ಮಂಗಳೂರು | ಬಂಟ್ವಾಳ-ಮೂಡುಬಿದ್ರೆ ಮಾರ್ಗಕ್ಕೆ ಬಸ್‌ ಸೌಲಭ್ಯ ಕಲ್ಪಿಸಲು NSUI ಮನವಿ

Date:

ಬಂಟ್ವಾಳ – ಮೂಡುಬಿದ್ರೆ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ ಒದಗಿಸಿಕೊಡುವಂತೆ NSUIನ ಮಂಗಳೂರು ಘಟಕದ ವಿದ್ಯಾರ್ಥಿ ನಾಯಕ ಕ್ರಿಸ್ಟನ್ ಮಿನೇಜಸ್ ಎಂಎಲ್‌ಸಿ ಐವನ್ ಡಿಸೋಜಾ ಅವರಿಗೆ ಮನವಿ ಸಲ್ಲಿಸಿದರು.

“ಸರ್ಕಾರಿ ಬಸ್‌ ಸೇವೆ ಇಲ್ಲದೇ ಇರುವ ಕಾರಣ ವಿದ್ಯಾರ್ಥಿಗಳು ಖಾಸಗಿ ಬಸ್‌ ಅವಲಂಬಿಸಬೇಕಾಗಿದೆ. ಪ್ರಯಾಣದ ವೆಚ್ಚವೂ ಹೆಚ್ಚಾಗಿದ್ದು, ಬಸ್‌ಗಳಲ್ಲಿ ಅತೀ ಜನಸಂದಣಿ ವಿದ್ಯಾರ್ಥಿಗಳ ಸುರಕ್ಷತೆಗೆ ತೊಂದರೆ ಉಂಟುಮಾಡುತ್ತಿದೆ. ವಿದ್ಯಾರ್ಥಿಗಳು ಕೆಎಸ್‌ಆರ್‌ಟಿಸಿ ವಿದ್ಯಾರ್ಥಿ ಪಾಸ್‌ಗಳ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ಪ್ರತಿದಿನ ಪ್ರಯಾಣ ವೆಚ್ಚ ಭರಿಸಲು ಕಷ್ಟವಾಗುತ್ತಿದೆ. ಜೊತೆಗೆ, ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಪ್ರಯೋಜನವು ಈ ಮಾರ್ಗದಲ್ಲಿ ಯಾರಿಗೂ ಪಡೆಯಲು ಸಾಧ್ಯವಾಗುತ್ತಿಲ್ಲ. ಕೂಡಲೇ ಈ ಸಮಸ್ಯೆಗಳನ್ನು ಬಗರೆಹರಿಸಿ, ಈ ಮಾರ್ಗಕ್ಕೆ ಬಸ್‌ ಸೌಲಭ್ಯ ಒದಗಿಸಬೇಕು” ಎಂದು ಮನವಿ ಮಾಡಿರುವ ಪತ್ರವನ್ನು ಎಂಎಲ್‌ಸಿ ಐವನ್‌ ಅವರ ಮೂಲಕ ಸಾರಿಗೆ ಸಚಿವರಿಗೂ ಕಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು | ಕೊಂಕಣಿ ಭಾಷಾ ಮಂಡಳ್‌ನ ರಾಜ್ಯಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ರೇಮಂಡ್ ಡಿಕೂನಾ ತಾಕೊಡೆ ಆಯ್ಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳೂರು (ದಕ್ಷಿಣ ಕನ್ನಡ) ಸಾರಿಗೆ ಉಪ ಆಯುಕ್ತ ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ ಮಲ್ಲಾಡ್ ಹಾಗೂ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಅವರನ್ನು ಸ್ವತಃ ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ.

ಎಂಎಲ್‌ಸಿ ಐವನ್ ಡಿಸೋಜಾ ಅವರು ಈ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸೇವೆ ಪ್ರಾರಂಭಿಸಲು ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...