ಮಂಗಳೂರು | ಜೆರೋಸಾ ಶಾಲೆಯ ಬಗ್ಗೆ ಅಪಪ್ರಚಾರದ ಆಡಿಯೋ ವೈರಲ್ ಮಾಡಿದ ಶಿಕ್ಷಕಿ ವಜಾ

Date:

ಮಂಗಳೂರು ನಗರದ ಜೆರೋಸಾ ಶಾಲೆಯ ಬಗ್ಗೆ ಅಪಪ್ರಚಾರದ ಆಡಿಯೋ ವೈರಲ್ ಮಾಡಿದ ತೊಕ್ಕೊಟ್ಟು ಸೈಂಟ್ ಸೆಬಾಸ್ಟಿಯನ್ ಶಾಲೆಯ ಶಿಕ್ಷಕಿಗೆ ಕವಿತಾ ಅವರಿಗೆ ಅಲ್ಲಿನ ಶಾಲಾಡಳಿತ ಮಂಡಳಿ ಗೇಟ್ ಪಾಸ್ ನೀಡಿದೆ.

ಕವಿತಾ ತೊಕ್ಕೊಟ್ಟು ಸೈಂಟ್ ಸೆಬಾಸ್ಟಿಯನ್ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಕವಿತಾ ಅವರ ಪುತ್ರಿ ಜೆರೋಸಾ ಶಾಲೆಯ ವಿದ್ಯಾರ್ಥಿನಿಯಾಗಿದ್ದರು. ಜೆರೋಸಾ ಶಾಲೆಯಲ್ಲಿ ಸಿಸ್ಟರ್ ಹಿಂದೂ ಧರ್ಮನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಮಾತುಕತೆ ನಡೆಸಿದ ಆಡಿಯೋವೊಂದನ್ನು ಕವಿತಾ ವೈರಲ್ ಮಾಡಿದ್ದರು.

ಈ ಘಟನೆಯ ಬೆನ್ನಿಗೆ ಜೆರೋಸಾ ಶಾಲೆಗೆ ವಿಶ್ವಹಿಂದೂ ಪರಿಷತ್ ಹಾಗೂ ಬಿಜೆಪಿ ಕಾರ್ಯಕರ್ತರು, ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಮುತ್ತಿಗೆ ಹಾಕಿದ್ದರು. ತನಿಖೆಯ ವೇಳೆ ಈ ಆಡಿಯೋವನ್ನು  ಜೆರೋಸಾ ಶಾಲೆಯ ವಿದ್ಯಾರ್ಥಿನಿಯ ಪೋಷಕಿಯಾಗಿರುವ ಕವಿತಾ ಅವರು ಮಾಡಿದ್ದರು ಎಂಬುದಾಗಿ ವಿಷಯ ಬಹಿರಂಗಗೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾಸ್ತವವಾಗಿ ಪೋಷಕಿ ಕವಿತಾ ಅವರು ಕೂಡ ಇನ್ನೊಂದು ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು, ಅವರು ತೊಕ್ಕೊಟ್ಟು ಸೈಂಟ್ ಸೆಬಾಸ್ಟಿಯನ್ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಜೆರೋಸಾ ಶಾಲೆಯ ಪ್ರಕರಣ ವ್ಯಾಪಕ ಪ್ರಚಾರ ಪಡೆದು, ಪರ ವಿರೋಧ ಸಂಘರ್ಷದ ವಾತಾವರಣ ಉಂಟುಮಾಡಿ ಸಮಾಜದ  ಸೌಹಾರ್ದಕ್ಕೆ ಧಕ್ಕೆ ಮಾಡಿದೆ ಎಂಬ ಕಾರಣಕ್ಕೆ ಕವಿತಾ ಅವರನ್ನು ಅವರು ಕೆಲಸ ಮಾಡುತ್ತಿದ್ದ ಸಂಸ್ಥೆ ಸೇವೆಯಿಂದ ವಜಾಗೊಳಿಸಿದೆ.

ತನ್ನ ಸೇವೆ ಇನ್ನು ನಮಗೆ ಅಗತ್ಯವಿಲ್ಲ ಎಂದು ಸೆಬಾಸ್ಟಿಯನ್ ಶಾಲೆಯ ಆಡಳಿತ ಮಂಡಳಿ ತಿಳಿಸಿ ನನ್ನನ್ನು ಕಳುಹಿಸಿದ್ದಾರೆ, ನನ್ನ ಸೇವೆ ಅವರಿಗೆ ಅಗತ್ಯವಿಲ್ಲ ಎಂದು ಶಾಲೆಯವರು ನೇರವಾಗಿ ಹೇಳಿರುವುದರಿಂದ ನಾನು ಕೂಡ ಮರು ಪ್ರಶ್ನೆ ಮಾಡದೆ ಉದ್ಯೋಗಕ್ಕಾಗಿ ಬಯಸದೆ ಹೊರ ಬಂದಿದ್ದೇನೆ ಎಂದು ಕವಿತಾ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕವಿತಾರ ಪುತ್ರಿ ಜೆರೋಸಾ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ.

ಇನ್ನೊಂದು ಶಾಲೆಯ ಬಗ್ಗೆ ಅಪಪ್ರಚಾರ ನಡೆಸಿದ ಕಾರಣಕ್ಕೆ ತನ್ನ ಶಾಲೆಯ ಶಿಕ್ಷಕಿಯನ್ನು ಸೇವೆಯಿಂದ ವಜಾ ಮಾಡಿದ ಸೆಬಾಸ್ಟಿಯನ್ ಶಾಲಾ ಆಡಳಿತ ಮಂಡಳಿ ಶಾಲೆಯಿಂದ ವಜಾಗೊಂಡ ಬಳಿಕ ವಾಟ್ಸಪ್ ಮೂಲಕ ಬೆದರಿಕೆ ಕರೆ ಬಂದಿರುವ ಬಗ್ಗೆ ಶಿಕ್ಷಕಿ ಕವಿತಾ ದೂರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...