ಮಂಗಳೂರು | ವಕ್ಫ್ ಪ್ರತಿಭಟನಾಕಾರರು ಸರ್ಕಾರಿ ಕಾರು ಬಳಸಿದ ಆರೋಪ: ಪೊಲೀಸ್‌ ಕಮಿಷನರ್ ಸ್ಪಷ್ಟನೆ

Date:

ಮಂಗಳೂರು ನಗರದ ಅಡ್ಯಾರ್ ಕಣ್ಣೂರು ಬಳಿಯ ಷಾ ಗಾರ್ಡನ್ ಮೈದಾನದಲ್ಲಿ‌ ವಕ್ಫ್‌ ತಿದ್ದುಪಡಿ ಮಸೂದೆ ವಿರೋಧಿಸಿ ಶುಕ್ರವಾರ ನಡೆದ ಪ್ರತಿಭಟನಾ ಸಮಾವೇಶದ ಸಮಯದಲ್ಲಿ ಪೊಲೀಸ್ ಅಧಿಕಾರಿಯವರ ಸರ್ಕಾರಿ ಕಾರನ್ನು ಪ್ರತಿಭಟನಾಕಾರರು ಬಳಸಿರುವ ಕುರಿತು ದೃಶ್ಯ ಮಾಧ್ಯಮ ಪ್ರಸಾರವಾಗುತ್ತಿದ್ದು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿರುವ ಬಗ್ಗೆ ಮಂಗಳೂರು ನಗರ ಮಂಗಳೂರು ನಗರ‌ ಪೊಲೀಸ್‌ ಆಯುಕ್ತರು ಸ್ಪಷ್ಟೀಕರಣ ನೀಡಿದ್ದಾರೆ.

“ಏಪ್ರಿಲ್‌ 18ರಂದು ಸಂಚಾರ ಬಂದೋಬಸ್ತು ಕರ್ತವ್ಯದಲ್ಲಿದ್ದ ಎಸಿಪಿ ಸಂಚಾರ ಉಪ ವಿಭಾಗದವರು ಪಡೀಲ್ ಕಡೆಯಿಂದ ಕಾರ್ಯಕ್ರಮದ ಸ್ಥಳದ ಕಡೆಗೆ ತಮ್ಮ ಇಲಾಖಾ ವಾಹನ ಮೂಲಕ ಬಂದು ಇಳಿದು ಅಲ್ಲಿ ಮುಖ್ಯ ದ್ವಾರದ ಬಳಿ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ್ದಾರೆ. ಕಾರ್ಯಕ್ರಮ ಮುಗಿದ ಬಳಿಕ ಎಸಿಪಿಯವರು ಮಂಗಳೂರು ನಗರ ಕಡೆಗೆ ಸಂಚಾರ ನಿಯಂತ್ರಿಸುವ ಕರ್ತವ್ಯಕ್ಕೆ ಬರಲು ಹೆದ್ದಾರಿಯ ರಸ್ತೆ ವಿಭಜಕ ದಾಟಿ ಮುಂದೆ ಅಡ್ಯಾರು ಕಟ್ಟೆ ಬಳಿ ಟರ್ನ್ ಮಾಡಿ ವಾಪಾಸ್‌ ಬರಲು ಅವರ ಚಾಲಕರಿಗೆ ಸೂಚಿಸಿದ್ದಾರೆ. ವಾಹನ ಚಾಲಕ ಬೈರೇಗೌಡ ಅವರು ಅಡ್ಯಾರು ಕಟ್ಟೆ ಬಳಿ ಬ್ಯಾರಿಕೇಡ್ ಹಾಕಿದ್ದ ಕಾರಣ ಸಹ್ಯಾದ್ರಿ ಕಡೆ ಹೋಗುತ್ತಿದ್ದರು” ಎಂದು ತಿಳಿಸಿದ್ದಾರೆ.

1000191374

“ಎಸಿಪಿಯವರು ಹೋಗುವ ಸ್ವಲ್ಪ ಸಮಯದ ಹಿಂದೆ ಅಡ್ಯಾರ್ ಗಾರ್ಡನ್ ಬಳಿ ಸಂಜೆಯ ಸುಮಾರು 7.30ಕ್ಕೆ ಟೆಂಪೋ ಟ್ರಾವೆಲರ್ ವಾಹನ ಚಾಲಕನ ಅತೀ ವೇಗ ಮತ್ತು ಅಜಾಗರೂಕತೆ ಚಾಲನೆಯಿಂದ, ಕಾರ್ಯಕ್ರಮ ಮುಗಿಸಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ(16 ವರ್ಷ) ಡಿಕ್ಕಿ ಹೊಡೆದು ಬಲಗಾಲಿನ ಪಾದದ ಮೇಲೆ ಚಕ್ರ ಹಾದುಹೋಗಿದೆ. ಇದರಿಂದ ಬಾಲಕ ಗಾಯಗೊಂಡ ಪರಿಣಾಮ ಸುಮಾರು ಜನ ಸೇರಿದ್ದರು. ಅಲ್ಲೇ ಪಕ್ಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿಗಳು ಮತ್ತು ಗಾಯಾಳುವಿನ ಕಡೆಯವರು ಎಸಿಪಿಯವರ ವಾಹನ ನಿಲ್ಲಿಸಿ, ಗಾಯಾಳುವನ್ನು ಚಿಕಿತ್ಸೆಗಾಗಿ ಕಳುಹಿಸಿಕೊಟ್ಟಿದ್ದಾರೆ. ಬಳಿಕ ಸದರಿ ಗಾಯಾಳುವನ್ನು ಜನಪ್ರಿಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000191351
ರೀಲ್ಸ್ ಪ್ರಸಾರ ಮಾಡಿದ್ದ ಉದಯವಾಣಿ ದಿನಪತ್ರಿಕೆ

