ಮಂಗಳೂರು | ‌ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Date:

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ ಅವರು ಸನ್ಮಾನಿಸಿದರು.

ವಾಣಿಜ್ಯ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ ಕೆನರಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ದೀಪಶ್ರೀ ಹಾಗೂ ವಿಜ್ಞಾನ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ ಎಕ್ಸ್‌ಪರ್ಟ್ ಕಾಲೇಜಿನ ಅಮೂಲ್ಯ ಕಾಮತ್ ಅವರನ್ನು ಜಿಲ್ಲಾಧಿಕಾರಿ ಕಚೇರಿಗೆ ಕರೆಸಿ, ಶಾಲು ಹೊದಿಸಿ, ಹಾರ ಫಲಪುಷ್ಪ ನೀಡಿ ಸನ್ಮಾನಿಸಿಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಆನಂದ್ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

WhatsApp Image 2025 04 09 at 9.40.56 AM

ಬಳಿಕ ವಿದ್ಯಾರ್ಥಿಗಳೊಂದಿಗೆ ಅವರು ಸಮಾಲೋಚನೆ ನಡೆಸಿ, ಕಲಿಕಾ ವಿಧಾನ, ಅಧ್ಯಯನ, ಶ್ರದ್ಧೆ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ವಿದ್ಯಾರ್ಥಿಗಳ ಸಾಧನೆಗೆ ಬೆನ್ನೆಲುಬಾಗಿ ನಿಂತ ಪಾಲಕರು, ಶಿಕ್ಷಕರನ್ನು ಅಭಿನಂದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಗಳೂರು | ಕೋಮುವಾದದ ಹೆಸರಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ನಿಲ್ಲಲಿ: ರಾಧಾ ಮೂಡಬಿದ್ರೆ

ಈ ವೇಳೆ ಅಮೂಲ್ಯ ಕಾಮತ್ ಪಾಲಕರಾದ ಡಾ. ದಿನೇಶ್ ಕಾಮತ್ ಮತ್ತು ಡಾ. ಅನುರಾಧ ಕಾಮತ್, ದೀಪಶ್ರೀ ಪಾಲಕರಾದ ಅಶೋಕ್ ಎಸ್. ಮತ್ತು ಸುಮಾ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಧರ್ ಎಚ್.ಜಿ., ಇಲಾಖೆಯ ಶಾಖಾಧಿಕಾರಿ ನಿತಿನ್ ಶೆಟ್ಟಿ, ಕೆನರಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಲತಾ ಮಹೇಶ್ವರಿ, ಎಕ್ಸ್‍ಪರ್ಟ್ ಕಾಲೇಜಿನ ಪ್ರಾಂಶುಪಾಲ ರಾಮಚಂದ್ರ ಭಟ್ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...