ಸಂವಿಧಾನ ದಿನದ ಅಂಗವಾಗಿ ಸಂವಿಧಾನ ಪೀಠಿಕೆಯನ್ನು ತುಳು ಭಾಷೆಯಲ್ಲಿ ಓದುವ ಕಾರ್ಯಕ್ರಮ ಮಂಗಳೂರಿನಲ್ಲಿ ಹಲವೆಡೆ ನಡೆಯಿತು.
ಸಂವಿಧಾನ ಪೀಠಿಕೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭಾಷೆಗೆ ಅನುವಾದಿಸಿ ಫಲಕದ ರೂಪದಲ್ಲಿ ಬಿಡುಗಡೆ ಮಾಡಿತ್ತು. ಮಂಗಳೂರಿನ ತುಳು ಭವನ, ಮಂಗಳೂರು ರಥಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಂಗಳೂರು ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ತುಳು ಪರಿಷತ್ ಮಂಗಳೂರು ಘಟಕ , ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜು, ಮುಲ್ಕಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ ಹಲವೆಡೆ ತುಳು ಭಾಷೆಯಲ್ಲಿ ಸಂವಿಧಾನ ಪೀಠಿಕೆಯನ್ನು ಓದುವ ಅಭಿಯಾನ ನಡೆಯಿತು.
ಇದನ್ನೂ ಓದಿ: ಮಂಗಳೂರು | ಬ್ಯಾರಿ ಅಕಾಡೆಮಿಯ ‘ಚಮ್ಮನ’ ಪುರಸ್ಕಾರಕ್ಕೆ 10 ಮಂದಿ ಸಾಧಕರು ಆಯ್ಕೆ
ಸ್ಥಳೀಯರು, ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ ಈ ಕಾರ್ಯಕ್ರಮವು ತುಳು ಭಾಷೆಯ ಸಂವರ್ಧನೆಗೆ ಹೊಸ ಭಾಷಾ-ಚಳವಳಿಯಂತೆ ಪರಿಣಮಿಸಿದೆ ಎಂದು ಆಯೋಜಕರು ಅಭಿಪ್ರಯಾಪಟ್ಟಿದ್ದಾರೆ.





