ಮಂಗಳೂರು | ನೀಟ್ ಫಲಿತಾಂಶ: ಬರಕಾ ಸಂಸ್ಥೆಗೆ ಶೇ. 100 ಫಲಿತಾಂಶ

Date:

ಮಂಗಳೂರಿನ ಅಡ್ಯಾರ್‌ನಲ್ಲಿರುವ ನೀಟ್ ತರಬೇತಿ ಸಂಸ್ಥೆಯಾದ ಬರಕಃ ನೀಟ್ ಅಕಾಡೆಮಿ ತನ್ನ ಮೊದಲ ಬ್ಯಾಚ್ ನ ನೀಟ್ ಪರೀಕ್ಷೆಯಲ್ಲಿ ಅತ್ಯುತ್ತಮ 100% ಫಲಿತಾಂಶವನ್ನು ಸಾಧಿಸಿದೆ . ಈ ಅತ್ಯುತ್ತಮ ಸಾಧನೆಯು ಉತ್ತಮ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಮತ್ತು ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಪೋಷಿಸುವ ಅಕಾಡೆಮಿಯ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

25% ವಿದ್ಯಾರ್ಥಿಗಳು ಸರ್ಕಾರಿ ಎಂಬಿಬಿಎಸ್‌ ಸೀಟುಗಳಿಗೆ ಅರ್ಹತೆ ಪಡೆದಿದ್ದರೆ, ಉಳಿದವರು BDS, BAMS ಮತ್ತು ಇತರ ವೈದ್ಯಕೀಯ ಸೀಟುಗಳಿಗೆ ಅರ್ಹತೆ ಪಡೆದಿದ್ದಾರೆ ಎಂದು ಬರಕಾ ಇಂಟರ್‌ ನ್ಯಾಷನಲ್ ಸಂಸ್ಥೆಯ ಪ್ರಾಂಶುಪಾಲ ಡಾ. ಶರ್ಫುದ್ದೀನ್ ತಿಳಿಸಿದ್ದಾರೆ.

ಅಕಾಡೆಮಿಯ ವಿದ್ಯಾರ್ಥಿನಿ ಕೌಸರ್ 502 ಪ್ರಭಾವಶಾಲಿ ಅಂಕಗಳೊಂದಿಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ಇತರ 8 ವಿದ್ಯಾರ್ಥಿಗಳು 460 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸುವ ಮೂಲಕ ಸರ್ಕಾರಿ ವೈದ್ಯಕೀಯ ಸೀಟುಗಳಿಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಮೊದಲ ಬ್ಯಾಚ್‌ನ ಎಲ್ಲಾ 32 ವಿದ್ಯಾರ್ಥಿನಿಯರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ, ಇದು ವಿದ್ಯಾರ್ಥಿನಿಯರ ವೈವಿಧ್ಯಮಯ ಕಲಿಕಾ ಅಗತ್ಯಗಳನ್ನು ಪೂರೈಸುವ ಅಕಾಡೆಮಿಯ ಸಾಮರ್ಥ್ಯವನ್ನು ತೋರಿಸುತ್ತದೆ ಎಂದು ಸಂಸ್ಥೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
rank

ಇದನ್ನು ಓದಿದ್ಧೀರಾ? ಟಿಕೆಟ್ ಇಲ್ಲದೆ ಪ್ರಯಾಣ: 4 ಸಾವಿರ ಪ್ರಯಾಣಿಕರಿಂದ 7 ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಿದ ಕೆಎಸ್‌ಆರ್‌ಟಿಸಿ

ಇಸ್ಲಾಮಿಕ್ ಶೈಲಿಯ ವಾತಾವರಣದೊಂದಿಗೆ ಸ್ಥಾಪಿಸಲಾಗಿರುವ ಬರಕಃ ನೀಟ್ ಅಕಾಡೆಮಿ ಈ ಮೂಲಕ ಒಂದು ಹೊಸ ಮೈಲುಗಲ್ಲು ಕ್ರಮಿಸಿದಂತಾಗಿದೆ ಎಂದು ಸಂಸ್ಥೆ ತಿಳಿಸಿದ್ದು, ಪ್ರತಿಭಾನ್ವಿತ ಮಕ್ಕಳನ್ನು ದಾಖಲಿಸಿಕೊಳ್ಳಲು ಮತ್ತು ಸಂಸ್ಥೆಯ ಬಗ್ಗೆ ಕುರಿತು ಹೆಚ್ಚಿನ ಮಾಹಿತಿಗಾಗಿ 9108243155, 9880060986 ಅಥವಾ 9611903137 ಮೊಬೈಲ್ ನಂಬರನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...