“ಅಪಘಾತ ಮಾಡಿರುವ ಟೆಂಪೋ ಟ್ರಾವೆಲರ್ ಸಂಖ್ಯೆ: ಕೆಎ 70 9888 ಮತ್ತು ಅದರ ಚಾಲಕನನ್ನು ಪೊಲೀಸ್ ಸಿಬ್ಬಂದಿ ಆನಂದ ಎಂಬುವವರ ಮೂಲಕ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಗೆ ಕಳುಹಿಸಿಕೊಟ್ಟಿದ್ದು, ಇದರ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಳ್ಳಾಲ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಏ.29ರಂದು ಬೃಹತ್ ರ‍್ಯಾಲಿ, ಹಕ್ಕೊತ್ತಾಯ ಸಮಾವೇಶ

“ಅಪಘಾತ ನಡೆಯುವ ಸಮಯದಲ್ಲಿ ಕಾರ್ಯಕ್ರಮ ಪ್ರಯುಕ್ತ ಸದರಿ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಅಪಘಾತಕ್ಕೀಡಾದ ಗಾಯಾಳುವನ್ನು ಚಿಕಿತ್ಸೆ ಕೊಡಿಸುವ ಸಲುವಾಗಿ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಮಹಿಳಾ ಸಿಬ್ಬಂದಿಯವರು ಅದೇ ಸಮಯಕ್ಕೆ ಬರುತ್ತಿದ್ದ ಎಸಿಪಿರವರ ವಾಹನದ ಸಹಾಯದಿಂದ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸುವುದಕ್ಕೆ ಪ್ರಾಮುಖ್ಯತೆ ನೀಡಿದ್ದಾರೆ” ಎಂದರು.

1000191368
ಪಬ್ಲಿಕ್ ಟಿವಿಯ ವೆಬ್ ಸೈಟ್‌ನಲ್ಲಿ ಎಸಿಪಿಯವರ ಫೋಟೋ‌ ಬಳಸಿಕೊಂಡು ಪ್ರಕಟವಾಗಿರುವ ಸುಳ್ಳು ಸುದ್ದಿ

“ಅಪಘಾತದಲ್ಲಿ ಗಾಯವಾದಾಗ ಪ್ರಥಮ ಚಿಕಿತ್ಸೆ(ಗೋಲ್ಡನ್ ಹವರ್) ಕೊಡಿಸುವುದು ಪೊಲೀಸರ ಆದ್ಯ ಕರ್ತವ್ಯವಾಗಿದ್ದು, ಪೊಲೀಸರು ಘಟನೆಯನ್ನು ನೋಡಿ ತಕ್ಷಣ ಕಾರ್ಯ ಪ್ರವೃತ್ತರಾಗಿದ್ದು, ಪೊಲೀಸ್ ಜೀಪಿನ ಚಾಲಕನೊಂದಿಗೆ ಆಸ್ಪತ್ರೆಗೆ ಕಳುಹಿಸಿದ ಸದರಿ ಮಹಿಳಾ ಸಿಬ್ಬಂದಿಯವರು ಕರ್ತವ್ಯ ಮುಂದುವರಿಸಿದ್ದಾರೆ” ಎಂದು ಪೊಲೀಸ್ ಅಧಿಕಾರಿಯವರ ಸರ್ಕಾರಿ ಕಾರನ್ನು ಪ್ರತಿಭಟನಕಾರರು ಬಳಸಿದ್ದಾರೆಂಬ ಮಾತುಗಳಿಗೆ ಸ್ಪಷ್ಟನೆ ನೀಡಿದ್ದಾರೆ.

1000189796

ಈ ರೀತಿ ಪೊಲೀಸರ ಫೋಟೋಗಳನ್ನು ಬಳಸಿಕೊಂಡು ಸುಳ್ಳು ಸುದ್ದಿ ಪ್ರಕಟಿಸಿ ಪೊಲೀಸರ ಕರ್ತವ್ಯಕ್ಕೆ ಚ್ಯುತಿ ತಂದದ್ದು ಮಾತ್ರವಲ್ಲದೇ ಸಮಾಜದಲ್ಲಿ ಅಶಾಂತಿಗೆ ಪ್ರೇರೇಪಿಸುತ್ತಿರುವ ಇಂತಹ ಗೋದಿ ಮಾಧ್ಯಮಗಳ ಮೇಲೆ ಸುಮೊಟೊ ಕೇಸು ದಾಖಲಿಸಬಾರದೇಕೆ? ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...