ಮಂಗಳೂರು | ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 1 ವರ್ಷ ಸಜೆ

Date:

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನಿಗೆ 1 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಮಂಗಳೂರು ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಪೋಕ್ಸೋ ಎಫ್‌ಟಿಎಸ್‌ಸಿ-1) ತೀರ್ಪು ನೀಡಿದೆ.

ದೇಶದಲ್ಲಿ ಬಿಎನ್‌ಎಸ್‌ (ಭಾರತೀಯ ನ್ಯಾಯ ಸಂಹಿತೆ) ಕಾನೂನು ಜಾರಿಗೆ ಬಂದ ಬಳಿಕ ನೋಂದಣಿಯಾದ ಪೋಕ್ಸೋ ಪ್ರಕರಣದ ಮೊದಲ ತೀರ್ಪು ಇದಾಗಿದ್ದು, ಕೇವಲ ಮೂರುವರೆ ತಿಂಗಳಲ್ಲಿ ತೀರ್ಪು ಪ್ರಕಟವಾಗಿದೆ. ಮೆಕ್ಯಾನಿಕ್‌ ಆಗಿ ಕೆಲಸ ಮಾಡಿಕೊಂಡಿದ್ದ 24 ವರ್ಷದ ಯುವಕನೇ ಶಿಕ್ಷೆಗೀಡಾದ ಅಪರಾಧಿ.

2024ರ ಅಕ್ಟೋಬರ್‌ ತಿಂಗಳಿನಲ್ಲಿ ಹಲವು ಬಾರಿ ಬೈಕ್‌ನಿಂದ ಬಂದು ಅಡ್ಡಗಟ್ಟಿ ಲೈಂಗಿಕ ಕಿರುಕುಳ ನೀಡಿದ್ದನು. ಈ ಬಗ್ಗೆ ವೇಣೂರು ಪೊಲೀಸ್‌ ಠಾಣೆಯಲ್ಲಿ ಸೆಕ್ಷನ್‌ 12ರಡಿ ಪೋಕ್ಸೋ ಮತ್ತು ಬಿಎನ್‌ಎಸ್‌ 78ರ ಅಡಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಮಂಗಳೂರು | ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು

ವಿಚಾರಣೆ ನಡೆಸಿದ ನ್ಯಾಯಾಲಯವು ಅಪರಾಧಿಗೆ 1 ವರ್ಷ ಸಜೆ ಮತ್ತು 10 ಸಾವಿರ ದಂಡ ವಿಧಿಸಿದೆ. ದಂಡ ತೆರಲು ತಪ್ಪಿದರೆ ಹೆಚ್ಚುವರಿ 2 ತಿಂಗಳು ಶಿಕ್ಷೆ ಅನುಭವಿಸಬೇಕು. ಸಂತ್ರಸ್ತ ವಿದ್ಯಾರ್ಥಿನಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 1 ಲಕ್ಷ ರೂ. ಪರಿಹಾರ ನೀಡಬೇಕೆಂದು ನ್ಯಾಯಾಲಯ ನಿರ್ದೇಶನ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...