್ತಫಾ ಬೆಂಗ್ರೆ ಅವರು ಜಿಲ್ಲಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಎಸ್ಐಒ ಕರ್ನಾಟಕ ರಾಜ್ಯ ಕಾರ್ಯದರ್ಶಿ ಸುಫಿಯಾನ್ ಝೈನ್ ಅವರ ನೇತೃತ್ವದಲ್ಲಿ ನಡೆದ ಆಂತರಿಕ ಸಾಂಸ್ಥಿಕ ಪ್ರಕ್ರಿಯೆಯ ಮೂಲಕ ಈ ಚುನಾವಣೆ ನಡೆಸಲಾಯಿತು.
ಮುಸ್ತಫಾ ಬೆಂಗ್ರೆ ಅವರು ಮಂಗಳೂರು ವಿಶ್ವವಿದ್ಯಾಲಯದಿಂದ ಬಿಬಿಎ ಪದವಿಯನ್ನು ಪಡೆದಿದ್ದು, ಮಂಗಳೂರಿನ ಕಸ್ಬಾ ಬೆಂಗ್ರೆ ನಿವಾಸಿಯಾಗಿದ್ದಾರೆ. ಪ್ರಸ್ತುತ ಅವರು ವಿಬ್ರೋ ಆಕ್ವಾ ಸಂಸ್ಥೆಯಲ್ಲಿ ಮಾರಾಟ ಕಾರ್ಯನಿರ್ವಾಹಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಈ ಹಿಂದೆ ಅವರು ಎಸ್ಐಒ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮತ್ತು ಎಸ್ಐಒ ಮಂಗಳೂರು ನಗರ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಬೆಂಗ್ರೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಲವು ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.





