ಮಂಗಳೂರು | ತುಳು ಮೌಖಿಕ ಸಾಹಿತ್ಯವು ಇತಿಹಾಸದ ಕೊಂಡಿ: ಡಾ ತುಕಾರಾಂ ಪೂಜಾರಿ

Date:

ತುಳು ನಾಡಿನ ಮೌಖಿಕ ಸಾಹಿತ್ಯವು ಇತಿಹಾಸ ಮತ್ತು ಪರಂಪರೆಗಳ ಕೊಂಡಿ. ತುಳುನಾಡಿನ ಮೌಖಿಕ ಸಾಹಿತ್ಯಿಕ ರೂಪಕಗಳನ್ನು ಉಲ್ಲೇಖ ಮಾಡದೆ ತುಳುನಾಡಿನ ಇತಿಹಾಸವನ್ನು ಕಟ್ಟಿಕೊಡಲು ಸಾಧ್ಯವಿಲ್ಲ ಎಂದು ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ತುಕಾರಾಮ ಪೂಜಾರಿ ಅಭಿಪ್ರಾಯಪಟ್ಟರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಕೂಳೂರಿನ ಯೆನೆಪೋಯ ಕಾಲೇಜಿನ ಭಾಷಾಶಾಸ್ತ್ರ ವಿಭಾಗ ಹಾಗೂ ಸಾಹಿತ್ಯ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ತುಳು ಸಾಹಿತ್ಯ ಸಾಂಸ್ಕೃತಿಕ ಬದುಕು’ ವಿಚಾರ ಕೂಟದಲ್ಲಿ ಅವರು ಮಾತನಾಡಿದರು.

ತುಳು ಭಾಷೆಯಲ್ಲಿರುವ ಸಂಧಿ, ಪಾಡ್ದನ, ಉರಲ್, ಎದುರು ಕಥೆಗಳು ಅಗಾಧವಾದ ಜ್ಞಾನ ಭಂಡಾರದ ಪ್ರತೀಕಗಳಾಗಿವೆ. ಈ ಮೌಖಿಕ ಸಾಹಿತ್ಯಗಳಲ್ಲಿ ಅಪಾರವಾದ ಮಾಹಿತಿಯ ಕಣಜವೇ ಇದೆ. ಈ ಮಾಹಿತಿಯ ಮೂಲಕ ತುಳುನಾಡಿನ ಇತಿಹಾಸ ಹಾಗೂ ಪರಂಪರೆಯನ್ನು ಅರಿತುಕೊಳ್ಳಲು ಸಾಧ್ಯವಾಗುವುದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, “ಶಾಲಾ ಕಾಲೇಜುಗಳಲ್ಲಿ ತುಳು ಭಾಷೆಯ ಕಾರ್ಯಕ್ರಮ ಆಯೋಜಿಸುವ ಮೂಲಕ ಹೊಸ ತಲೆಮಾರಿಗೆ ತುಳುವಿನ ಬಗ್ಗೆ ಅಭಿರುಚಿ, ಅಭಿಮಾನವನ್ನು ಮೂಡಿಸುವ ಕೆಲಸವನ್ನು ಮಾಡಿಕೊಂಡು ಬರಲಾಗುತ್ತಿದೆ” ಎಂದರು.

ಇದನ್ನೂ ಓದಿ: ಮಂಗಳೂರು | ಕುಪ್ಪೆಪದವು, ಇರುವೈಲು ಮಾರ್ಗದಲ್ಲಿ ಸರ್ಕಾರಿ ಬಸ್ ಸೇವೆಗೆ ಒತ್ತಾಯ

ಕಾಲೇಜಿನ ಪ್ರಾಂಶುಪಾಲ ಪ್ರೊ.ಜೀವನ್ ರಾಜ್ ಕುತ್ತಾರ್, ಯೆನೆಪೋಯ ಹೋಮಿಯೋಪಥಿಕ್ ವೈದ್ಯಕೀಯ ಕಾಲೇಜ್ ಹಾಗೂ ಆಸ್ಪತ್ರೆಯ ಅಧೀಕ್ಷಕ ಡಾ. ಶಿವಪ್ರಸಾದ್ ಕೆ, ಉಪ ಪ್ರಿನ್ಸಿಪಾಲರಾದ ಶರೀನಾ ಪಿ, ನಾರಾಯಣ ಸುಕುಮಾರ್ ಎ, ಭಾಷಾಶಾಸ್ತ್ರ ವಿಭಾಗ ಮುಖ್ಯಸ್ಥೆ ಶಾಲಿನಿ ಸಿಕ್ವೇರಾ, ಮಾನವಿಕ ವಿಭಾಗದ ಡೀನ್ ಪ್ರೊ. ವಸಂತ ಕುಮಾರ್, ಅಕಾಡೆಮಿ ಸದಸ್ಯ ಸಂಚಾಲಕ ಪಾಂಗಾಳ ಬಾಬು ಕೊರಗ, ಯೆನೆಪೋಯ ಕಾಲೇಜು ಸಾಹಿತ್ಯ ಸಂಘ ಸಂಯೋಜಕ ಡಾ. ದಿನಕರ ಪಚ್ಚನಾಡಿ, ಉಪನ್ಯಾಸಕಿ ಪ್ರಿಯಾ, ಡಾ.ರತ್ನಾಕರ ಶೆಟ್ಟಿ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...