ಮಂಗಳೂರು | ಜು.24 ರವರೆಗೆ ಕೂಳೂರು ಸೇತುವೆಯಲ್ಲಿ ಸಂಚಾರ ಸ್ಥಗಿತ

Date:

ಕಳೆದ ಹಲವು ದಿನದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ಸಂಪರ್ಕದ ರಸ್ತೆ ಸಂಪೂರ್ಣ ಹಾನಿಯಾಗಿದೆ. ಈ ಸೇತುವೆ ದುರಸ್ತಿಪಡಿಸುವ ಸಲುವಾಗಿ ಜು.21ರ ರಾತ್ರಿ 8 ರಿಂದ 24ರ ಬೆಳಗ್ಗೆ 8 ರವರೆಗೆ ಈ ಸೇತುವೆಯಲ್ಲಿ ವಾಹನಗಳ ಸಂಚಾರವನ್ನು ಪೂರ್ಣವಾಗಿ ಸ್ಥಗಿತಗೊಳಿಸಲು ಎನ್‌ಎಚ್‌ಎಐ ಮುಂದಾಗಿದೆ.

ಇದನ್ನೂ ಓದಿ: ಶಕ್ತಿ ಯೋಜನೆ: ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು

ಈ ಸೇತುವೆ ಸಾರ್ವಜನಿಕರ, ವಾಹನ ಸವಾರರ ಓಡಾಟಕ್ಕೆ ತೊಡಕಾಗಿದೆ. ಆಗಾಗ ಸಣ್ಣಪುಟ್ಟ ದುರಸ್ತಿ ಕೈಗೊಳ್ಳಲಾಗಿದ್ದರೂ ನಿರಂತರ ಮಳೆಯಿಂದಾಗಿ ರಸ್ತೆ ಮತ್ತೆ ಮತ್ತೆ ಹಾಳಾಗುತ್ತಿದೆ. ಸದ್ಯ ಡಾಮಾರೀಕರಣ ಅಸಾಧ್ಯವಾದ ಕಾರಣ ಪೇವರ್ ಬ್ಲಾಕ್‌ಗಳನ್ನು ಸರಿಪಡಿಸಲು ಮುಂದಾಗಿದೆ. ಹಾಗಾಗಿ ಸಾರ್ವಜನಿಕರು, ವಾಹನಿಗರು ಸಹಕರಿಸಬೇಕು ಎಂದು ಎನ್‌ಎಚ್‌ಎಐ ಮನವಿ ಮಾಡಿಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...