ಮಂಗಳೂರು | ಅಪರೂಪದ ಕಡಲಾಮೆ ಮೊಟ್ಟೆ ಪತ್ತೆ; ಸಂರಕ್ಷಿಸಿದವರನ್ನು ಶ್ಲಾಘಿಸಿದ ಸಚಿವ ಈಶ್ವರ್ ಖಂಡ್ರೆ

Date:

ಮಂಗಳೂರಿನ ತಣ್ಣೀರುಬಾವಿ ಕಡಲ ತೀರದಲ್ಲಿ ಅಪರೂಪದ ‘ಆಲಿವ್ ರೆಡ್ ಲೇ’ ಪ್ರಭೇದದ ಕಡಲಾಮೆ ಮೊಟ್ಟೆಗಳು ಪತ್ತೆಯಾಗಿದ್ದು, ಮೊಟ್ಟೆಗಳನ್ನು ಸಂರಕ್ಷಿಸಿ ಇಡಲಾಗಿದೆ.

ಮಂಗಳವಾರ  ಸ್ಥಳಕ್ಕೆ ಭೇಟಿ ನೀಡಿದ ರಾಜ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮೊಟ್ಟೆಗಳನ್ನು ಸಂರಕ್ಷಣೆ ಮಾಡಿದ ಸ್ಥಳೀಯರನ್ನು ಹಾಗೂ ಇಲಾಖೆಯ ಸಿಬ್ಬಂದಿಗಳನ್ನು ಅಭಿನಂದಿಸಿದರು.

ಮೀನುಗಾರರಿಗೆ ಬಹುಮಾನ
ತಣ್ಣೀರು ಬಾವಿಯ ಕಡಲ ತೀರದಲ್ಲಿ ಅಪರೂಪದ ಆಲಿವ್ ರೆಡ್ ಲೇ ಕಡಲಾಮೆ ಮೊಟ್ಟೆ ಇಟ್ಟಿರುವುದನ್ನು ಪತ್ತೆ ಮಾಡಿ ಸಂರಕ್ಷಣೆಗೆ ನೆರವಾದ ಸಸಿಹಿತ್ಲು ಗ್ರಾಮದ ಮೀನುಗಾರರಾದ ಆನಂದ ಕೋಟ್ಯಾನ್ ಮತ್ತು ವಾಸು ಕೋಟ್ಯಾನ್ ಅವರಿಗೆ ಸಚಿವರು 5 ಸಾವಿರ ರೂಪಾಯಿಗಳ ಬಹುಮಾನ ಮತ್ತು ಪ್ರಶಂಸಾ ಪತ್ರ ಪ್ರದಾನ ಮಾಡಿದರು. ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಹುಮಾನ ಪ್ರದಾನ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ame

ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿದ್ದ ಸಚಿವ ಈಶ್ವರ ಖಂಡ್ರೆ ಸೋಮವಾರ ತಡರಾತ್ರಿ ತಣ್ಣೀರು ಬಾವಿ ಅತಿಥಿ ಗೃಹಕ್ಕೆ ವಿಶ್ರಾಂತಿಗೆ ಆಗಮಿಸಿದ್ದರು. ಈ ವೇಳೆ ಅಧಿಕಾರಿಗಳು ತಣ್ಣೀರುಬಾವಿ ಬೀಚ್‌ನಲ್ಲಿ ಅಪರೂಪದ ಆಲೀವ್ ರೆಡ್ ಲೇ ಆಮೆ 1985ರ ಬಳಿಕ ಇದೇ ಮೊದಲ ಬಾರಿಗೆ ಸಾವಿರಾರು ಮೊಟ್ಟೆ ಇಟ್ಟಿದ್ದು, ಇದನ್ನು ಸಂರಕ್ಷಿಸಿರುವುದಾಗಿ ತಿಳಿಸಿದರು. ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸಚಿವರು ಪರಿಶೀಲಿಸಿ, ಈ ಮೊಟ್ಟೆಗಳು ಮರಿಯಾದ ಬಳಿಕ ಸುರಕ್ಷಿತವಾಗಿ ಕಡಲಿಗೆ ಬಿಡುವಂತೆ ಸೂಚಿಸಿದರು.

aame

ಈ ಅಪರೂಪದ ಆಮೆಗಳ ಮೊಟ್ಟೆ ನಾಯಿ ಮತ್ತು ಪಕ್ಷಿಗಳ ಪಾಲಾಗದಂತೆ ಸುತ್ತಲೂ ಕಟ್ಟೆ ಕಟ್ಟಿ ಸಂರಕ್ಷಿಸಿರುವ ಅರಣ್ಯ ಸಿಬ್ಬಂದಿಯ ಕಾಳಜಿ ಮತ್ತು ತಣ್ಣೀರು ಬಾವಿ ಕಡಲ ತೀರವನ್ನು ಅತ್ಯಂತ ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಅವರ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಾಳನ್, ಕೆ.ಎಸ್.ಡಿ.ಸಿ. ವ್ಯವಸ್ಥಾಪಕ ನಿರ್ದೇಶಕಿ ಕಮಲಾ ಕರಿಕಾಳನ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...