ಮಂಗಳೂರು | ಸಲೂನ್‌ಗೆ ನುಗ್ಗಿ ದಾಂಧಲೆ ಪ್ರಕರಣ; ಬಂಧಿತರಲ್ಲಿ ಓರ್ವ ಸ್ಥಳೀಯ ಪತ್ರಕರ್ತ!

Date:

ಜನವರಿ 23 ರಂದು ಮಂಗಳೂರಿನ ಬಿಜೈ ಕೆಎಸ್‌ಆರ್‌ಟಿಸಿ ಬಳಿ ಅದಿತ್ಯ ಕಾಂಪ್ಲೆಕ್ಸ್‌ನಲ್ಲಿರುವ ‘ಕಲರ್ಸ್’ ಎಂಬ ಯೂನಿಸೆಕ್ಸ್ ಸಲೂನ್‌ಗೆ ದಾಳಿ ನಡೆಸಿದ ಘಟನೆ ಸಂಬಂಧ ಪ್ರಮುಖ ಆರೋಪಿ ಪ್ರಸಾದ್ ಅತ್ತಾವರ ಸೇರಿ 14 ಮಂದಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. 14 ಮಂದಿ ಬಂಧಿತರ ಪೈಕಿ ಓರ್ವ ಸ್ಥಳೀಯ ಪತ್ರಕರ್ತನನ್ನೂ ಕೂಡ ಪೊಲೀಸರು ಬಂಧಿಸಿರುವ ವಿಚಾರ ಬೆಳಕಿಗೆ ಬಂದಿದೆ.

ದಾಂಧಲೆ ನಡೆಸಲಿದ್ದಾರೆ ಎಂಬ ಸುದ್ದಿ ಸಿಕ್ಕಿದ ತಕ್ಷಣ ಕ್ಯಾಮರಾ ಹಿಡಿದುಕೊಂಡು ‘EXCLUSIVE’ ದೃಶ್ಯ ಹಿಡಿಯಲೆಂದು ಹೋಗಿದ್ದ ಸ್ಥಳೀಯ ಕ್ಯಾಮರಾಮೆನ್‌ ಬಂಧಿತ ಆರೋಪಿಗಳ ಪೈಕಿ ಓರ್ವ ಎಂದು ತಿಳಿದುಬಂದಿದೆ.

ಬಂಧಿತ ಸ್ಥಳೀಯ ಪತ್ರಕರ್ತನನ್ನು ಮಂಗಳೂರಿನ ಮಂಕಿ ಸ್ಟ್ಯಾಂಡ್‌ನ ಅಮರ್ ಆಳ್ವ ರಸ್ತೆಯ ನಿವಾಸಿ, ಕ್ಯಾಮೆರಾ ಮ್ಯಾನ್ ಶರಣ್ ರಾಜ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಗೆ ಸಂಬಂಧಿಸಿ ಪ್ರತಿಯೊಬ್ಬ ವ್ಯಕ್ತಿಯ ನಿರ್ದಿಷ್ಟ ಪಾತ್ರ, ಇತರರ ಪಾಲ್ಗೊಳ್ಳುವಿಕೆಯ ಬಗ್ಗೆಯೂ ಮತ್ತಷ್ಟು ತನಿಖೆ ಮಾಡಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಪಬ್‌ ದಾಳಿಯಲ್ಲೂ ಬಂಧನಕ್ಕೊಳಗಾಗಿದ್ದ!

ಕ್ಯಾಮೆರಾ ಆಪರೇಟರ್ ಶರಣ್ ರಾಜ್ ಈ ಹಿಂದೆ ಅಂದರೆ 2012ರ ಜುಲೈ 28ರಂದು ಮಂಗಳೂರಿನ ಹೋಮ್ ಸ್ಟೇ ಒಂದರಲ್ಲಿ ಯುವಕ-ಯುವತಿಯರ ಗುಂಪು ಹುಟ್ಟುಹಬ್ಬ ಆಚರಿಸುತ್ತಿದ್ದರು. ಈ ವೇಳೆ, ಅದನ್ನು ರೇವ್ ಪಾರ್ಟಿ ಎಂದು ಆರೋಪಿಸಿ 13 ಯುವಕ ಯುವತಿಯರ ಮೇಲೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿದ್ದರು. ಹಲ್ಲೆಯ ವೀಡಿಯೊಗಳು ಸುದ್ದಿ ವಾಹಿನಿಗಳಲ್ಲಿ ವಾರಗಟ್ಟಲೆ ಪ್ರಸಾರವಾಗುವ ಮೂಲಕ ಈ ಪ್ರಕರಣ ದೇಶಾದ್ಯಂತ ಗಮನ ಸೆಳೆದಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಮಾಡುವ ಮೂಲಕ ಪತ್ರಕರ್ತರಾದ ನವೀನ್ ಸೂರಿಂಜೆ ಅವರು ದೇಶದ ಗಮನ ಸೆಳೆದಿದ್ದರು. ‘ಮಂಗಳೂರಿನ ಮಾನ ಹರಾಜು ಮಾಡಿದ್ದಾರೆ’ ಎಂದು ಆರೋಪಿಸಿ, ಪ್ರಕರಣ ದಾಖಲಿಸಿದ್ದರಿಂದ ಪತ್ರಕರ್ತ ನವೀನ್ ಸೂರಿಂಜೆ ಅವರನ್ನೂ ಕೂಡ ಬಂಧಿಸಲಾಗಿತ್ತು. ಆ ಬಳಿಕ ಅವರು ಬಿಡುಗಡೆಗೊಂಡಿದ್ದರು.

