ಮಂಗಳೂರು ವಿವಿ ಪ್ರಾಧ್ಯಾಪಕ, ಇತಿಹಾಸ ತಜ್ಞ ಡಾ. ಉದಯ‌ ಬಾರ್ಕೂರು ನಿಧನ

Date:

ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ,ಇತಿಹಾಸ ತಜ್ಞ ಡಾ. ಉದಯ ಬಾರ್ಕೂರು(59) ಶುಕ್ರವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ದೇರಳಕಟ್ಟೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಸಂಜೆ 5.30ರ ಸುಮಾರಿಗೆ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಅವರ ಸ್ನೇಹಿತರೋರ್ವರು ಈ ದಿನ.ಕಾಮ್‌ಗೆ ತಿಳಿಸಿದರು.

ರಾಜ್ಯದ ಅತ್ಯುತ್ತಮ ಇತಿಹಾಸಕಾರರಲ್ಲೋರ್ವರಾಗಿದ್ದ ಉದಯ ಬಾರ್ಕೂರು, ಇತ್ತೀಚೆಗೆ ಮಂಗಳೂರು ವಿವಿಯ ನೆಹರೂ ಚಿಂತನ ಕೇಂದ್ರದ ನಿರ್ದೇಶಕರಾಗಿ ಕೂಡ ಆಯ್ಕೆಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಿಪ್ಪು ಸುಲ್ತಾನ್ ಕುರಿತಂತೆ ಹೆಚ್ಚು ಅಧ್ಯಯನ ನಡೆಸಿದ್ದ ರಾಜ್ಯದ ಬೆರಳೆಣಿಕೆಯ ಇತಿಹಾಸಕಾರರಲ್ಲಿ ಉದಯ್ ಬಾರ್ಕೂರು ಕೂಡ ಒಬ್ಬರಾಗಿದ್ದರು. ‘ಟಿಪ್ಪು- ಹೈದರಾಲಿ : ಇತಿಹಾಸ ಕಥನ’ ಎಂಬ ಅವರ ಕೃತಿ ಬಹಳ ಅಮೂಲ್ಯವಾದುದಾಗಿತ್ತು. ಇದಲ್ಲದೇ ಸುಮಾರು ಹತ್ತರಷ್ಟು ಅಮೂಲ್ಯ ಇತಿಹಾಸ ಗ್ರಂಥಗಳನ್ನು‌ ಕನ್ನಡದಲ್ಲಿ ರಚಿಸಿದ್ದಾರೆ.

ಉಡುಪಿ ಜಿಲ್ಲೆಯ ಬಾರ್ಕೂರು ನಿವಾಸಿಯಾಗಿದ್ದ ಇವರು, ದೇರಳಕಟ್ಟೆಯ ನಾಟೇಕಲ್ ಸಮೀಪ ಕುಟುಂಬದೊಂದಿಗೆ ವಾಸವಿದ್ದರು. 33 ವರ್ಷ ಇತಿಹಾಸ ಪ್ರಾಧ್ಯಾಪರಾಗಿ ಸೇವೆ ಸಲ್ಲಿಸುತ್ತಿದ್ದರು. ಮಧ್ಯಕಾಲೀನ ಭಾರತೀಯ ಇತಿಹಾಸ, ಮಧ್ಯಕಾಲೀನ ಕರ್ನಾಟಕ ಮತ್ತು ಕರಾವಳಿಯ ಸಾಮಾಜಿಕ ಇತಿಹಾಸದ, ಎಪಿಗ್ರಫಿ ಸೇರಿದಂತೆ ಸಮಗ್ರ ಜ್ಞಾನ ಹೊಂದಿದ್ದ ಇವರು, ಆಕ್ಸ್‌ಫರ್ಡ್ ವಿವಿಯಿಂದ ಪೊಸ್ಟರಲ್ ಡಾಕ್ಟರೇಟ್ ಪದವಿ ಕೂಡ ಪಡೆದಿದ್ದರು. ಅಲ್ಲದೇ, ಕಾಮನ್ವೆಲ್ತ್ ಫೆಲೋಶಿಪ್ ಕೂಡ ಪಡೆದಿದ್ದರು.

ಮೃತರು ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...