ಮಂಗಳೂರು | ಸರ್ಕಾರಿ ಶಾಲಾ ಆವರಣದಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ: ವಿಡಿಯೋ ವೈರಲ್

Date:

ಸರಕಾರಿ ಶಾಲೆಗಳಲ್ಲಿ ಸರಕಾರಿ ಸಂಬಂಧಿತ ಕಾರ್ಯಕ್ರಮಗಳನ್ನು ಮಾತ್ರ ನಡೆಸಬೇಕು. ಸಾರ್ವಜನಿಕ ಕಾರ್ಯಕ್ರಮಗಳಿಗೆ ಶಾಲೆಯ ಆವರಣವನ್ನು ಬಳಕೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಈ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲೆಯ ಆವರಣದಲ್ಲಿ ಆರ್‌ಎಸ್‌ಎಸ್ ಶಾಖೆ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ.

ಮಂಗಳೂರು ತಾಲೂಕಿನ ಸುರತ್ಕಲ್ ಸಮೀಪದಲ್ಲಿರುವ ಮಂಗಳಪೇಟೆಯಲ್ಲಿರುವ ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆರ್‌ಎಸ್‌ಎಸ್ ಶಾಖೆ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸರಕಾರದ ಆದೇಶ ಮೀರಿ ಶಾಲಾ ಆವರಣದಲ್ಲಿ ಸಂಘದ ಚಟುವಟಿಕೆ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಶಾಲೆಯಿಂದ ಗ್ರಾಮ ಪಂಚಾಯತ್ ಹಾಗೂ ಶಿಕ್ಷಣ ಇಲಾಖೆಗೆ ಮಾಹಿತಿ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಫಲಶೃತಿ | ಬೆಳಗಾವಿ: ಶಾಲಾ ಶೌಚಾಲಯ ಸಮಸ್ಯೆ; ತಾತ್ಕಾಲಿಕ ಪರಿಹಾರ ಕಲ್ಪಿಸಿದ ಅಧಿಕಾರಿಗಳು

ಅಂದ ಹಾಗೆ, ಈ ಶಾಲೆಯಲ್ಲಿ ಪ್ರತಿ ರವಿವಾರ ಸಂಘಪರಿವಾರದ ಕಾರ್ಯ ಚಟುವಟಿಕೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಆರ್ ಎಸ್ ಎಸ್ ಶಾಖೆ ನಡೆಸಲು ಅವಕಾಶ ಕೊಟ್ಟಿರುವುದು ಯಾರು ಎಂಬ ಪ್ರಶ್ನೆ ಕೂಡ ಎದ್ದಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಏನು ಕ್ರಮ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...