ಮಂಗಳೂರಿನ ಪಡೀಲ್‌ನಲ್ಲಿರುವ ಮಾರ್ನಿಂಗ್ ಮಿಸ್ಟ್ ಹೋಮ್ ಸ್ಟೇನಲ್ಲಿ ನಡೆದ ದಾಳಿಯ ವೇಳೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರ ಜೊತೆಗೆ ಸೇರಿ ದಾಳಿ ಮಾಡಿದ್ದ ಆರೋಪದಲ್ಲಿ ಕೂಡ ಕ್ಯಾಮೆರಾ ಆಪರೇಟರ್ ಶರಣ್ ರಾಜ್ ಬಂಧನಕ್ಕೊಳಗಾಗಿದ್ದರು. ಪಬ್‌ ದಾಳಿ ಪ್ರಕರಣ 12 ವರ್ಷಗಳ ಬಳಿಕ ಪ್ರಕರಣ ಮುಗಿದಿದೆ. ಹಲ್ಲೆ ನಡೆಸಿದ್ದ ಎಲ್ಲ ಆರೋಪಿಗಳನ್ನು ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಖುಲಾಸೆಗೊಳಿಸಿದೆ. ನ್ಯಾಯಮೂರ್ತಿ ಎಸ್.ವಿ. ಕಾಂತರಾಜು ಅವರು 2024ರ ಆಗಸ್ಟ್ 6ರಂದು ಎಲ್ಲ 39 ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

ದಾಳಿ ನಡೆಯುವ ಬಗ್ಗೆ ಮಾಹಿತಿ ಇದ್ದರೂ ಕೂಡ ಪೊಲೀಸರಿಗೆ ತಿಳಿಸದೇ ಕ್ಯಾಮರಾ ಹಿಡಿದುಕೊಂಡು ರೆಕಾರ್ಡ್‌ ಮಾಡಲು ಹೋಗಿರುವುದರಿಂದ ಪೊಲೀಸರು ಶರಣ್ ರಾಜ್ ಅವರನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ. ಅಲ್ಲದೇ, ಮಂಗಳೂರು ಪೊಲೀಸರು ಹೊರಡಿಸಿರುವ ಪ್ರಕಟಣೆಯಲ್ಲೂ ‘ಕ್ಯಾಮರಾ ಮೆನ್’ ಎಂದು ಉಲ್ಲೇಖಿಸಿದ್ದಾರೆ.

12 8
ಮಂಗಳೂರು ಪೊಲೀಸರು ಹೊರಡಿಸಿರುವ ಪ್ರಕಟಣೆ

ಕೆಲವೇ ತಿಂಗಳ ಹಿಂದೆ ಈ ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ಸ್ಥಳೀಯ ಪತ್ರಕರ್ತ ಶರಣ್ ರಾಜ್ ಮತ್ತೆ ಇಂಥದ್ದೇ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವುದು ವಿಪರ್ಯಾಸವೇ ಸರಿ.

ಒಟ್ಟು 14 ಮಂದಿಯ ಬಂಧನ

ಜ.23ರ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಮಂಗಳೂರು ಪೊಲೀಸರು 14 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಪ್ರಸಾದ್ ಅತ್ತಾವರ, ಹರ್ಷರಾಜ್, ಮೋಹನ್ ದಾಸ್, ಪುರಂದರ, ಸಚಿನ್, ರವೀಶ್, ಸುಕೇತ್, ಅಂಕಿತ್, ಕಾಳಿ ಮುತ್ತು, ಅಭಿಲಾಷ್, ದೀಪಕ್, ವಿಘ್ನೇಶ್, ಶರಣ್ ರಾಜ್, ಪ್ರದೀಪ್ ಪೂಜಾರಿ ಎಂದು ಗುರುತಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...