ಮಂಗಳೂರು | ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿ ಕೇರಳದ ಶವಾಗಾರದಲ್ಲಿ ಜೀವಂತ!

Date:

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇರಳದ ವ್ಯಕ್ತಿಯೊಬ್ಬರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಬಳಿಕ ಅವರನ್ನು ಕೇರಳದ ಕಣ್ಣೂರು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮೃತವ್ಯಕ್ತಿ ಶವಾಗಾರದಲ್ಲಿ ಜೀವಂತವಾಗಿ ಪತ್ತೆಯಾದ ವಿಚಿತ್ರ ಘಟನೆ ನಡೆದಿದೆ.

ಕೇರಳ ಮೂಲದ ವ್ಯಕ್ತಿಯೊಬ್ಬರನ್ನು ಮಂಗಳೂರಿನ ಖಾಸಗಿ ಆಸ್ಪತೆಗೆ ದಾಖಲಿಸಲಾಗಿತ್ತು. ಬಳಿಕ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲವೆಂದು ಆಸ್ಪತ್ರೆ ಸಿಬ್ಬಂದಿ ಖಚಿತಪಡಿಸಿದ ಬಳಿಕ ಕೇರಳಕ್ಕೆ ಸಾಗಿಸಲಾಗಿತ್ತು. ಇದೇ ವ್ಯಕ್ತಿ ಕೇರಳದ ಕಣ್ಣೂರು ಆಸ್ಪತ್ರೆ ಶವಾಗಾರದಲ್ಲಿ ಜೀವವಾಗಿದ್ದು, ಕೈಗಳು ಚಲನೆಯಾಗಿರುವ ಘಟನೆ ಕಂಡುಬಂದಿದೆ.

ಕಣ್ಣೂರಿನ ಪಚ್ಚಪೊಯಿಕಾ ಮೂಲದ ವೆಳ್ಳುವಕ್ಕಂಡಿಯ ಪವಿತ್ರನ್ ಎಂದು ಗುರುತಿಸಲಾಗಿದ್ದು, ಇವರು ಪಾರ್ಶ್ವವಾಯು ಮತ್ತು ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿದ್ದರು. ಇನ್ನು ಮಂಗಳೂರಿನಿಂದ ಸಂಜೆ 6.30ರ ಸುಮಾರಿಗೆ ಅವರನ್ನು ಆ್ಯಂಬುಲೆನ್ಸ್‌​ನಲ್ಲಿ ಕಣ್ಣೂರಿಗೆ ಕಳುಹಿಸಲಾಗಿತ್ತು. ರಾತ್ರಿ ತುಂಬಾ ತಡವಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲು ಕುಟುಂಬಸ್ಥರು ನಿರ್ಧರಿಸಿದ್ದರು. ರಾತ್ರಿ ಸುಮಾರು 11.30ಕ್ಕೆ, ಶವವನ್ನು ಶವಾಗಾರಕ್ಕೆ ಸ್ಥಳಾಂತರಿಸುವಾಗ, ಕರ್ತವ್ಯದಲ್ಲಿದ್ದ ಅಟೆಂಡರ್ ಜಯನ್ ಅವರು ಅಸಹಜವಾದದ್ದನ್ನು ಗಮನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ್ಯಂಬುಲೆನ್ಸ್‌ ಬಾಗಿಲು ತೆರೆದಾಗ ಮೃತಪಟ್ಟಿದ್ದ ವ್ಯಕ್ತಿಯ ಕೈಗಳು ಅಲುಗಾಡಿದಂತೆ ಭಾಸವಾಗಿತ್ತು. ಬಳಿಕ ಎಕೆಜಿ ಆಸ್ಪತ್ರೆಯ ವೈದ್ಯಕೀಯ ತಂಡ ಕೂಡಲೇ ಮಧ್ಯ ಪ್ರವೇಶಿಸಿ ಪವಿತ್ರನ್ ಬದುಕಿರುವುದನ್ನು ಖಚಿತಪಡಿಸಿದರು. ಇದೀಗ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಸದ್ಯ ಪವಿತ್ರನ್‌ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಈ ಸುದ್ದಿಓದಿದ್ದೀರಾ?: ಮಂಗಳೂರು | ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಹೃದಯಾಘಾತ: ಯುವಕ ನಿಧನ

ಪವಿತ್ರನ್‌ ಚೇತರಿಕೆ ಕಾಣುತ್ತಿರುವ ಬೆನ್ನಲ್ಲೇ ಕುಟುಂಬಸ್ಥರು ಮಂಗಳೂರಿನ ಆಸ್ಪತ್ರೆ ವಿರುದ್ಧ ಆರೋಪ ಮಾಡಿದ್ದು, ಆಕ್ರೋಶ ಹೊರಹಾಕುತ್ತಿದ್ದಾರೆ ಜತೆಗೆ ಮಂಗಳೂರಿನ ಆಸ್ಪತ್ರೆ ವಿರುದ್ಧ ದೂರು ದಾಖಲಿಸಲು ಕುಟುಂಬ ಮುಂದಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...