ಮಂಗಳೂರು ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ | 8 ಮಂದಿ ಆರೋಪಿಗಳ ಬಂಧನ: ಗೃಹ ಸಚಿವ ಪರಮೇಶ್ವರ್

Date:

ಮಂಗಳೂರು ನಗರದ ಬಜಪೆ ಸಮೀಪ ಮೇ 1ರ ಗುರುವಾರದಂದು ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಎಂಟು ಮಂದಿಯನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ ಎಂದು ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಶನಿವಾರ (ಮೇ 03) ನಗರದ ಕಮಿಷನ‌ರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶುಕ್ರವಾರ ರಾತ್ರಿ ಆರೋಪಿಗಳನ್ನು ಬಂಧಿಸಲಾಗಿದೆ. ಅವರ ಹಿನ್ನೆಲೆ, ಘಟನೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಅಬ್ದುಲ್ ಸಫ್ವಾನ್, ನಿಯಾಜ್ ಶಾಂತಿಗುಡ್ಡೆ, ಬಜ್ಪೆ, ಮೊಹಮ್ಮದ್ ಮುಝಮ್ಮಿಲ್, ಕಲಂದರ್ ಶಾಫಿ, ರಂಜಿತ್, ನಾಗರಾಜ್, ಮೊಹಮ್ಮದ್ ರಿಜ್ವಾನ್ ಜೋಕಟ್ಟೆ, ಆದಿಲ್ ಮೆಹರೂಫ್ ಎಂಬವರು ಬಂಧಿತ ಆರೋಪಿಗಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದ.ಕ ಜಿಲ್ಲೆ ಕೋಮು ಘಟನೆಗೆ ಸಂಬಂಧಿಸಿದಂತೆ ಗಮನ ಸೆಳೆಯುತ್ತಲೇ ಇರುತ್ತದೆ. ಸುಹಾಸ್ ಶೆಟ್ಟಿ ಕೊಲೆ ಕೂಡ ಇದೇ ಭಾವನೆ ಮೂಡಿಸಿತ್ತು. ಆದರೆ, ಜನ ಇದನ್ನು ಬಯಸಲ್ಲ. ಜನರು ಶಾಂತಿ ಸುವ್ಯವಸ್ಥೆ ನೆಲೆಗೊಳ್ಳುವಂತೆ ಮಾಡುವುದು ಸರಕಾರದ ಆದ್ಯತೆ ಎಂದು ಪರಮೇಶ್ವರ್ ತಿಳಿಸಿದರು.

ಈ ಘಟನೆ ಮತ್ತು ಅಶ್ರಫ್ ಕೊಲೆ ಕೋಮು ಸೌಹಾರ್ದಕ್ಕೆ ಸವಾಲಾಗಿತ್ತು. 21 ಮಂದಿಯನ್ನು ಅಶ್ರಫ್ ಗುಂಪು ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಶಾಂತಿ ಕದಡುವ ದುಷ್ಟ ಶಕ್ತಿಗಳಿಗೆ ಜಿಲ್ಲೆಯಲ್ಲಿ ಅವಕಾಶ ನೀಡುವುದಿಲ್ಲ. ಅವರು ಯಾವ ಸಮುದಾಯದವರು ಆದರೂ ಸರಿ. ನಮ್ಮ ಉದ್ದೇಶ ಇಲ್ಲಿ ಶಾಂತಿ ಇರಬೇಕು. ಈ ಹಿಂದೆ ಇಲ್ಲಿ ಶಾಂತಿ ಪಾದಯಾತ್ರೆ ನಡೆದಿತ್ತು. ಆ ಬಳಿಕ ಕೋಮು ಸಂಘರ್ಷದ ಘಟನೆ ನಡೆದಿರಲಿಲ್ಲ, ಈಗ ಕೋಮು ಶಕ್ತಿಗಳು ತಲೆ ಎತ್ತಿವೆ. ಇನ್ನುಮುಂದೆ ಇಂತಹ ಘಟನೆ ಮರುಕಳಿಸಬಾರದು ಎಂದು ಟಾಸ್ಕ್ ಫೋರ್ಸ್ ರಚಿಸುತ್ತೇವೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

Anti ನಕ್ಸಲ್ ಫೋರ್ಸ್‌ನಂತೆ, ಯಾರು ಕೋಮು ಸೌಹಾರ್ದ ಕದಡುವ ಕೆಲಸ ಮಾಡುತ್ತಾರೋ ಅಂಥವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ತಿಳಿಸಿದ್ದೇನೆ. Anti ನಕ್ಸಲ್ ಫೋರ್ಸ್‌ನಂತೆ ಉಡುಪಿ, ಮಂಗಳೂರಿನಲ್ಲಿ ANTI COMMUNAL ಫೋರ್ಸ್‌ ರಚನೆ ಮಾಡಿ, ಶಾಂತಿಗಾಗಿ ಕೆಲಸ ಮಾಡುತ್ತೇವೆ. ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...