ಮಂಗಳೂರು | ಫೆ.28ರಿಂದ ಮಾ.3ವರೆಗೆ ನಿರ್ದಿಗಂತ ನಾಟಕೋತ್ಸವ: ಪ್ರಕಾಶ್ ರಾಜ್

Date:

ಯುವ ಮನಸ್ಸುಗಳನ್ನು ರಂಗಭೂಮಿಯತ್ತ ಸೆಳೆಯುವ ಉದ್ದೇಶದಿಂದ ತಮ್ಮ ನಿರ್ದಿಗಂತ ತಂಡವು ನಿರ್ದಿಗಂತ ನಾಟಕೋತ್ಸವ ನಡೆಸುತ್ತಿದೆ. ಈ ಬಾರಿ, ಮಂಗಳೂರಿನಲ್ಲಿ ‘ಸೌಹಾರ್ದದ ಬಳಿ; ನಮ್ಮ ಕರಾವಳಿ’ ಎಂಬ ಶೀರ್ಷಿಕೆಯಡಿ ಫೆಬ್ರವರಿ 28ರಿಂದ ಮಾರ್ಚ್‌ 3ರವರೆಗೆ ನಾಟಕೋತ್ಸವ ನಡೆಯಲಿದೆ ಎಂದು ಖ್ಯಾತ ನಟ ಪ್ರಕಾಶ್‌ ರಾಜ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಾಟಕೋತ್ಸವ ನಡೆಯಲಿದೆ. ತುಳು, ಕೊಂಕಣಿ ಸೇರಿದಂತೆ ರಂಗಭೂಮಿ ನಿರ್ದೇಶಕರಿಂದ ರಚನೆಗೊಂಡಿರುವ 8 ನಾಟಕಗಳ ಪ್ರದರ್ಶನ ಇರಲಿದೆ. ಜೊತೆಗೆ, ವಿವಿಧ ರೀತಿಯ ಕಾರ್ಯಾಗಾರ, ವಿಚಾರಗೋಷ್ಠಿ, ಬೀದಿನಾಟಕಗಳನ್ನು ಆಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ.

“ನಾಟಕೋತ್ಸವವನ್ನು ಸಂತ ಅಲೋಶಿಯಸ್ ಕಾಲೇಜಿನ ಕುಲಪತಿ ರೆ.ಡಾ. ಪ್ರವೀಣ್ ಮಾರ್ಟಿಸ್ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಗುತ್ತದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಆಶಯ ಭಾಷಣ ಮಾಡಲಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಟಕೋತ್ಸವದಲ್ಲಿ ಬಿಜಾಪುರದ ಸ್ಪಿನ್ನಿಂಗ್ ಟ್ರೀ ಥಿಯೇಟರ್ ತಂಡ ಪ್ರಸ್ತುತಪಡಿಸಲಿರುವ ‘ಫಾರ್ ಎ ಬೈಟ್ ಆಫ್ ಫುಡ್’, ಮಂಗಳೂರು ಯಕ್ಷಮಿತ್ರರು ತಂಡದಿಂದ ‘ಕೋಟಿ ಚೆನ್ನಯ’ ಯಕ್ಷಗಾನ, ಧಾರವಾಡದ ಆಟಮಾಟ ತಂಡ ಹಾಗೂ ಮಹದೇವ ಹಡಪದ ನಿರ್ದೇಶನದ ‘ಗುಡಿಯ ನೋಡಿರಣ್ಣ’, ಸಂತ ಅಲೋಶಿಯಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ತಂಡದಿಂದ ‘ಹ್ಯಾಂಗಾನ್’ ಕೊಂಕಣಿ ನಾಟಕ, ಕೇರಳದ ಲಿಟಲ್ ಅರ್ತ್ ಸ್ಕೂಲ್ ಆಫ್ ಥಿಯೇಟರ್ ತಂಡದಿಂದ ‘ಕುಹೂ: ಆಂತಾಲಜಿ ಆನ್ ದ ರೈಲ್ಸ್’, ನಿರ್ದಿಗಂತ ತಂಡದಿಂದ ‘ರಸೀದಿ ಟಿಕೇಟ್’, ಹಾಗೂ ‘ತಿಂಡಿಗೆ ಬಂದ ತುಂಡೇರಾಯ’ ನಾಟಕಗಳು ಪ್ರದರ್ಶನಗೊಳ್ಳಲಿವೆ” ಎಂದು ಪ್ರಕಾಶ್ ವಿವರಿಸಿದ್ದಾರೆ.

