ಮಂಗಳೂರು | ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋಗೆ ಪಿಕಪ್ ವಾಹನ ಡಿಕ್ಕಿ: ವಿದ್ಯಾರ್ಥಿನಿ ಮೃತ್ಯು; ಮೂವರಿಗೆ ಗಾಯ

Date:

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾವೊಂದಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿಯೋರ್ವಳು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಬಡಕಬೈಲ್‌ನ ಕಲ್ಪಾದೆ ಎಂಬಲ್ಲಿ ಈ ದುರ್ಘಟನೆ ನಡೆದಿದ್ದು, ವಿದ್ಯಾರ್ಥಿನಿ ಆಯಿಷಾ ವಹಿಬಾ ಮೃತಪಟ್ಟಾಕೆ ಎಂದು ತಿಳಿದುಬಂದಿದೆ.

ಬಡಕಬೈಲು ನಿವಾಸಿ ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿಯಾಗಿರುವ 4ನೇ ತರಗತಿಯ ವಿದ್ಯಾರ್ಥಿನಿ ಆಯಿಷಾ ವಹಿಬಾ (11 ), ದೇರಳಕಟ್ಟೆ ನೇತಾಜಿ ಶಾಲೆಯಲ್ಲಿ ಕಲಿಯುತ್ತಿದ್ದಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ಆಟೋ ರಿಕ್ಷಾಗೆ ಕಲ್ಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗದಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ರಿಕ್ಷಾ ಪಲ್ಟಿಯಾಗಿ ಆಯಿಷಾ ವಹಿಬಾ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾಳೆ.

ಇದನ್ನು ಓದಿದ್ದೀರಾ? ಮಂಗಳೂರು | ಕಲ್ಲಿದ್ದಲು ಬಳಸುತ್ತಿರುವ ಉಳ್ಳಾಲದ ಫಿಶ್‌ಮಿಲ್‌ ಮುಚ್ಚದಿದ್ದಲ್ಲಿ ಹೋರಾಟ : ಬಿ.ಕೆ ಇಮ್ತಿಯಾಝ್

ರಿಕ್ಷಾದಲ್ಲಿದ್ದ ಇತರ ಮೂವರು ವಿದ್ಯಾರ್ಥಿಗಳು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಶಾಲೆಯ ವಿದ್ಯಾರ್ಥಿನಿ ಅಪಘಾತದಲ್ಲಿ ಮೃತಪಟ್ಟ ವಿಚಾರ ತಿಳಿದ ದೇರಳಕಟ್ಟೆ ನೇತಾಜಿ ಶಾಲೆಯ ಮುಖ್ಯ ಶಿಕ್ಷಕಿ ಶಾಲೆಗೆ ರಜೆ ಘೋಷಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...