ಮಂಗಳೂರು | ಚಲಿಸುತ್ತಿದ್ದ ಬಸ್‌ನಲ್ಲಿ ಯುವತಿ ಮೇಲೆ ಕಂಡಕ್ಟರ್‌ನಿಂದ ಲೈಂಗಿಕ ದೌರ್ಜನ್ಯ

Date:

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುವ ವೇಳೆ ನಿದ್ದೆಯಲ್ಲಿದ್ದ ಯುವತಿಯ ಮೇಲೆ ಬಸ್‌ನ ಕಂಡಕ್ಟರ್ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಘಟನೆಯ ವಿಡಿಯೋ ಬೆಳಕಿಗೆ ಬಂದಿದ್ದು, ಆರೋಪಿ ಕಂಡಕ್ಟರ್‌ನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಆರೋಪಿ ಕಂಡಕ್ಟರ್‌ನನ್ನು ಬಾಗಲಕೋಟೆ ಮೂಲದ ಪ್ರದೀಪ್ ಎಂದು ಹೆಸರಿಸಲಾಗಿದೆ. ಆತ ಮಂಗಳೂರು ಡಿಪೋದಲ್ಲಿ ಕೆಲಸ ಮಾಡುತ್ತಿದ್ದನೆಂದು ವರದಿಯಾಗಿದೆ.

ಬುಧವಾರ, ಮಂಗಳೂರಿನಿಂದ ಮುಡಿಪು ಮಾರ್ಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ನಗರ ಸಾರಿಗೆಯಲ್ಲಿ ಕಂಡಕ್ಟರ್‌ ಕೃತ್ಯ ಎಸಗಿದ್ದಾನೆ. ಆತನ ಕೃತ್ಯವನ್ನು ಸಹ ಪ್ರಯಾಣಿಕರೊಬ್ಬರು ವಿಡಿಯೋ ಮಾಡಿದ್ದಾರೆ. ವಿಡಿಯೋದಲ್ಲಿ ಆರೋಪಿ ಕಂಡಕ್ಟರ್‌ ಎಸಗಿರುವ ದುಷ್ಕೃತ್ಯ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಡಿಯೋ ಬೆಳಕಿಗೆ ಬಂದ ಕೂಡಲೇ, ಕೊಣಾಜೆ ಪೊಲೀಸ್‌ ಠಾಣೆಯ ಪೊಲೀಸರು ಬಿಎಸ್‌ಎನ್‌ ಸೆಕ್ಷನ್‌ 74, 75 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.

“ಆರೋಪಿ ಕಂಡಕ್ಟರ್ ಹೆಸರು ಪ್ರದೀಪ್ ಎಂದಾಗಿದೆ. ಮಂಗಳೂರಿನಿಂದ ಮುಡಿಪುವಿಗೆ ತೆರಳುವ ಸರ್ಕಾರಿ ಬಸ್‌ನ ವಿಡಿಯೋ ಇದಾಗಿದೆ. ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ಈ ವಿಡಿಯೋ ದೊರೆತ ಕೂಡಲೇ ಆರೋಪಿಯನ್ನು ಅಮಾನತು ಮಾಡಿದ್ದೇವೆ” ಎಂದು ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಜನಿವಾರ ಮತ್ತು ಹಿಜಾಬ್‌: ಯಾರದ್ದು ಪಕ್ಷಪಾತ?

“ಇಂತಹ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ಹಾಗಾಗಿಯೇ ತಕ್ಷಣ ಅವರನ್ನು ಅಮಾನತು ಮಾಡಿದ್ದೇವೆ. ಮುಂದೆ ಆತನ ಮೇಲೆ ವಿಚಾರಣೆ ನಡೆಯಲಿದ್ದು, ವಿಚಾರಣೆಯಲ್ಲಿ ಕಂಡಕ್ಟರ್ ತಪ್ಪಿತಸ್ಥ ಎಂಬುದು ಸಾಬೀತಾದರೆ, ಆತ ನೌಕರಿ ಕಳೆದುಕೊಳ್ಳಲಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಆತ ಲೈಂಗಿಕ ದೌರ್ಜನ್ಯ ಎಸಗುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದ್ದು, ಉದ್ದೇಶಪೂರ್ವಕವಾಗಿ ಯುವತಿಯ ಮೇಲೆ ದೌರ್ಜನ್ಯ ಎಸಗುತ್ತಿದ್ದಾನೆ. ಹಾಗಾಗಿ ಇದು ಗಂಭೀರ ವಿಚಾರವಾಗಿದ್ದು, ಆತನಿಗೆ ತನ್ನನ್ನು ಸಮರ್ಥಿಸಿಕೊಳ್ಳಲು ಕಾರಣಗಳೇ ಇಲ್ಲ” ಎಂದು ರಾಜೇಶ್ ಹೇಳಿದ್ದಾರೆ.

“ಪ್ರಯಾಣಿಕರೊಂದಿಗೆ ಹೇಗೆ ವರ್ತಿಸಬೇಕು ಎಂಬ ಬಗ್ಗೆ ನಮ್ಮ ಸಿಬ್ಬಂದಿಗೆ ಪ್ರತಿದಿನ ನಿರ್ದೇಶನ ನೀಡುತ್ತೇವೆ. ಅದನ್ನು ಡಿಪೋಗಳಲ್ಲಿ ಪುನರಾವರ್ತಿತವಾಗಿ ನೀಡುತ್ತಲೆ ಇರುತ್ತೇವೆ. ಆದರೆ ಎಲ್ಲಾ ಕಡೆಯೂ ಒಬ್ಬರಿಬ್ಬರು ಇಂತವರು ಇದ್ದೇ ಇರುತ್ತಾರೆ. ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಈ ಘಟನೆಯು ವಿಡಿಯೊ ಮಾಡದೆ ಇದ್ದರೆ ನಮಗೆ ತಿಳಿದು ಬರುತ್ತಲೆ ಇರಲಿಲ್ಲ. ಆದ್ದರಿಂದ ಈ ವಿಡಿಯೊ ಮಾಡಿದವರಿಗೆ ಸೆಲ್ಯೂಟ್. ವಿಡಿಯೊ ಸ್ಪಷ್ಟವಾಗಿದ್ದು, ಕಂಡಕ್ಟರ್ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.” ಎಂದು ರಾಜೇಶ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...