ಅಲ್ಲದೆ, ಡಾ. ಗಣನಾಥ ಎಕ್ಕಾರು ಅವರಿಂದ ‘ಬದಲಾಗುತ್ತಿರುವ ಯಕ್ಷಗಾನದ ಸ್ವರೂಪ’ ಎಂಬ ಬಗ್ಗೆ ವಿಷಯ ಮಂಡನೆ ಮಾಡಲಿದ್ದಾರೆ. ಸಂತ ಅಲೋಶಿಯಸ್ ಕಾಲೇಜು ತಂಡದಿಂದ ಕಾಲೇಜ್ ಬ್ಯಾಂಡ್ ಜ್ಯಾಮಿಂಗ್ ನಡೆಯಲಿದೆ. ಡಾ. ಮೋಹನ್ ಕುಂಟಾರ್ ಅವರು ‘ಕರಾವಳಿಯ ಭಾಷಾ ಸಂಬಂಧದ ಕೊಡುಕೊಳ್ವೆಯ ಸ್ವರೂಪ’ ವಿಷಯದಲ್ಲಿ ಮಾತನಾಡಲಿದ್ದಾರೆ. ಶಾರದಾ ಜಿ. ಬಂಗೇರ ಅವರು ಪಾಡ್ದನ ಹಾಡಲಿದ್ದು, ಐರಿನ್ ರೆಬಲ್ಲೋ ಮತ್ತು ತಂಡದಿಂದ ವೊವಿಯೊ ಕೊಂಕಣಿ ಹಾಡು ಹಾಗೂ ಪೂಜ್ಯ ಸೇಸು ಗೌಡ ಕಲಾ ಟ್ರಸ್ಟ್‌ನಿಂದ ಕುಡುಬಿ ಹಾಡುಗಳು ಪ್ರಸ್ತುತಗೊಳ್ಳಲಿವೆ. ವೆಂಕಟರಮಣ ಐತಾಳ್‌ರವರು ‘ಸ್ಥಳೀಯ ಚರಿತ್ರೆಗಳು ಮತ್ತು ಕುಸಿಯುತ್ತಿರುವ ಬಹುತ್ವದ ನೆಲೆ’ ವಿಷಯದ ಕುರಿತು ಮಾತನಾಡಲಿದ್ದಾರೆ. ಅಲ್ಲದೆ, ಕರಗ ಡೋಲು, ಕಾವ್ಯ ವಾಚನ ಸೇಋಇದಂತೆ ಹಲವಾರು ರೀತಿಯ ಕಾರ್ಯಕ್ರಮಗಳು ನಡೆಯಲಿವೆ” ಎಂದು ತಿಳಿಸಿದ್ದಾರೆ.

“ನಾಟಕೋತ್ಸವ ಸಮಾರೋಪವು ಮಾರ್ಚ್‌ 3ರ ಸಂಜೆ ನಡೆಯಲಿದ್ದು, ಸಮಾರೋಪ ಕಾರ್ಯಕ್ರಮದಲ್ಲಿ ಮಲಯಾಳಂ ನಟಿ ಪಾರ್ವತಿ ತಿರುವೊತ್ತು ಭಾವಹಿಸಲಿದ್ದಾರೆ. ಅಂದು, ನಿರ್ದಿಗಂತ ತಂಡದಿಂದ ಅಮಿತ್ ರೆಡ್ಡಿ ನಿರ್ದೇಶನದ ‘ಮೈ ಮನಗಳ ಸುಳಿಯಲ್ಲಿ’ ನಾಟಕ ಪ್ರದರ್ಶನಗೊಳ್ಳಲಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...